ಸಿಮೆಂಟ್ ಕಾರ್ಖಾನೆಗೆ ಅನುಮತಿ ಬೇಡ
ಕೇಂದ್ರ ಸರ್ಕಾರ ಈಗಾಗಲೇ ಬೆಂಗಳೂರಿನ ಹೊರ ವರ್ತುಲ ರೈಲು ಯೋಜನೆ ರೂಪಿಸಿದೆ. ಈ ಯೋಜನೆಯಲ್ಲಿ ತಾಲ್ಲೂಕಿನ ವಡ್ಡರಹಳ್ಳಿ ಗ್ರಾಮದ ರೈಲು ನಿಲ್ದಾಣವು ಪ್ರಮುಖವಾಗಿದೆ. ಆದರೆ ಇದೇ ರೈಲು ನಿಲ್ದಾಣದ ಸಮೀಪ ಖಾಸಗಿ ಕಂಪನಿಯೊಂದು ಸಿಮೆಂಟ್ ತಯಾರಿಕಾ ಕಾರ್ಖಾನೆ ನಿರ್ಮಿಸಲು ಮುಂದಾಗಿದೆ. ಇದಕ್ಕೆ ಸ್ಥಳೀಯ ಕಂಟನಕುಂಟೆ ಗ್ರಾಮ ಪಂಚಾಯಿತಿ ಅನುಮತಿ ನೀಡಬಾರದು ಎಂದು ಶಾಸಕ ಧೀರಜ್ ಮುನಿರಾಜು ಹೇಳಿದರು. ಈ ಬಗ್ಗೆ ದೊಡ್ಡಬಳ್ಳಾಪುರ ಯೋಜನ ಪ್ರಾಧಿಕಾರಕ್ಕೂ ಪತ್ರ ಬರೆಯಲಾಗಿದೆ. ಸಿಮೆಂಟ್ ಕಾರ್ಖಾನೆ ಇಲ್ಲಿ ಸ್ಥಾಪನೆಯಾದರೆ. ಇದರ ಧೂಳಿನಿಂದ ಗ್ರಾಮಗಳ ಜನರ ಆರೋಗ್ಯ ಹಾಳಾಗಲಿದೆ. ರೈತರ ಬೆಳೆಗಳಿಗೂ ಹಾನಿಯಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.