ಹೊಗೆನಕಲ್‌: ತೆಪ್ಪ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ

7
Hogenakkal

ಹೊಗೆನಕಲ್‌: ತೆಪ್ಪ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ

Published:
Updated:
ಹೊಗೆನಕಲ್‌ ಜಲಪಾತ ತುಂಬಿ ಹರಿಯುತ್ತಿರುವುದು

ಹನೂರು (ಚಾಮರಾಜನಗರ): ತಾಲ್ಲೂಕಿನ ಹೊಗೆನಕಲ್‌ ಜಲಪಾತದಲ್ಲಿ ನೀರಿನ ಹರಿವಿನ ಪ್ರಮಾಣ ದಿನೇ ದಿನೇ ಏರಿಕೆಯಾಗುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜಲಪಾತ ವೀಕ್ಷಣೆಗೆ ದೋಣಿ, ತೆಪ್ಪಗಳಲ್ಲಿ ತೆರಳುವುದಕ್ಕೆ ತಾತ್ಕಾಲಿಕ ನಿಷೇಧ ಹೇರಲಾಗಿದೆ.

ನಿರಂತರವಾಗಿ ಮಳೆಯಾಗುತ್ತಿರುವುದು, ಕಬಿನಿ ಜಲಾಶಯದಿಂದ ನೀರು ಹೊರ ಬಿಟ್ಟಿರುವುದರಿಂದ ಕಾವೇರಿ ನದಿ ಹರಿವಿನ ಪ್ರಮಾಣ ಹೆಚ್ಚಾಗಿದೆ. ಇದರಿಂದಾಗಿ ನೀರಿನ ಹರಿವು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಜಲಪಾತದಲ್ಲಿ 80 ಅಡಿಗಳಿಷ್ಟಿದ್ದ ನೀರಿನ ಮಟ್ಟ ಈಗ 150 ಅಡಿಗೆ ತಲುಪಿದೆ.

ಬರಹ ಇಷ್ಟವಾಯಿತೆ?

 • 7

  Happy
 • 2

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !