ಬೆಳಗಾವಿ: ‘ಪ್ರತಿ ಟನ್ ಕಬ್ಬಿಗೆ ₹3,500 ನೀಡುವಂತೆ ಒತ್ತಾಯಿಸಿ ರೈತರು ನಡೆಸುತ್ತಿರುವ ಹೋರಾಟಕ್ಕೆ ನ್ಯಾಯ ಒದಗಿಸಲು ಜಿಲ್ಲಾಡಳಿತಕ್ಕೆ ಐದು ದಿನಗಳ ಗಡುವು ಕೊಡುತ್ತೇವೆ. ಅಷ್ಟರೊಳಗೆ ಬೇಡಿಕೆ ಈಡೇರದಿದ್ದರೆ ಹೋರಾಟ ತೀವ್ರಗೊಳಿಸಬೇಕಾಗುತ್ತದೆ’ ಎಂದು ಭಾರತೀಯ ಕೃಷಿಕ ಸಮಾಜ(ರೈತ ಸಂಘಟನೆ) ಮುಖಂಡ ಸಿದಗೌಡ ಮೋದಗಿ ಎಚ್ಚರಿಕೆ ಕೊಟ್ಟರು.

ಇಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಹಾರಾಷ್ಟ್ರದ ಸಕ್ಕರೆ ಕಾರ್ಖಾನೆಗಳು ಪ್ರತಿ ಟನ್ ಕಬ್ಬಿಗೆ ₹3,750 ನೀಡುತ್ತಿವೆ. ಹೀಗಿರುವಾಗ ಜಿಲ್ಲೆಯ ಕಾರ್ಖಾನೆಗಳಿಂದ ₹3,500 ಕೊಡಿಸಲಾಗದಿದ್ದರೆ ಜಿಲ್ಲಾಡಳಿತ ರೈತರ ಪರವಾಗಿದೆಯೋ ಅಥವಾ ಕಾರ್ಖಾನೆಗಳ ಪರವೋ ಎಂಬ ಅನುಮಾನ ಮೂಡುತ್ತದೆ’ ಎಂದರು.

‘ಮೂಡಲಗಿ ತಾಲ್ಲೂಕಿನ ಗುರ್ಲಾಪುರ ಕ್ರಾಸ್ನಲ್ಲಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ಸೂಚಿಸಲು ಸೋಮವಾರ ರಾಜ್ಯಮಟ್ಟದ ಸಭೆ ನಡೆಸಿ ಚರ್ಚಿಸಿದ್ದೇವೆ. ನ್ಯಾಯ ಸಿಗುವವರೆಗೂ ರೈತರು ಹೋರಾಟ ಮುಂದುವರಿಸಬೇಕು. ಯಾವ ಕಾರಣಕ್ಕೂ ರಾಜಿ ಆಗಬಾರದು’ ಎಂದು ಹೇಳಿದರು.

ಮಾಜಿ ಸಚಿವ ಶಶಿಕಾಂತ ನಾಯಿಕ, ರೈತ ಮುಖಂಡರಾದ ಶಂಕರ ಅಂಬಲಿ ಇತರರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.