ಮಂಗಳವಾರ, 25 ಜೂನ್ 2024
×
ADVERTISEMENT
ಈ ಕ್ಷಣ :
ದಿನ
ವಾರ
ಮಾಸ
ವಾರ್ಷಿಕ
ದಿನ ಭವಿಷ್ಯ: ಈ ರಾಶಿಯವರಿಗೆ ಅನವಶ್ಯಕ ಖರ್ಚು ಹೆಚ್ಚಾಗಲಿದೆ
Published 6 ಜೂನ್ 2024, 0:39 IST
ವಿದ್ಯಾಶಂಕರ ಸೋಮಯಾಜಿ, ಕಮ್ಮರಡಿ
ಮೇಷ
ಹಿಂದಿನಿಂದ ಬಾಕಿ ಇದ್ದ ಆಫೀಸಿನ ಕೆಲಸಗಳನ್ನು ಪೂರ್ತಿಗೊಳಿಸುವ ಪ್ರಯತ್ನ ಮಾಡಿ. ಕಬ್ಬಿಣದ ಮತ್ತು ತಾಮ್ರದ ವ್ಯಾಪಾರಿಗಳಿಗೆ ಹೆಚ್ಚಿನ ಲಾಭ. ಹೊಲದ ಅಥವಾ ಜಮೀನಿನ ಕೆಲಸಕ್ಕೆ ಆಳನ್ನು ಗೊತ್ತು ಮಾಡಿಕೊಳ್ಳುವಿರಿ.
ವೃಷಭ
ಇಂದಿನ ದಿನದ ಪರಿಸ್ಥಿತಿಗಳನ್ನು ಅನುಕೂಲಕ್ಕೆ ತಕ್ಕಂತೆ ರೂಪಿಸಿಕೊಳ್ಳುವ ಪ್ರಯತ್ನದಲ್ಲಿ ಸಫಲರಾಗುವಿರಿ. ಬೋಧನೆಯಲ್ಲಿ ವಿಶೇಷ ಪರಿಣತಿ ಹೊಂದಿರುವ ನಿಮಗೆ ಶಿಷ್ಯರ ಸಂಖ್ಯೆ ವೃದ್ಧಿಯಾಗಲಿದೆ.
ಮಿಥುನ
ಮನೆಯಲ್ಲಿ ನಡೆಯಬೇಕಾದ ಮಂಗಳ ಕಾರ್ಯದ ಕುರಿತು ಹಿರಿಯೊರೊಂದಿಗೆ ಸಮಾಲೋಚನೆ ನಡೆಸುವಿರಿ. ವರ್ತಮಾನ ಸ್ಥಿತಿಯನ್ನು ಅರಿತು ಇಂದಿನ ವ್ಯವಹಾರವಿರಲಿ. ವೈದ್ಯರ ಸಲಹೆಯಂತೆ ವಿಶ್ರಾಂತಿ ಪಡೆಯಿರಿ.
ಕರ್ಕಾಟಕ
ತಾಂತ್ರಿಕ ವಿದ್ಯೆಯಲ್ಲಿ ಯಶಸ್ಸನ್ನು ಹೊಂದುವ ಎಲ್ಲಾ ಲಕ್ಷಣಗಳೂ ಕಂಡರೂ ವಿದ್ಯಾಭ್ಯಾಸಕ್ಕೆ ತೊಂದರೆಯಾಗುವ ಪರಿಸ್ಥಿತಿ ಎದುರಾಗಬಹುದು. ಉದ್ಯೋಗದಲ್ಲಿ ಸಣ್ಣದಾಗಿ ಬದಲಾವಣೆ ಕಂಡುಬರಲಿದೆ.
ಸಿಂಹ
ಅನವಶ್ಯಕ ಖರ್ಚು ಹೆಚ್ಚಾಗಲಿದೆ. ಹಳೆಯ ಕಾರಿನ ಮಾರಾಟ ವಿಷಯ ಕೈಬಿಡುವುದು ಉತ್ತಮ. ಬೆನ್ನು ನೋವು ಹೋಗಲಾಡಿಸಿಕೊಳ್ಳುವ ಸಲುವಾಗಿ ಯೋಗದಲ್ಲಿ ಆಸಕ್ತಿ ಮೂಡಲಿದೆ.
ಕನ್ಯಾ
ಕೋರ್ಟಿನ ಕೆಲಸಗಳನ್ನು ತ್ವರಿತ ಗತಿಯಲ್ಲಿ ನಡೆಸಿಕೊಡುವಂತೆ ವಕೀಲರಲ್ಲಿ ಕೇಳಿಕೊಳ್ಳುವಿರಿ. ಮಾರುಕಟ್ಟೆಯಲ್ಲಿ ಆಗುತ್ತಿರುವ ಬದಲಾವಣೆ ಗಮನಿಸಿ ಷೇರುಗಳನ್ನು ಕೊಳ್ಳುವ ಯೋಜನೆಗೆ ಮುಂದಾಗಿ.
ತುಲಾ
ಮಕ್ಕಳ ವಿಷಯದಲ್ಲಿ ಅಸಡ್ಡೆ ತೋರಿಸಬಾರದು ಎಂಬುವುದು ಅರಿವಾ ಗಲಿದೆ. ಕುಟುಂಬದಲ್ಲಿ ಹಿಂದೆ ನಡೆದ ಕೆಟ್ಟ ವಿಚಾರಗಳ ಬಗ್ಗೆ ಮಾತನಾಡುವುದು ಸಹೋದರರಲ್ಲಿ ಭಿನ್ನಾಭಿಪ್ರಾಯ ಬೆಳೆಯಲು ಕಾರಣವಾಗುತ್ತದೆ.
ವೃಶ್ಚಿಕ
ರಾಜಕಾರಣಿಗಳಿಗೆ ಮತ್ತು ಸರ್ಕಾರಿ ನೌಕರರಿಗೆ ಈ ದಿನ ಸುಯೋಗ. ಎಲ್ಲರೊಂದಿಗೆ ಸಹಕಾರ ಮನೋಭಾವನೆಯಿಂದ ಮತ್ತು ಸರಳತೆಯಿಂದ ಮುಂದುವರಿದಲ್ಲಿ ಯಶಸ್ಸು ಕಂಡುಬರುತ್ತದೆ.
ಧನು
ನೀತಿ ನಿಯಮಗಳಿಗೆ ಬದ್ಧರಾದರೆ, ಉದ್ಯೋಗದಲ್ಲಿ ಹೆದರುವ ಅವಶ್ಯಕತೆ ಕಂಡುಬಾರದು. ಮಾತಿನ ಮೇಲೆ ಆತ್ಮವಿಶ್ವಾಸ ಮತ್ತು ಹಿಡಿತವಿರಲಿ. ಧಾರ್ಮಿಕ ವ್ಯಕ್ತಿಗಳಿಗೆ ಶುಭವಾಗುವುದು.
ಮಕರ
ಸರಕು ಸಾಗಾಣೆದಾರರಿಗೆ ಆದಾಯದಲ್ಲಿ ಹೆಚ್ಚಳ ಕಂಡುಬಂದರೂ, ಕಾರ್ಯದ ಒತ್ತಡದಿಂದ ವೃತ್ತಿಯಲ್ಲಿ ನಿರಾಶೆಯಾಗುವುದು. ಜೀವನ ರೂಪಿಸಿ ಕೊಳ್ಳಲು ನಿರ್ಧರಿಸಿದ ಪ್ರೇಮಿಗಳಿಗೆ ಸ್ಪಂದನೆ ಸಿಗುವ ಅವಕಾಶಗಳಿವೆ.
ಕುಂಭ
ಸ್ನೇಹಿತನಿಗಾಗಿ ಸಮಯ ಮತ್ತು ಹಣವನ್ನು ಖರ್ಚು ಮಾಡುವ ಪರಿಸ್ಥಿತಿ ಬರುವುದು. ಕುಟುಂಬದ ಅಭಿವೃದ್ಧಿಯಲ್ಲಿ ನಿಮ್ಮ ಅವಿರತ ಪ್ರಯತ್ನವು ಫಲಕಾರಿಯಾಗುವುದು.
ಮೀನ
ಆಹಾರ ಪದಾರ್ಥಗಳ ವ್ಯಾಪಾರ ಮಾಡುವವರಿಗೆ ಶ್ರಮಕ್ಕೆ ತಕ್ಕಷ್ಟು ಆದಾಯ ಲಭಿಸಲಿದೆ. ಮನುಷ್ಯ ಪ್ರಯತ್ನದ ಜತೆ ಮಹಾಗಣಪತಿಯ ಮೊರೆ ಹೋಗುವುದರಿಂದ ಕಾರ್ಯ ಸಿದ್ಧಿಯಾಗಲಿದೆ.