ಚಾಲಕ ಸರಿಯಾದ ಮಾಹಿತಿ ನೀಡುತ್ತಿಲ್ಲ. ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಇಬ್ಬರು ಡಿಸಿಪಿಗಳ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ.
- ಸೀಮಾಂತ್ಕುಮಾರ್ ಸಿಂಗ್, ನಗರ ಪೊಲೀಸ್ ಕಮಿಷನರ್
ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಸುಳಿವು ಸಿಕ್ಕಿದೆ. ಶೀಘ್ರದಲ್ಲೇ ಬಂಧಿಸುತ್ತೇವೆ. ಎಟಿಎಂಗಳಿಗೆ ಹಣ ಹಾಕುವ ಮಾಹಿತಿಯನ್ನು ಆರೋಪಿಗಳಿಗೆ ನೀಡಿರುವುದು ಗೊತ್ತಾಗಿದೆ.
- ಜಿ.ಪರಮೇಶ್ವರ, ಗೃಹ ಸಚಿವ
ಬೆಂಗಳೂರಿನ ಅಶೋಕ ಪಿಲ್ಲರ್ ಬಳಿ ಬುಧವಾರ ಮಧ್ಯಾಹ್ನ ಎಟಿಎಂಗೆ ಹಣ ತುಂಬುವ ವಾಹನದಲ್ಲಿ ಹಣ ದರೋಡೆಯಾಗಿದ್ದು, ₹7 ಕೋಟಿ ಹಣವಿತ್ತು ಎಂದು ಅಂದಾಜಿಸಲಾಗಿದೆ. ದರೋಡೆಕೋರರು ತೆರಿಗೆ ಇಲಾಖೆ ಅಧಿಕಾರಿಗಳ ಸೋಗಿನಲ್ಲಿ ಬಂದು ದರೋಡೆ ಮಾಡಿದ್ದಾರೆ. #robberypic.twitter.com/p7JMVegHXc