ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ತಾವು ಮಂಡಿಸಿದ 16ನೇ ಬಜೆಟ್ನಲ್ಲಿ ರಾಜಧಾನಿ ಬೆಂಗಳೂರಿಗೂ ಭರಪೂರ ಅನುದಾನ, ಅಭಿವೃದ್ಧಿ ಚಟುವಟಿಕೆಗಳ ಘೋಷಣೆ ಮಾಡಿದ್ದಾರೆ.

ರಾಜ್ಯದ ಆರ್ಥಿಕತೆಗೆ ಬಹುಮುಖ್ಯ ಕೊಡುಗೆ ನೀಡುವ ಬೆಂಗಳೂರು ನಗರದ ಮೂಲಸೌಲಭ್ಯಗಳ ಅಭಿವೃದ್ಧಿಗೆ ನಮ್ಮ ಸರ್ಕಾರವು ಆದ್ಯತೆ ನೀಡುತ್ತದೆ. ಪ್ರತಿ ವರ್ಷ ನೀಡುತ್ತಿರುವ ₹3,000 ಕೋಟಿ . ಅನುದಾನವನ್ನು ಪ್ರಸಕ್ತ ವರ್ಷದಲ್ಲಿ ₹7,000 ಕೋಟಿಗೆ ಹೆಚ್ಚಿಸಲಾಗುವುದು. ಈ ಅನುದಾನವನ್ನು ಬಳಸಿ ಬೃಹತ್ ಅಭಿವೃದ್ಧಿ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಅನುಷ್ಠಾನಗೊಳಿಸಲು ಹೊಸದಾಗಿ ವಿಶೇಷ ಉದ್ದೇಶಿತ ಸಂಸ್ಥೆ ಸ್ಥಾಪಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

* ಬಿಬಿಎಂಪಿಗೆ ಅಂದಾಜು ಮೊತ್ತ ₹40,000 ಕೋಟಿ ವೆಚ್ಚದಲ್ಲಿ ಉತ್ತರ-ದಕ್ಷಿಣ ಮತ್ತು ಪೂರ್ವ-ಪಶ್ಚಿಮ ಸುರಂಗ ಮಾರ್ಗದ ಕಾರಿಡಾರ್ಗಳನ್ನು ಕೈಗೊಳ್ಳಲು ಅನುಕೂಲವಾಗುವಂತೆ ₹19,000 ಕೋಟಿ ಗ್ಯಾರಂಟಿಯನ್ನು ಸರ್ಕಾರದಿಂದ ಒದಗಿಸಲಾಗಿದೆ.

* ವಾಹನ ದಟ್ಟಣೆ ಸಮಸ್ಯೆಯನ್ನು ನಿವಾರಿಸಲು ಹಾಗೂ ಸುಗಮ ಸಂಚಾರಕ್ಕಾಗಿ ಬೆಂಗಳೂರು ನಗರದ ಮುಖ್ಯ ರಸ್ತೆಗಳನ್ನು ಸಿಗ್ನಲ್ ಮುಕ್ತಗೊಳಿಸುವ ನಿಟ್ಟಿನಲ್ಲಿ ಈ ಕೆಳಕಂಡ ಉಪಕ್ರಮಗಳನ್ನು ಕೈಗೊಳ್ಳಲಾಗಿದೆ.

1. ನಮ್ಮ ಮೆಟ್ರೊ ಹಂತ-3 ಯೋಜನೆಯೊಂದಿಗೆ ₹8,916 ಕೋಟಿ ವೆಚ್ಚದಲ್ಲಿ 4೦.50 ಕಿ.ಮೀ. ಉದ್ದದ ಡಬಲ್ ಡೆಕ್ಕರ್ ಫ್ಲೈಓವರ್ ರಸ್ತೆಯನ್ನು ನಿರ್ಮಿಸಲಾಗುವುದು.

2. ಕಾಲುವೆಯ ಬಫರ್ ಪ್ರದೇಶವನ್ನು ಬಳಸಿಕೊಂಡು ₹3,000 ಕೋಟಿ ವೆಚ್ಚದಲ್ಲಿ 300 ಕಿ.ಮೀ. ಹೆಚ್ಚುವರಿ ರಸ್ತೆ ಜಾಲವನ್ನು ಅಭಿವೃದ್ಧಿಪಡಿಸಲಾಗುವುದು.
.Karnataka Budget 2025 Highlights: ಬಜೆಟ್ನ ಮುಖ್ಯಾಂಶಗಳು ಇಲ್ಲಿವೆ.
3. ಬಿಬಿಎಂಪಿ ವ್ಯಾಪ್ತಿಯಲ್ಲಿರುವ 460 ಕಿ.ಮೀ. ಆರ್ಟಿರಿಯಲ್ ಮತ್ತು ಸಬ್ ಆರ್ಟಿರಿಯಲ್ ರಸ್ತೆ ಜಾಲವನ್ನು ₹660 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು.

4. ನಗರದಲ್ಲಿ 120 ಕಿ.ಮೀ. ಉದ್ದದ Flyover ಹಾಗೂ Grade Separator ಗಳನ್ನು ನಿರ್ಮಿಸಲಾಗುವುದು.

* ʻಬ್ರ್ಯಾಂಡ್ ಬೆಂಗಳೂರುʼ ಯೋಜನೆಯಡಿ 2024-25ನೇ ಸಾಲಿನಲ್ಲಿ ಅನುಮೋದನೆಗೊಂಡ 21 ಯೋಜನೆಗಳನ್ನು ₹1,800 ಕೋಟಿ ಮೊತ್ತದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.

* ಬೆಂಗಳೂರನ್ನು ಅಂತರರಾಷ್ಟ್ರೀಯ ಆರೋಗ್ಯ ಮಾನದಂಡಗಳ ನಗರವನ್ನಾಗಿ ಮಾಡಲು, ʻಬ್ರ್ಯಾಂಡ್ ಬೆಂಗಳೂರುʼ ಅಭಿಯಾನದ ಅಡಿಯಲ್ಲಿ ಮುಂದಿನ ಮೂರು ವರ್ಷಗಳಲ್ಲಿ ₹413 ಕೋಟಿ ವೆಚ್ಚದಲ್ಲಿ ʻಸಮಗ್ರ ಆರೋಗ್ಯ ಯೋಜನೆʼಯನ್ನು ಜಾರಿಗೊಳಿಸಲಾಗುವುದು.

*. ಹವಾಮಾನ ವೈಪರೀತ್ಯದ ಪರಿಣಾಮವಾಗಿ ಬೆಂಗಳೂರು ನಗರವು ಎದುರಿಸುತ್ತಿರುವ ಪ್ರವಾಹವನ್ನು ನಿಯಂತ್ರಿಸಲು ವ್ಯವಸ್ಥಿತ ಒಳಚರಂಡಿ ಜಾಲ ಮತ್ತು ಎಸ್.ಟಿ.ಪಿ ಗಳನ್ನು ನಿರ್ಮಿಸಲು ಸರ್ಕಾರವು BBMP ಹಾಗೂ BWSSBಗೆ ₹3,000 ಕೋಟಿ ಆರ್ಥಿಕ ನೆರವು.

*2024-25ನೇ ಸಾಲಿನಲ್ಲಿ ₹5,550 ಕೋಟಿ ಮೊತ್ತದಲ್ಲಿ 775 ಎಂಎಲ್ಡಿ ಹೆಚ್ಚುವರಿ ನೀರಿನ ಸಾಮರ್ಥ್ಯವನ್ನು ಹೊಂದಿರುವ ಕಾವೇರಿ 5ನೇ ಹಂತದ ಯೋಜನೆಯನ್ನು ಸಾರ್ವಜನಿಕರಿಗೆ ಲೋಕಾರ್ಪಣೆಗೊಳಿಸಲಾಗಿದೆ. ಇದರಿಂದ 110 ಹಳ್ಳಿಗಳಲ್ಲಿರುವ 50 ಲಕ್ಷ ನಿವಾಸಿಗಳಿಗೆ ಜೀವಜಲ ದೊರಕಿಸಲಾಗಿದೆ.

*BWSSB ವತಿಯಿಂದ ಎಸ್.ಟಿ.ಪಿ ಘಟಕಗಳ ತ್ಯಾಜ್ಯವನ್ನು ಬಳಸಿ ಬಯೋಗ್ಯಾಸ್-ಆಧಾರಿತ ಆದಾಯ ಮತ್ತು ಕಾರ್ಬನ್ ಕ್ರೆಡಿಟ್ಗಳ ಉಪಯೋಗವನ್ನು ಪಡೆಯುವ ನಿಟ್ಟಿನಲ್ಲಿ ಪಿಪಿಪಿ ಮಾದರಿಯಲ್ಲಿ ಯೋಜನೆಯನ್ನು ರೂಪಿಸಲಾಗುವುದು.

* ʻನಮ್ಮ ಮೆಟ್ರೋʼ ಪ್ರತಿದಿನ ಸರಾಸರಿ 8.5 ಲಕ್ಷ ಪ್ರಯಾಣಿಕರಿಗೆ ಸೇವೆಯನ್ನು ಒದಗಿಸುತ್ತಿದ್ದು, ಪ್ರಸ್ತುತ 68 ನಿಲ್ದಾಣಗಳನ್ನೊಳಗೊಂಡಂತೆ 79.65 ಕಿ.ಮೀ. ಮಾರ್ಗದ ಕಾರ್ಯಾಚರಣೆ ನಡೆಸುತ್ತಿದೆ. ಮುಂದಿನ ಎರಡು ವರ್ಷಗಳಲ್ಲಿ ಒಟ್ಟಾರೆ 98.60 ಕಿ.ಮೀ ಹೆಚ್ಚುವರಿ ಮಾರ್ಗಗಳ ಕಾರ್ಯಾಚರಣೆ ಜಾಲವನ್ನು ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಲಾಗಿದೆ. ಮೆಟ್ರೊ ಜಾಲವನ್ನು ದೇವನಹಳ್ಳಿಯವರೆಗೆ ವಿಸ್ತರಿಸಲು ಯೋಜಿಸಲಾಗಿದೆ.

*. ಕಾವೇರಿ ಹಂತ-6 ಅನುಷ್ಠಾನಕ್ಕಾಗಿ ವಿಸ್ತೃತ ಯೋಜನಾ ವರದಿಯನ್ನು ತಯಾರಿಸಲಾಗುವುದು.

*. ಬಿಬಿಎಂಪಿ ವತಿಯಿಂದ ʻಬ್ರ್ಯಾಂಡ್ ಬೆಂಗಳೂರು - ಹಸಿರು ಬೆಂಗಳೂರುʼ ಅಡಿಯಲ್ಲಿ ₹35 ಕೋಟಿ ವೆಚ್ಚದ 14 ಕೆರೆಗಳ ಕಾಮಗಾರಿಗಳು ಪ್ರಗತಿಯಲ್ಲಿವೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ವರ್ತೂರು ಮತ್ತು ಬೆಳ್ಳಂದೂರು ಕೆರೆಗಳ ಪುನರುಜ್ಜೀವನ ಕಾಮಗಾರಿಗಳನ್ನು ₹234 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿದೆ.

*ಬೆಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ಕೈಗೊಂಡಿರುವ ವಿವಿಧ ಸುಧಾರಣಾ ಕ್ರಮಗಳಿಂದ ಆಸ್ತಿ ತೆರಿಗೆ ಸಂಗ್ರಹಣೆಯಲ್ಲಿ ಗಣನೀಯ ಹೆಚ್ಚಳ ಸಾಧಿಸಲಾಗಿದೆ. ತಂತ್ರಜ್ಞಾನ ಬಳಸಿ ಆನ್ಲೈನ್ ಮೂಲಕ ಇ-ಖಾತಾ ವ್ಯವಸ್ಥೆಯನ್ನು ಅಳವಡಿಸಿರುವುದರಿಂದ ರಾಜಸ್ವ ಶೇಖರಣೆಯನ್ನು ಹೆಚ್ಚು ಮಾಡುವುದರೊಂದಿಗೆ ನಾಗರೀಕ ಸೇವೆಗಳನ್ನು ಸರಳವಾಗಿ ನೀಡಲು ಸಾಧ್ಯವಾಗಿದೆ. ಅಲ್ಲದೇ ಪಾಲಿಕೆಯ ಸ್ವಂತ ಆಸ್ತಿಗಳ ಉತ್ತಮ ನಿರ್ವಹಣೆ ಮತ್ತು ನಿಯಂತ್ರಣಕ್ಕೆ ಸಹಕಾರಿಯಾಗುವಂತೆ ಬಿಬಿಎಂಪಿ (ಎಸ್ಟೇಟ್) ನಿಯಮಗಳು 2024 ಅನ್ನು ಅಧಿಸೂಚಿಸಲಾಗಿದೆ. ಈ ಎಲ್ಲಾ ಸುಧಾರಣಾ ಕ್ರಮಗಳಿಂದ 2024-25ನೇ ಸಾಲಿನಲ್ಲಿ ಈವರೆಗೂ 4,556 ಕೋಟಿ ರೂ. ಸಂಗ್ರಹಣೆ ಮಾಡಲಾಗಿದೆ. ಇದರೊಂದಿಗೆ, ಪಾಲಿಕೆಯ ಜಾಹೀರಾತು ಉಪ-ವಿಧಿಗಳು 2025 ರ ಅನುಷ್ಠಾನದಿಂದ ವರ್ಷಕ್ಕೆ ₹750 ಕೋಟಿ ಆದಾಯವನ್ನು ಅಂದಾಜಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
. Karnataka Budget 2025: ಗೃಹಲಕ್ಷ್ಮಿ ಯೋಜನೆಗೆ ₹28,608 ಕೋಟಿ ಅನುದಾನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.