ವಿರೋಧದ ಮಧ್ಯೆಯೂ ಮಸೂದೆ ಮಂಡನೆಗೆ ಸಿದ್ಧತೆ

ಶುಕ್ರವಾರ, ಜೂನ್ 21, 2019
24 °C
ಹಾಂಗ್‌ಕಾಂಗ್‌: ಅಪರಾಧಿಗಳ ಹಸ್ತಾಂತರ ಮಸೂದೆ ಖಂಡಿಸಿ ಪ್ರತಿಭಟನೆ

ವಿರೋಧದ ಮಧ್ಯೆಯೂ ಮಸೂದೆ ಮಂಡನೆಗೆ ಸಿದ್ಧತೆ

Published:
Updated:
Prajavani

ಹಾಂಗ್‌ಕಾಂಗ್‌: ಶಂಕಿತ ಅಪರಾಧಿಗಳನ್ನು ವಿಚಾರಣೆಗಾಗಿ ಚೀಮಾ ಮೇನ್‌ಲ್ಯಾಂಡ್‌ಗೆ  ಹಸ್ತಾಂತರಿಸುವ ವಿವಾದಾತ್ಮಕ ಮಸೂದೆಯ ತಿದ್ದುಪಡಿಯನ್ನು ಭಾರಿ ವಿರೋಧದ ನಡುವೆಯೂ ಮಂಡಿಸುವುದಾಗಿ ಹಾಂಗ್‌ಕಾಂಗ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕ್ಯಾರಿ ಲ್ಯಾಮ್‌ ಹೇಳಿದ್ದಾರೆ.

‘ಈ ಶಾಸನವು ನ್ಯಾಯವನ್ನು ಎತ್ತಿ ಹಿಡಿಯಲು ಮತ್ತು ಅಂತರರಾಷ್ಟ್ರೀಯ ಹೊಣೆಗಾರಿಕೆಗಳನ್ನು ನಿಭಾಯಿಸಲು ಹಾಂಗ್‌ಕಾಂಗ್‌ಗೆ ಸಹಕಾರಿಯಾಗಲಿದೆ’ ಎಂದೂ ಅವರು ಹೇಳಿದ್ದಾರೆ. 

ಬೀಜಿಂಗ್‌ನ ಅಣತಿಯಂತೆ ಈ ಮಸೂದೆಯನ್ನು ಮಂಡಿಸಲು ಮುಂದಾಗಿಲ್ಲ ಎಂದೂ ಕ್ಯಾರಿ ಸ್ಪಷ್ಟಪಡಿಸಿದ್ದಾರೆ.  ಮಸೂದೆ ಬುಧವಾರ ಮಂಡನೆಯಾಗಲಿದೆ.

ಒಂದು ಕಾಲದಲ್ಲಿ ಬ್ರಿಟಿಷ್‌ ವಸಾಹತು ಆಗಿದ್ದ ಹಾಂಗ್‌ಕಾಂಗ್‌ನ ಸ್ವತಂತ್ರ ನ್ಯಾಯಾಂಗ ವ್ಯವಸ್ಥೆಯ ಮೇಲೆ ಈ ಮಸೂದೆ ಪರಿಣಾಮ ಬೀರಲಿದೆ ಎಂದು ಪ್ರತಿಭಟನಕಾರರು ಟೀಕಿಸಿದ್ದಾರೆ.

ಮಸೂದೆ ವಿರೋಧಿಸಿ ಭಾನುವಾರ ನಡೆದ ಪ್ರತಿಭಟನೆಯಲ್ಲಿ 10ಲಕ್ಷಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದರು ಎಂದು ಆಯೋಜಕರು ತಿಳಿಸಿದ್ದು, 20 ವರ್ಷಗಳಲ್ಲೇ ನಡೆದ ಅತಿ ದೊಡ್ಡ ಪ್ರತಿಭಟನೆ ಇದು ಎಂದೂ ಹೇಳಿದ್ದಾರೆ.

ಪ್ರತಿಭಟನೆ ಶಾಂತಿಯುತವಾಗಿ ನಡೆದಿತ್ತು. ಆದರೆ ಸೋಮವಾರ ಬೆಳಿಗ್ಗೆ ಕೆಲವು ಕಡೆ ಪ್ರತಿಭಟನಕಾರರು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದಿದೆ. ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಕೆಲವರು ಪೊಲೀಸರತ್ತ ಬಾಟಲಿಗಳನ್ನು ಎಸೆದಿದ್ದಾರೆ. ಜನರನ್ನು ನಿಯಂತ್ರಿಸಲು ಪೊಲೀಸರು ಪೆಪ್ಪರ್‌ ಸ್ಪ್ರೇ ಪ್ರಯೋಗಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಚಾರಣೆಗಾಗಿ ಆರೋಪಿಗಳನ್ನು ಹಾಂಗ್‌ಕಾಂಗ್‌ನಿಂದ ಚೀನಾಗೆ ಕಳುಹಿಸಲು ಈ ತಿದ್ದುಪಡಿ ಅನುವು ಮಾಡಿಕೊಡುತ್ತದೆ. ಹಾಂಗ್‌ಕಾಂಗ್‌ನಲ್ಲಿ ಜನರಿಗೆ ಲಭ್ಯವಿದ್ದ ಹಕ್ಕುಗಳು ಚೀನಾದ ನ್ಯಾಯಾಂಗ ವ್ಯವಸ್ಥೆಯಲ್ಲಿ ಸಿಗಲಾರವು ಎಂದು ಪ್ರತಿಭಟನಕಾರರು ಆತಂಕ ವ್ಯಕ್ತಪಡಿಸಿದ್ದಾರೆ. 


ಪ್ರತಿಭಟನಕಾರರನ್ನು ಪೊಲೀಸರು ಬಂಧಿಸಿದರು –ರಾಯಿಟರ್ಸ್‌ ಚಿತ್ರ

 

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !