ಎಂ.ಜಿ. ರಸ್ತೆಗೆ ವೈಟ್‌ಟಾಪಿಂಗ್ ಇಲ್ಲ:
ಅತಿ ಹೆಚ್ಚು ವಾಹನ ಸಂಚಾರವಿರುವ ಎಂ.ಜಿ.ರಸ್ತೆಯನ್ನು ವೈಟ್‌ಟಾಪಿಂಗ್ ಮಾದರಿಯಲ್ಲಿ ಅಭಿವೃದ್ಧಿಪಡಿಸುವುದಕ್ಕೆ ತೀರ್ಮಾನಿಸಲಾಗಿತ್ತು. ಆದರೆ, ಸಂಚಾರ ದಟ್ಟಣೆ ಹೆಚ್ಚಾಗಿರುವುದರಿಂದ ಸಂಚಾರ ಪೊಲೀಸರು ಅವಕಾಶ ನೀಡುತ್ತಿಲ್ಲ. ಹೀಗಾಗಿ, ಡಾಂಬರೀಕರಣ ಮಾಡುವುದಕ್ಕೆ ಚಿಂತನೆ ನಡೆಸಲಾಗಿದೆ ಎಂದು ತುಷಾರ್ ಗಿರಿನಾಥ್ ಹೇಳಿದರು.