ವಾರ ಭವಿಷ್ಯ: 5-1-2025ರಿಂದ 11-1-2025ರವರೆಗೆ; ವಿದೇಶದಲ್ಲಿ ಉದ್ಯೋಗ ಸಿಗುವ ಸಂಭವ
Published 4 ಜನವರಿ 2025, 18:35 IST
ಎಂ.ಎನ್.ಲಕ್ಷ್ಮೀನರಸಿಂಹ ಸ್ವಾಮಿ
ಜ್ಯೋತಿಷ್ಯ ವಿಶಾರದ, ಮಾದಾಪುರ
ಸಂಪರ್ಕ ಸಂಖ್ಯೆ: 8197304680
ಮೇಷ
ನಿಮ್ಮ ಶಕ್ತಿಯನ್ನು ನಿಮಗಾಗಿ ಬಳಸಿಕೊಳ್ಳಿರಿ. ಆದಾಯವು ನಿಮ್ಮ ನಿರೀಕ್ಷೆಯಷ್ಟಿರುತ್ತದೆ. ಸ್ಥಿರಾಸ್ತಿ ವ್ಯವಹಾರದಲ್ಲಿ ಸಾಕಷ್ಟು ಪ್ರಗತಿ ಇರುತ್ತದೆ. ವಿದ್ಯಾರ್ಥಿಗಳಿಗೆ ಉತ್ತಮ ಕಾಲ. ಹೊಟ್ಟೆ ಸಂಬಂಧಿತ ಸಮಸ್ಯೆಗಳು ಕಾಣಿಸಬಹುದು. ಸಂಗಾತಿಯು ನಿಮ್ಮೆಲ್ಲ ಕೆಲಸಗಳಿಗೆ ಬೆಂಗಾವಲಾಗಿ ನಿಲ್ಲುವರು. ವಿದೇಶದಲ್ಲಿರುವವರಿಗೆ ಕೆಲಸ ಕಾರ್ಯಗಳಲ್ಲಿ ಸ್ವಲ್ಪ ಹಿನ್ನೆಡೆಯಾಗಬಹುದು. ನಿಂತಿದ್ದ ಕೃಷಿ ಚಟುವಟಿಕೆಗಳು ಪುನರಾರಂಭವಾಗುತ್ತವೆ.
ವೃಷಭ
ಗೌರವಾನ್ವಿತವಾಗಿ ನಡೆದುಕೊಳ್ಳುವಿರಿ. ಆದಾಯದಲ್ಲಿ ಸ್ವಲ್ಪ ಏರಿಕೆಯನ್ನು ಕಾಣಬಹುದು. ಬಂಧುಗಳು ನಿಮಗೆ ಸಹಕಾರ ನೀಡುವುದಿಲ್ಲ. ಆಸ್ತಿ ವ್ಯವಹಾರಗಳಲ್ಲಿ ಸ್ವಲ್ಪ ತಕರಾರುಗಳು ಬರಬಹುದು. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಲಭಿಸುವುದು ಕಷ್ಟವಾಗಬಹುದು. ಕಣ್ಣಿನ ತೊಂದರೆ ಇರುವವರು ಹೆಚ್ಚು ಎಚ್ಚರ ವಹಿಸಿ. ಹಿರಿಯರ ಆರೋಗ್ಯದಲ್ಲಿ ಸ್ವಲ್ಪ ಏರುಪೇರಾಗಬಹುದು. ವೃತ್ತಿಯಲ್ಲಿ ಸ್ವಲ್ಪ ಕಸಿವಿಸಿಯಾದರೂ, ತೊಂದರೆ ಇರುವುದಿಲ್ಲ.
ಮಿಥುನ
ನಿಮ್ಮ ದೇಹ ಸೌಂದರ್ಯದ ಕಡೆಗೆ ಹೆಚ್ಚು ಗಮನ ಕೊಡುವಿರಿ. ಆದಾಯವು ಕಡಿಮೆ ಇರುತ್ತದೆ. ವಿದ್ಯಾರ್ಥಿಗಳಿಗೆ ನಿರೀಕ್ಷೆಗೆ ಮೀರಿದ ಫಲಿತಾಂಶವಿರುತ್ತದೆ. ಪಾಲುದಾರಿಕೆಯ ವ್ಯವಹಾರಗಳಲ್ಲಿ ಪ್ರಗತಿ ಇರುವುದಿಲ್ಲ. ನಿಮ್ಮ ಸಂಗಾತಿಗಾಗಿ ಹೆಚ್ಚು ಹಣ ಖರ್ಚಾಗುತ್ತದೆ. ಕೃಷಿ ಉತ್ಪನ್ನಗಳನ್ನು ಮಾರುವವರಿಗೆ ಲಾಭವಿರುತ್ತದೆ. ವಿದೇಶದಲ್ಲಿ ಉದ್ಯೋಗ ಅರಸುತ್ತಿರುವವರಿಗೆ ಉದ್ಯೋಗ ದೊರೆಯುತ್ತದೆ.
ಕರ್ಕಾಟಕ
ಆದಾಯವು ನಿರೀಕ್ಷೆಯ ಹತ್ತಿರ ಬರುತ್ತದೆ. ಸರ್ಕಾರದಿಂದ ಬರಬೇಕಾಗಿದ್ದ ಬಾಕಿ ಹಣ ಈಗ ಬರುತ್ತದೆ. ಸರ್ಕಾರಿ ಸಂಸ್ಥೆಗಳ ಜೊತೆಗೆ ಭೂಮಿಯ ವ್ಯವಹಾರ ಮಾಡುವವರ ಆದಾಯ ಹೆಚ್ಚುತ್ತದೆ. ವಿದ್ಯಾರ್ಥಿಗಳಿಗೆ ವಿವಿಧ ರೀತಿಯಲ್ಲಿ ಅಭಿವೃದ್ಧಿ ಅವಕಾಶ ದೊರೆಯುತ್ತದೆ. ಹಿರಿಯರ ಆರೋಗ್ಯದಲ್ಲಿ ಸಾಕಷ್ಟು ಸುಧಾರಣೆಯನ್ನು ಕಾಣಬಹುದು. ರಾಜಕಾರಣಿಗಳಿಗೆ ಅನಿರೀಕ್ಷಿತ ಅಪವಾದದ ಸಾಧ್ಯತೆ ಇದೆ. ಕೆಲವರಿಗೆ ವಿದೇಶಕ್ಕೆ ಹೋಗಿ ಬರುವ ಯೋಗವಿದೆ.
ಸಿಂಹ
ನಿಮ್ಮ ಕೆಲಸಗಳಲ್ಲಿ ನೀವು ಮುಳುಗಿರುವಿರಿ. ಆದಾಯವು ಸ್ವಲ್ಪ ಕಡಿಮೆ ಇರುತ್ತದೆ. ಬಂಧುಗಳ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳಲು ಹೋಗುವುದಿಲ್ಲ. ವೃತ್ತಿ ಸಂಬಂಧಿತ ಪರೀಕ್ಷೆಗಳನ್ನು ತೆಗೆದುಕೊಳ್ಳುವವರಿಗೆ ಹೆಚ್ಚು ಅನುಕೂಲವಿದೆ. ಸಂಗಾತಿಯ ಆರೋಗ್ಯದಲ್ಲಿ ಸ್ವಲ್ಪ ಬದಲಾವಣೆಯನ್ನು ಕಾಣಬಹುದು. ವಿದೇಶಿ ವ್ಯವಹಾರ ಮಾಡುವವರಿಗೆ ವ್ಯವಹಾರ ವೃದ್ಧಿಸುತ್ತದೆ. ವೃತ್ತಿಯಲ್ಲಿದ್ದ ಗೊಂದಲಗಳು ಸರಿಯಾಗುತ್ತವೆ.
ಕನ್ಯಾ
ಧಾರ್ಮಿಕತೆಯನ್ನು ಬಳಸಿಕೊಂಡು ನಿಮ್ಮ ವ್ಯವಹಾರ ಅಭಿವೃದ್ದಿ ಮಾಡಲು ಯತ್ನಿಸುವಿರಿ. ಆದಾಯವು ಮಧ್ಯಮ ಗತಿಯಲ್ಲಿರುತ್ತದೆ. ಬಂಧುಗಳ ನಡುವೆ ವಿಶ್ವಾಸವನ್ನು ಬೆಳೆಸಿಕೊಳ್ಳಲು ಪ್ರಯತ್ನಪಡುವಿರಿ. ಸ್ಥಿರಾಸ್ತಿ ಪಡೆಯಲು ಹಣ ಒಟ್ಟು ಮಾಡುವಿರಿ. ತೈಲ ಉತ್ಪನ್ನಗಳನ್ನು ಮಾರಾಟ ಮಾಡುವವರಿಗೆ ಲಾಭ ಹೆಚ್ಚುತ್ತದೆ. ಸರ್ಕಾರಿ ಕೆಲಸಗಳಲ್ಲಿ ನಿಧಾನ ಗತಿಯನ್ನು ಕಾಣಬಹುದು. ವೃತ್ತಿಯಲ್ಲಿ ಹಿತಶತ್ರುಗಳು ಜಾಸ್ತಿಯಾಗುವರು.
ತುಲಾ
ಅತಿಯಾದ ಆತ್ಮಗೌರವ ತುಂಬಿರುತ್ತದೆ. ಆದಾಯವು ಸ್ವಲ್ಪ ಚೇತರಿಕೆಯನ್ನು ಕಾಣುತ್ತದೆ. ಕೃಷಿಯಲ್ಲಿ ಅಭಿವೃದ್ಧಿ ಇರುತ್ತದೆ. ಕೃಷಿಭೂಮಿಯನ್ನು ಕೊಳ್ಳಲು ಪ್ರಯತ್ನ ಪಡುವಿರಿ. ಹಳೆಯ ಚರ್ಮರೋಗಗಳು ಮರುಕಳಿಸುವ ಸಾಧ್ಯತೆಗಳಿವೆ. ಸಂಗಾತಿಗೆ ಉದ್ಯೋಗ ದೊರೆಯುವ ಸಾಧ್ಯತೆಯಿದೆ. ವೃತ್ತಿಯಲ್ಲಿ ಸ್ವಲ್ಪ ಏಳಿಗೆ ಇರುತ್ತದೆ. ಧಾರ್ಮಿಕ ಕಾರ್ಯಗಳನ್ನು ಮಾಡುತ್ತಿರುವವರಿಗೆ ಸಂಪಾದನೆ ಹೆಚ್ಚುತ್ತದೆ. ಸರ್ಕಾರಿ ಕೆಲಸ ಕಾರ್ಯಗಳು ಸರಾಗವಾಗಿ ಆಗುತ್ತವೆ.
ವೃಶ್ಚಿಕ
ಆತ್ಮವಿಶ್ವಾಸವನ್ನು ವೃದ್ಧಿ ಮಾಡಿಕೊಳ್ಳುವಿರಿ. ಆದಾಯದ ಒಳಹರಿವು ಸ್ವಲ್ಪ ಸರಿದಾರಿಗೆ ಬರುತ್ತದೆ. ಬಂಧುಗಳ ವಿಶ್ವಾಸವು ಕಡಿಮೆಯಾಗಬಹುದು. ಹಿರಿಯರ ಸಹಕಾರದಿಂದ ಕೃಷಿಯಲ್ಲಿ ಆದಾಯ ಹೆಚ್ಚುತ್ತದೆ. ಸಂಗಾತಿಯು ಆರ್ಥಿಕ ಸಹಾಯ ಮಾಡುತ್ತಾರೆ. ಉದ್ಯೋಗದಲ್ಲಿ ಸಾಮಾನ್ಯ ಪ್ರಗತಿ ಇರುತ್ತದೆ. ಸರ್ಕಾರಿ ಕೆಲಸ, ಕಾರ್ಯಗಳಲ್ಲಿ ಅಡೆ ತಡೆಗಳನ್ನು ಕಾಣಬಹುದು. ಹಿರಿಯರ ಜೊತೆಗೂಡಿ ಮಾಡಿದ ವ್ಯವಹಾರಗಳಲ್ಲಿ ಲಾಭವಿರುತ್ತದೆ.
ಧನು
ಕೆಲವೊಂದು ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಹಿರಿಯರ ಜೊತೆ ಆಲೋಚನೆ ಮಾಡುವುದು ಒಳ್ಳೆಯದು. ಆದಾಯವು ಕಡಿಮೆ ಇರುತ್ತದೆ. ನಿಮ್ಮ ಸ್ವಪ್ರಯತ್ನಗಳಿಂದ ಆದಾಯ ವೃದ್ಧಿ ಮಾಡಿಕೊಳ್ಳಬಹುದು. ಉದ್ಯೋಗದಲ್ಲಿ ಅಭಿವೃದ್ಧಿಯನ್ನು ಕಾಣಬಹುದು. ಧಾರ್ಮಿಕ ಮುಖಂಡರುಗಳಿಗೆ ಗೌರವ ದೊರೆಯುತ್ತದೆ. ಬುದ್ಧಿವಂತಿಕೆಯಿಂದ ಹಿತಶತ್ರುಗಳ ಕಾಟವನ್ನು ಪರಿಹಾರ ಮಾಡಿಕೊಳ್ಳುವಿರಿ. ವೃತ್ತಿ ಧರ್ಮ ನಿಮ್ಮನ್ನು ಕಾಪಾಡುತ್ತದೆ.
ಮಕರ
ತಾಳ್ಮೆಯಿಂದ ಇರುವುದನ್ನು ಕಲಿಯುವಿರಿ. ಆದಾಯವು ಕಡಿಮೆ ಇರುತ್ತದೆ. ನಿಮ್ಮ ಶ್ರಮದಿಂದ ಆದಾಯವನ್ನು ಹೆಚ್ಚು ಮಾಡಿಕೊಳ್ಳುವಿರಿ. ಬಂಧುಗಳ ವಿರೋಧದ ನಡುವೆಯೂ ಹಿಡಿದ ಕೆಲಸವನ್ನು ಸಾಧಿಸುವಿರಿ. ಕೃಷಿಯಲ್ಲಿ ಅಭಿವೃದ್ಧಿಯನ್ನು ಕಾಣುವಿರಿ. ವಿದ್ಯಾರ್ಥಿಗಳಿಗೆ ಹೆಚ್ಚು ಯಶಸ್ಸು ಇರುತ್ತದೆ. ವ್ಯತ್ಯಾಸವಾಗಿದ್ದ ಆರೋಗ್ಯವು ಈಗ ಸುಧಾರಿಸುತ್ತದೆ. ಸಂಗಾತಿಯಿಂದ ಸಹಕಾರ ನಿರೀಕ್ಷಣೆ ಮಾಡಬಹುದು. ಪುಸ್ತಕ ವ್ಯಾಪಾರಿಗಳಿಗೆ ಹೆಚ್ಚು ಲಾಭ.
ಕುಂಭ
ಹಿರಿಯರ ಜ್ಞಾನಕ್ಕೆ ಬೆಲೆ ಸಿಗುತ್ತದೆ. ನಿಮ್ಮ ಚಟುವಟಿಕೆಗಳಿಗೆ ಸಹೋದರರಿಂದ ಅಡ್ಡಿ ಬರಬಹುದು. ಭೂಮಾಪನ ಮಾಡುವವರ ಆದಾಯ ಹೆಚ್ಚುತ್ತದೆ. ಸ್ಥಿರಾಸ್ತಿಯನ್ನು ಕೊಳ್ಳುವ ಬಗ್ಗೆ ಈಗ ಆಲೋಚನೆಮಾಡಬಹುದು. ವೃತ್ತಿ ಸಂಬಂಧಿತ ಪರೀಕ್ಷೆಗಳನ್ನು ತೆಗೆದುಕೊಂಡು ವೃತ್ತಿಯಲ್ಲಿ ಮೇಲ್ದರ್ಜೆಗೆ ಏರಬಹುದು. ಹರಿತವಾದ ವಸ್ತುಗಳನ್ನು ಬಳಸುವಾಗ ಎಚ್ಚರದಿಂದ ಬಳಸಿರಿ. ಸಂಗಾತಿಯು ಈಗ ನಿಮಗೆ ಉತ್ತಮ ಸಲಹೆಗಳನ್ನು ನೀಡುವರು. ವೃತ್ತಿಯಲ್ಲಿ ಪ್ರಗತಿ ಇರುತ್ತದೆ.
ಮೀನ
ನಿಮ್ಮ ದ್ವಂದ್ವ ನಿರ್ಧಾರಗಳು ನಿಮಗೆ ಮುಜುಗರವನ್ನು ತರಬಹುದು. ಕೃಷಿಯಿಂದ ಆದಾಯವನ್ನು ಹೆಚ್ಚಿಸಿಕೊಳ್ಳಬಹುದು. ಹರಿತವಾದ ಮಾತಿನಿಂದ ಕೆಲವು ಅವಕಾಶಗಳನ್ನು ಕಳೆದುಕೊಳ್ಳುವಿರಿ. ಆದಾಯವು ಸಾಮಾನ್ಯವಾಗಿರುತ್ತದೆ. ಭೂಮಿ ವ್ಯವಹಾರ ಮಾಡುವವರಿಗೆ ಲಾಭವಿರುತ್ತದೆ. ಸರ್ಕಾರಿ ಸಾಲಗಳು ಬಹಳ ಭಾರವಾಗಬಹುದು. ಧರ್ಮ ಕಾರ್ಯಗಳಿಂದ ಹಣ ಗಳಿಸಬಹುದು. ಕಬ್ಬಿಣದ ವ್ಯಾಪಾರಿಗಳಿಗೆ ವ್ಯವಹಾರ ಮಂದಗತಿಯಲ್ಲಿರುತ್ತದೆ.