ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಬಳಿ ಯುವಕನೊಬ್ಬ ಕುಸಿದು ಬಿದ್ದು ಮೃತಪಟ್ಟಿದ್ದಾನೆ.

ಗೌರಿಬಿದನೂರು ತಾಲ್ಲೂಕಿನ ತೊಂಡೆಬಾವಿ ಹೋಬಳಿ ಬೆಳ್ತೂರು ನಿವಾಸಿ ಸುರೇಶ್ ಕುಮಾರ್ (34) ಮೃತ ಯುವಕ.

ಮೃತ ಸುರೇಶ್ ಕುಮಾರ್ ಒಂದೂವರೆ ವರ್ಷದಿಂದ ತಾಲ್ಲೂಕಿನ ಬಾಶೇಟ್ಟಿಹಳ್ಳಿ ಕೈಗಾರಿಕ ಪ್ರದೇಶ ವ್ಯಾಪ್ತಿಯ ಜಿಂಕ್ಕೆಬಚ್ಚಹಳ್ಳಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದು, ಮಂಗಳವಾರ ರಾತ್ರಿ ಎರಡನೇ ಪಾಳಿಯ ಕೆಲಸ ಮುಗಿಸಿ ಸ್ವಗ್ರಾಮಕ್ಕೆ ತೆರಳಲು ರೈಲ್ವೆ ನಿಲ್ದಾಣದ ಬಳಿ ಬಂದ ವೇಳೆ ಕುಸಿದು ಬಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಬುಧವಾರ ಬೆಳಗ್ಗೆ ಮೃತ ದೇಹವನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದರು. 112 ಸಿಬ್ಬಂದಿ ಸ್ಥಳಕ್ಕೆ ಬಂದು ಮೃತ ದೇಹವನ್ನು ಶವಾಗಾರಕ್ಕೆ ಸಾಗಿಸಿದ್ದರು. ತನಿಖೆ ಆರಂಭಿಸಿದ ಪೊಲೀಸರು ಮೃತನ ಗುರುತು ಪತ್ತೆ ಹಚ್ಚಿದ್ದು, ಯುವಕ ಹೃದಯಾಘಾತದಿಂದ ಮೃತಪಟ್ಟರ ಬಹುದು ಎಂದು ಶಂಕಿಸಲಾಗಿದೆ.

ಮೃತ ದೇಹವನ್ನು ಪೋಷಕರಿಗೆ ಹಸ್ತಾಂತರಿಸಲಾಗಿದ್ದು, ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.