ಬೆಳಗಾವಿ: ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಇಂಗಳಿ ಗ್ರಾಮದಲ್ಲಿ ಶ್ರೀರಾಮ ಸೇನೆ ಕಾರ್ಯಕರ್ತರನ್ನು ಮರಕ್ಕೆ ಕಟ್ಟಿ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಅವರು ಪಿಎಸ್ಐ ನಿಖಿಲ್ ಕಾಂಬಳೆ ಅವರನ್ನು ಅಮಾನತು ಮಾಡಿ ಮಂಗಳವಾರ ಆದೇಶ ಹೊರಡಿಸಿದ್ದಾರೆ.

ಶ್ರೀರಾಮ ಸೇನೆ ಕಾರ್ಯಕರ್ತರು ಜೂನ್ 26ರಂದು ಗೋವು ಸಾಗಿಸುತ್ತಿದ್ದ ವಾಹನ ಹಿಡಿದು ಠಾಣೆಗೆ ತಂದಿದ್ದರು. ಪೊಲೀಸರು ಗೋವುಗಳನ್ನು ಗೋ ಶಾಲೆಗೆ ಸಾಗಿಸಿದ್ದರು. ಆದರೆ, ಪ್ರಕರಣ ಕುರಿತು ಎಫ್ಐಆರ್ ದಾಖಲಿಸಿಲ್ಲ. ಈ ವಿಷಯವನ್ನು ಮೇಲಧಿಕಾರಿಗಳ ಗಮನಕ್ಕೂ ತಂದಿಲ್ಲ. ಅಲ್ಲದೇ, ಜಿಲ್ಲೆಯಿಂದ ಗಡೀಪಾರಾದ ಶ್ರೀರಾಮ ಸೇನೆಯ ಕಾರ್ಯಕರ್ತ, ರೌಡಿಶೀಟರ್ ಮಹಾವೀರ ಎಂಬಾತನನ್ನೂ ಹಾಗೇ ಬಿಟ್ಟು ಕಳಿಸಿದ್ದಾರೆ. ಇದನ್ನು ಕರ್ತವ್ಯ ಲೋಪ ಎಂದು ಪರಿಗಣಿಸಿ ಅಮಾನತು ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.