ಹೊಗೆನಕಲ್‌ ಜಲಪಾತ: ತಾತ್ಕಾಲಿಕ ನಿರ್ಬಂಧ

7
ಪ್ರವಾಸೋದ್ಯಮ ಚಟುವಟಿಕೆ ನಡೆಸದಂತೆ ಅರಣ್ಯ ಇಲಾಖೆ ಸೂಚನೆ

ಹೊಗೆನಕಲ್‌ ಜಲಪಾತ: ತಾತ್ಕಾಲಿಕ ನಿರ್ಬಂಧ

Published:
Updated:
Deccan Herald

ಹನೂರು: ತಾಲ್ಲೂಕಿನ ಹೊಗೆನಕಲ್‌ ಜಲಪಾತದಲ್ಲಿ ನೀರಿನ ಹರಿವು ಹೆಚ್ಚಾಗಿರುವುದರಿಂದ ಪ್ರವಾಸೋದ್ಯಮ ಚಟುವಟಿಕೆಗಳಿಗೆ ಅರಣ್ಯ ಇಲಾಖೆಯು ತಾತ್ಕಾಲಿಕವಾಗಿ ನಿರ್ಬಂಧ ಹೇರಿದೆ.

ಕೆಆರ್‌ಎಸ್‌ ಹಾಗೂ ಕಬಿನಿ ಜಲಾಶಯಗಳಿಂದ ಹೆಚ್ಚಿನ ಪ್ರಮಾಣದ ನೀರನ್ನು ನದಿಗೆ ಹರಿಸಲಾಗುತ್ತಿದೆ. ಇದರಿಂದ ಜಲಪಾತಕ್ಕೆ ಭಾರಿ ಪ್ರಮಾಣದಲ್ಲಿ ನೀರು ಹರಿದುಬರುತ್ತಿದೆ. ನೀರಿನ ಮಟ್ಟ ಕಡಿಮೆ ಆಗುವವರೆಗೂ ಪ್ರವಾಸೋದ್ಯಮ ಚಟುವಟಿಕೆಗಳನ್ನು ನಡೆಸದಂತೆ ಇಲಾಖೆಯು ಸೂಚಿಸಿದೆ.

ಭೀಮನ ಅಮಾವಾಸ್ಯೆ ಪ್ರಯುಕ್ತ ಮಲೆಮಹದೇಶ್ವರ ಬೆಟ್ಟದಲ್ಲಿ ಶನಿವಾರ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತು. ಹೀಗಾಗಿ, ಬೆಟ್ಟಕ್ಕೆ ಸಾವಿರಾರು ಮಂದಿ ಭೇಟಿ ನೀಡಿದ್ದರು. ಈ ಪೈಕಿ ಬಹುತೇಕರು ದೇವರ ದರ್ಶನ ಮುಗಿಸಿಕೊಂಡು ಹೊಗೆನಕಲ್‌ ಜಲಪಾತ ವೀಕ್ಷಣೆಗೆ ಬರುತ್ತಾರೆ. ಆದರೆ, ನೀರಿನ ಮಟ್ಟ ಅಪಾಯಕಾರಿ ಸ್ಥಿತಿಯಲ್ಲಿ ಇರುವುದರಿಂದ ಮುನ್ನೆಚ್ಚರಿಕೆ ಕ್ರಮವನ್ನು ಕೈಗೊಳ್ಳಲಾಗಿದೆ.

ಮಲೆಮಹದೇಶ್ವರ ಬೆಟ್ಟಕ್ಕೆ ಬರುವ ಭಕ್ತರಿಗೆ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿರುವುದು ತಿಳಿದಿರುವುದಿಲ್ಲ. ಹೀಗಾಗಿ, ಮಲೆಮಹದೇಶ್ವರ ಬೆಟ್ಟ, ಪಾಲಾರ್‌ ಹಾಗೂ ಕೊಕ್ಬರೆ ಚೆಕ್‌ಪೋಸ್ಟ್‌ಗಳಲ್ಲಿ ಸಿಬ್ಬಂದಿ ನಿಯೋಜಿಸಿ ಹೊಗೆನಕಲ್‌ಗೆ ವಾಹನಗಳನ್ನು ಹೋಗದಂತೆ ತಡೆಯಲಾಗುತ್ತಿದೆ. ನೀರಿನ ಪ್ರಮಾಣ ಕಡಿಮೆಯಾದ ಕೂಡಲೇ ಜಲಪಾತ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗುತ್ತದೆ ಎಂದು ಕಾವೇರಿ ವನ್ಯಧಾಮದ ಗೋಪಿನಾಥಂ ವನ್ಯಜೀವಿ ವಲಯ ಅರಣ್ಯಾಧಿಕಾರಿ ಶಂಕರ ಡಿ. ಅಂತರಗಟ್ಟಿ ‘ಪ್ರಜಾವಾಣಿ’ಗೆ ತಿಳಿಸಿದರು.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !