ಬೆಂಗಳೂರು: ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಿಸುವ ನಿಟ್ಟಿನಲ್ಲಿ ಶಾಲಾ ಮಕ್ಕಳಿಗೆ ವಾರದಲ್ಲಿ ಎರಡು ದಿನ ವಿತರಿಸಲಾಗುತ್ತಿರುವ ಮೊಟ್ಟೆ/ಬಾಳೆಹಣ್ಣು ಯೋಜನೆಯನ್ನು ವಾರದಲ್ಲಿ ಆರು ದಿನಕ್ಕೆ ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಿಸಿದ್ದಾರೆ. ಅದಕ್ಕಾಗಿ ₹ 1,500 ಕೋಟಿ ಮೀಸಲಿಡಾಗಿದೆ ಎಂದರು.
.Karnataka Budget: ಎಲ್ಲಾ ವಿಧಾನಸಭಾ ಕ್ಷೇತ್ರಗಳ ಅಭಿವೃದ್ಧಿಗೆ ₹8 ಸಾವಿರ ಕೋಟಿ.
ಪ್ರಾಥಮಿಕ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಇತರ ಘೋಷಣೆಗಳು

ಏಷಿಯನ್ ಡೆವಲಪ್ಮೆಂಟ್ ಬ್ಯಾಂಕ್ ನೆರವಿನೊಂದಿಗೆ ₹2,500 ಕೋಟಿ ವೆಚ್ಚದಲ್ಲಿ 500 ಹೊಸ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭ

ಶಾಲಾ ಮಕ್ಕಳಿಗೆ ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್ ವತಿಯಿಂದ ಪ್ರಸ್ತುತ ವಾರದಲ್ಲಿ ಮೂರು ದಿನ ಸಾಯಿ ಶ್ಯೂರ್ ರಾಗಿ ಹೆಲ್ತ್ ಮಿಕ್ಸ್ ಪುಡಿಯನ್ನು ಬಿಸಿ ಹಾಲಿನೊಂದಿಗೆ ಮಿಶ್ರಣ ಮಾಡಿ ವಿತರಿಸಲಾಗುತ್ತಿದ್ದು, ಇದನ್ನು ವಾರದ ಐದು ದಿನಗಳಿಗೆ ವಿಸ್ತರಿಸಲಾಗುವುದು. ₹ 100 ಕೋಟಿ ವೆಚ್ಚದ ಈ ಯೋಜನೆಯ ಶೇ 25 ರಷ್ಟು ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ.

ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರು ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕ ಮಾಸಿಕ ಗೌರವಧನವನ್ನು ₹ 2,000 ಹೆಚ್ಚಳ

ಬಿಸಿಯೂಟ ತಯಾರಿಸುವ ಸಿಬ್ಬಂದಿಗೆ ನೀಡುತ್ತಿರುವ ಮಾಸಿಕ ಗೌರವಧನ ₹ 1,000ಗೆ

ರಾಜ್ಯದ ಅರ್ಹ 100 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಹಾಗೂ 50 ಪ್ರೌಢಶಾಲೆಗಳನ್ನು ಪದವಿ ಪೂರ್ವ ಕಾಲೇಜುಗಳನ್ನಾಗಿ ಉನ್ನತೀಕರಣ

5000 ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳ ವಿಸ್ತರಣೆ ಇದಕ್ಕಾಗಿ ₹70 ಕೋಟಿ ವೆಚ್ಚ.

ʻಕಲಿಕಾ ಚಿಲುಮೆʼ ಕಾರ್ಯಕ್ರಮದಡಿ ಒಂದರಿಂದ ಐದನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಸಂತಸದಾಯಕ ಕಲಿಕಾ ಅನುಭವ ಒದಗಿಸುವುದು.

.Karnataka Budget 2025 | ಪಶುಸಂಗೋಪನೆ: 50 ನೂತನ ಪಶು ಚಿಕಿತ್ಸಾಲಯ ಪ್ರಾರಂಭ.

ʻಗಣಿತ ಗಣಕʼ ಕಾರ್ಯಕ್ರಮದಡಿ 3 ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ಫೋನ್ ಮೂಲಕ ವೈಯಕ್ತಿಕ ಬೋಧನೆಯೊಂದಿಗೆ ಬುನಾದಿ ಗಣಿತ ಕೌಶಲ್ಯವನ್ನು ಅಭಿವೃದ್ಧಿಪಡಿಸಿ ರಾಜ್ಯಾದ್ಯಂತ ವಿಸ್ತರಣೆ

ʻಓದು ಕರ್ನಾಟಕʼ ಯೋಜನೆಯಡಿ 4 ಮತ್ತು 5ನೇ ತರಗತಿ ವಿದ್ಯಾರ್ಥಿಗಳಿಗೆ ಬುನಾದಿ ಸಾಕ್ಷರತೆ ಹಾಗೂ ಸಂಖ್ಯಾಜ್ಞಾನದ ಕೌಶಲ್ಯಗಳನ್ನು ಅಭಿವೃದ್ಧಿ

ಸರ್ಕಾರಿ ಶಾಲೆಗಳಲ್ಲಿ ಅತೀ ಕಡಿಮೆ ಕಲಿಕಾ ಸ್ತರದಲ್ಲಿರುವ 6 ರಿಂದ 10ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯ ಹೆಚ್ಚಿಸುವ ʻಮರುಸಿಂಚನʼ ಕಾರ್ಯಕ್ರಮವನ್ನು ರಾಜ್ಯಾದ್ಯಂತ ವಿಸ್ತರಿಸುವುದು.

ʻನಿರಂತರʼ ಕಾರ್ಯಕ್ರಮದಡಿ Face Recognition ತಂತ್ರಜ್ಞಾನದ ಮೂಲಕ ಮಕ್ಕಳ ಹಾಜರಾತಿಯನ್ನು ಖಚಿತಪಡಿಸುವ ವ್ಯವಸ್ಥೆಯನ್ನು ಜಾರಿ

ವಿದ್ಯಾರ್ಥಿಗಳಲ್ಲಿ ಮಾತೃಭಾಷೆಯ ಜೊತೆಗೆ ಆಂಗ್ಲಭಾಷೆಯ ಕೌಶಲ್ಯ ಬೆಳೆಸಲು ರಾಜ್ಯದ 4,000 ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ವಿಭಾಗವನ್ನು ಪ್ರಾರಂಭಿಸಲಾಗುವುದು.

114. ರಾಜ್ಯದ 500 ಸರ್ಕಾರಿ ಪ್ರೌಢಶಾಲೆಗಳಲ್ಲಿ ಕಂಪ್ಯೂಟರ್ ಮತ್ತು ವಿಜ್ಞಾನ ಪ್ರಯೋಗಾಲಯಗಳ ಸ್ಥಾಪನೆ

ಸರ್ಕಾರಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಹೆಚ್ಚುವರಿ ಕೊಠಡಿ, ಶೌಚಾಲಯಗಳ ನಿರ್ಮಾಣ ಮತ್ತು ದುರಸ್ತಿ ಕಾರ್ಯಗಳಿಗೆ ₹725 ಕೋಟಿ. ಹಾಗೂ ಅಗತ್ಯ ಪೀಠೋಪಕರಣಗಳನ್ನು ಒದಗಿಸಲು ₹50 ಕೋಟಿ

.Karnataka Budget 2025 Highlights: ಬಜೆಟ್ನ ಮುಖ್ಯಾಂಶಗಳು ಇಲ್ಲಿವೆ.

ಮಧ್ಯಾಹ್ನ ಉಪಹಾರ ಯೋಜನೆಯಡಿ ರಾಜ್ಯದ 16,347 ಶಾಲೆಗಳ ಅಡುಗೆಮನೆ ಆಧುನೀಕರಣ ಕಾರ್ಯ ಮತ್ತು ಹೊಸ ಪಾತ್ರೆ ಪರಿಕರಗಳನ್ನು ಒದಗಿಸಲು ₹ 46 ಕೋಟಿ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಕ್ಷರ ಆವಿಷ್ಕಾರ ಯೋಜನೆ ಅಡಿ ₹200 ಕೋಟಿ ವೆಚ್ಚದಲ್ಲಿ ಆಯ್ದ 50 ಶಾಲೆಗಳನ್ನು ಸುಸಜ್ಜಿತ ಕೆ.ಪಿ.ಎಸ್. ಶಾಲೆಗಳನ್ನಾಗಿ ಉನ್ನತೀಕರಿಸಲಾಗುವುದು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ 5,267 ಶಿಕ್ಷಕರ ಹುದ್ದೆಗಳನ್ನು ಭರ್ತಿ .

ಇನ್ನೂ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ತರ್ಕಬದ್ಧಗೊಳಿಸಿ 5,000 ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ

ದಕ್ಷಿಣ ಕನ್ನಡ ಜಿಲ್ಲೆಯ ಪಿಲಿಕುಳದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಅಂತಾರಾಷ್ಟ್ರೀಯ ಯುವಕರ ತರಬೇತಿ ಕೇಂದ್ರದ ಅಭಿವೃದ್ಧಿಗಾಗಿ ₹2 ಎರಡು ಕೋಟಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.