ಎಲ್ಲರಿಗೂ ಉನ್ನತ ಶಿಕ್ಷಣ ದೊರೆಯಲಿ: ಕೋರಿ

7

ಎಲ್ಲರಿಗೂ ಉನ್ನತ ಶಿಕ್ಷಣ ದೊರೆಯಲಿ: ಕೋರಿ

Published:
Updated:
ರಾಮಯ್ಯ ಅನ್ವಯಿಕ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಸೋಮವಾರ 2018ನೇ ಸಾಲಿನ ವಾಣಿಜ್ಯ, ನಿರ್ವಹಣೆ ಮತ್ತು ವಿಜ್ಞಾನ ತರಗತಿಗಳನ್ನು ಪ್ರೊ.ಎಸ್‌.ಎ.ಕೋರಿ ಉದ್ಘಾಟಿಸಿದರು 

ಬೆಂಗಳೂರು: ಎಲ್ಲರಿಗೂ ಉನ್ನತ ಶಿಕ್ಷಣ ದೊರೆಯಬೇಕು ಎಂದು ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಕಾರ್ಯನಿರ್ವಾಹಕ ನಿರ್ದೇಶಕ ಪ್ರೊ.ಎಸ್.ಎ.ಕೋರಿ ಹೇಳಿದರು.

ರಾಮಯ್ಯ ಅನ್ವಯಿಕ ವಿಜ್ಞಾನ ವಿಶ್ವವಿದ್ಯಾಲಯ ಸೋಮವಾರ ಆಯೋಜಿಸಿದ್ದ 2018ನೇ ಸಾಲಿನ ವಾಣಿಜ್ಯ, ನಿರ್ವಹಣೆ ಮತ್ತು ವಿಜ್ಞಾನ ತರಗತಿಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಶಿಕ್ಷಣ ಇಲ್ಲದೇ ಯಾವುದೇ ದೇಶದ ಅಭಿವೃದ್ಧಿ ಸಾಧ್ಯವಿಲ್ಲ. ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡುವ ದೇಶ ಆರ್ಥಿಕ, ಸಾಮಾಜಿಕ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿ ಶಕ್ತಿಯುತವಾಗುತ್ತದೆ. ಕೇಂದ್ರ ಸರ್ಕಾರ ಶಿಕ್ಷಣ ಮತ್ತು ಉನ್ನತ ಶಿಕ್ಷಣವನ್ನು ಉತ್ತೇಜಿಸಲು ಖಾಸಗಿ ಸೇರಿದಂತೆ ಇತರ ವಿಶ್ವವಿದ್ಯಾಲಯಗಳಿಗೆ ಅನುಮತಿ ನೀಡಿದೆ. 2012ರಲ್ಲಿ ರಾಜ್ಯ ಸರ್ಕಾರ 22 ವಿಶ್ವವಿದ್ಯಾಲಯಗಳಿಗೆ ಅನುಮತಿ ನೀಡಿತು. 2013 ರಲ್ಲಿ 16 ಖಾಸಗಿ ವಿವಿ ಆರಂಭವಾದವು. ಇವುಗಳ ಪೈಕಿ ಎಂ.ಎಸ್.ರಾಮಯ್ಯ ವಿವಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವುದರಲ್ಲಿ ಮೊದಲ ಸ್ಥಾನದಲ್ಲಿ ಇದೆ. ಉತ್ತಮ ಮೂಲಸೌಕರ್ಯಗಳಿವೆ. ಪರಿಣತ ಉಪನ್ಯಾಸಕರ ವರ್ಗವಿದೆ. ಗುಣಮಟ್ಟದ ಪ್ರಯೋಗಾಲಯವಿದೆ. ಸಂಶೋಧನೆ ಮತ್ತು ಅನ್ವೇಷಣೆಯಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಗೋಕುಲ ಎಜುಕೇಷನ್ ಪೌಂಡೇಷನ್‍ನ ಮುಖ್ಯ ಕಾರ್ಯಕಾರಿ ಎಂ.ಆರ್.ಶ್ರೀನಿವಾಸಮೂರ್ತಿ ಮಾತನಾಡಿ, ‘ಎಂ.ಎಸ್.ರಾಮಯ್ಯ ವಿವಿ ಅಂತಾರಾಷ್ಟ್ರೀಯ ಗುಣಮಟ್ಟದ ಶಿಕ್ಷಣವನ್ನು ತನ್ನ ವಿದ್ಯಾರ್ಥಿಗಳಿಗೆ ನೀಡುತ್ತಿದೆ. ಇದು ಸ್ಪರ್ಧಾತ್ಮಕ ಯುಗ. ಹೀಗಾಗಿ ವಿದ್ಯಾರ್ಥಿಗಳನ್ನು ಸ್ಪರ್ಧೆಗಳಿಗೆ ವಿದ್ಯಾರ್ಥಿಗಳನ್ನು ಸಿದ್ಧತೆ ಮಾಡಿ ವಿವಿಗಳು ಕಳುಹಿಸಬೇಕಿದೆ. ಈ ನಿಟ್ಟಿನಲ್ಲಿ ಎಂಎಸ್ ರಾಮಯ್ಯ ಸದಾ ಮುಂದಿದೆ. ಹೊಸದಾಗಿ ಸೇರ್ಪಡೆಯಾಗಿರುವ ವಿದ್ಯಾರ್ಥಿಗಳಿಗೆ ಎಂಎಸ್‍ಆರ್ ಉತ್ತಮ ವೇದಿಕೆಯಾಗಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ವಿವಿಯ ಹಂಗಾಮಿ ಕುಲಪತಿ ಪ್ರೊ.ಗೋವಿಂದ ಆರ್.ಕಡಂಬಿ, ಕುಲಸಚಿವರಾದ ಡಾ.ಕೆ.ಪುಷ್ಪಾಂಜಲಿ, ಅಕಾಡೆಮಿಕ್ ರಿಜಿಸ್ಟ್ರಾರ್‌ ಡಾ.ಕೆ.ಪುಷ್ಪಾಂಜಲಿ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !