ಸಭೆಯಲ್ಲಿ ಮಾತನಾಡಿದ ಬಳ್ಳಾರಿ ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ ‘ನಗರ ವ್ಯಾಪ್ತಿಯಲ್ಲಿ ಒಟ್ಟು 171 ಗಣತಿದಾರರಿದ್ದು ಅದರಲ್ಲಿ ಕೇವಲ 36 ಗಣತಿದಾರರು ಕರ್ತವ್ಯ ನಿರ್ವಹಿಸುತ್ತಿದ್ದಾರೆ ಉಳಿದವರು ಸ್ಪಂದಿಸುತ್ತಿಲ್ಲ ಎಂದು ಸಭೆಯ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಯವರು ಅಂತಹವರನ್ನು ಗುರುತಿಸಿ ಅಮಾನತ್ತಿಗೆ ಶಿಫಾರಸ್ಸು ಮಾಡಬೇಕು. ಇನ್ನಿತರೆ ಸಿಬ್ಬಂದಿ ಇದಲ್ಲಿ ಅವರನ್ನು ನಿಯೋಜನೆ ಮಾಡಿಕೊಳ್ಳಬೇಕು. ಈ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಯವರೊಂದಿಗೆ ಸಮನ್ವತೆ ಸಾಧಿಸಬೇಕು’ ಎಂದು ತಿಳಿಸಿದರು.