ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರಿಗೆ ಅವಾಚ್ಯ ಪದ ಬಳಸಿ ನಿಂದಿಸಿದ ಆರೋಪದ ಮೇಲೆ ಬಂಧಿತರಾದ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಶುಕ್ರವಾರ ಬೆಳಿಗ್ಗೆ 11.10ಕ್ಕೆ ನಗರದ 5ನೇ ಹೆಚ್ಚುವರಿ ಜೆಎಂಎಫ್ಸಿ ನ್ಯಾಯಾಲಯದ ಹಾಜರುಪಡಿಸಲಾಯಿತು.

ನ್ಯಾಯಾಲಯದ ಆವರಣದಲ್ಲಿ ಅಪಾರ ಸಂಖ್ಯೆಯಲ್ಲಿ ಸೇರುತ್ತಿರುವ ಬಿಜೆಪಿ ಕಾರ್ಯಕರ್ತರು, ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

ನ್ಯಾಯಾಲಯದ ಬಳಿ ಇರುವ ರಾಣಿ ಚನ್ನಮ್ಮನ ವೃತ್ತದಲ್ಲಿ ಬೆಳಿಗ್ಗೆ 11ಕ್ಕೆ ಬಿಜೆಪಿಯವರು ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ಕರೆ ಕೊಟ್ಟಿದ್ದಾರೆ. ಹಾಗಾಗಿ ವೃತ್ತದಲ್ಲಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.

ವಿಚಾರಣೆ ಆರಂಭಿಸಿದ ನ್ಯಾಯಾಧೀಶರಾದ ಸ್ಪರ್ಶ ಡಿಸೋಜಾ

ನ್ಯಾಯಾಧೀಶರಾದ ಸ್ಪರ್ಶಾ ಡಿಸೋಜಾ ಅವರ ಮುಂದೆ ರವಿ ಅವರನ್ನು ಹಾಜರುಪಡಿಸಲಾಯಿತು. ಬಿಜೆಪಿ ರಾಜ್ಯ ವಕ್ತಾರರೂ ಆಗಿರುವ ವಕೀಲ ಎಂ.ಬಿ.ಝಿರಲಿ ಅವರು ಸಿ.ಟಿ.ರವಿ ಪರ ವಕಾಲತು ವಹಿಸಿದ್ದಾರೆ.

ಇದಕ್ಕೂ ಮುನ್ನ ಒಂದು ತಾಸಿ ನ್ಯಾಯಾಲಯದಲ್ಲಿ ಬೀಡು ಬಿಟ್ಟಿದ್ದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮುಖಂಡರು ಹಾಗೂ ವಕೀಲರೊಂದಿಗೆ ಚರ್ಚಿಸಿದರು.

ನ್ಯಾಯಾಲಯದ ಮುಂದೆ ಅಪಾರ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರೂ ಸೇರಿದ್ದಾರೆ.
.ಸಚಿವೆಗೆ ಮಾನಹಾನಿ ಪದ ಬಳಸಿ ನಿಂದನೆ ಆರೋಪ: ಖಾನಾಪುರ ಠಾಣೆಗೆ ಸಿ.ಟಿ.ರವಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.