ಬೆಳಗಾವಿ: ವಿಧಾನಮಂಡಲ ಚಳಿಗಾಲದ ಅಧಿವೇಶನಕ್ಕೆ ಪರ್ಯಾಯವಾಗಿ ಮಹಾಮೇಳಾವ್ ಮಾಡಲು ಯತ್ನಿಸಿದ ಮಹಾರಾಷ್ಟ್ರ ಏಕೀಕರಣ ಸಮಿತಿಯ 20ಕ್ಕೂ ಅಧಿಕ ಕಾರ್ಯಕರ್ತರನ್ನು ಪೊಲೀಸರು ವರ್ಷಕ್ಕೆ ಪಡೆದರು.
.ಬೆಳಗಾವಿ: ಬೇಸಿಗೆಯಲ್ಲಾದರೂ ಸೌಧದಿಂದ ನೀರು ಕೊಡಿ.
ವ್ಯಾಕ್ಸಿನ್ ಡಿಪೊ ಮೈದಾನದಲ್ಲಿ ಮಹಾಮೇಳಾವ್ ನಡೆಸಲು ಎಂಇಎಸ್ ನವರು ಯೋಜಿಸಿದ್ದರು. ಮೈದಾನಕ್ಕೆ ತೆರಳಲು ಯತ್ನಿಸಿದ ಮುಖಂಡರಾದ ಮನೋಹಕ ಕಿಣೇಕರ, ಮಾಲೋಜಿರಾವ್ ಅಷ್ಟೇಕರ, ಶುಭಂ ಶೆಳಕೆ ಮತ್ತಿತರರನ್ನು ಎರಡನೇ ರೈಲ್ವೆ ಗೇಟ್ ಬಳಿ ಪೊಲೀಸರು ವಶಕ್ಕೆ ಪಡೆದರು.

ಆಗ 'ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಲೇಬೇಕು' ಎಂದು ಕಾರ್ಯಕರ್ತರು ನಾಡವಿರೋಧಿ ಘೋಷಣೆ ಕೂಗಿದರು
.ಬೆಳಗಾವಿ ಅಧಿವೇಶನ: 10ಸಾವಿರ ಸಿಬ್ಬಂದಿ, 3,000ಕೊಠಡಿ: ಸುವರ್ಣ ವಿಧಾನಸೌಧ ಸನ್ನದ್ಧ.
ಕನ್ನಡ ಹೋರಾಟಗಾರರೂ ವಶಕ್ಕೆ

ಎಂಇಎಸ್ ನಾಡವಿರೋಧಿ ನಿಲುವು ಖಂಡಿಸಿ, ಇಲ್ಲಿನ ಎರಡನೇ ರೈಲ್ವೆ ಗೇಟ್ ಬಳಿ ಪ್ರತಿಭಟನೆಗೆ ಬಂದಿದ್ದ ಕರ್ನಾಟಕ ರಕ್ಷಣಾ ವೇದಿಕೆ (ಟಿ.ಎ.ನಾರಾಯಣಗೌಡ ಬಣ) ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ಮಹಾಮೇಳಾವ್ ಗೆ ಅವಕಾಶ ನಿರಾಕರಿಸಿದ್ದರೂ ಎಂಇಎಸ್ ನವರು ವ್ಯಾಕ್ಸಿನ್ ಡಿಪೊ ಮೈದಾನದತ್ತ ಧಾವಿಸುತ್ತಲೇ ಇದ್ದಾರೆ. ಪೊಲೀಸರು ಅವರನ್ನು ವಶಕ್ಕೆ ಪಡೆದು, ತಮ್ಮ ವಾಹನದಲ್ಲಿ ಕರೆದೊಯ್ಯುತ್ತಿದ್ದಾರೆ. ಸ್ಥಳದಲ್ಲಿ ಆತಂಕದ ವಾತಾವರಣವಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.