ಬೆಂಗಳೂರು: ನಗರದ ಕೆಆರ್ ಮಾರುಕಟ್ಟೆ ಬಳಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದ್ದು ಈ ಸಂಬಂಧ ಎಸ್.ಜೆ. ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಮಿಳುನಾಡು ಮೂಲದ ಮಹಿಳೆಯ ಮೇಲೆ ಇಬ್ಬರು ಅತ್ಯಾಚಾರ ಎಸಗಿ ಮೊಬೈಲ್ ಹಾಗೂ ಚಿನ್ನದ ಸರ ದರೋಡೆ ನಡೆಸಿದ್ದಾರೆ. ಕೆಆರ್ ಮಾರುಕಟ್ಟೆ ಗೋಡೌನ್ ಸ್ಟ್ರೀಟ್ನಲ್ಲಿ ಘಟನೆ ನಡೆದಿದೆ.

ಮನೆಯಲ್ಲಿ ಪತಿ ಜತೆಗೆ ಗಲಾಟೆ ಮಾಡಿಕೊಂಡಿದ್ದ ಮಹಿಳೆ ತಮಿಳುನಾಡಿನಿಂದ ಬೆಂಗಳೂರಿಗೆ ಬಂದಿದ್ದರು. ಕೆಆರ್ ಮಾರುಕಟ್ಟೆಯಲ್ಲಿ ಬಸ್ಗಾಗಿ ಕಾಯುತ್ತಿದ್ದರು. ಆಗ ಇಬ್ಬರು ಆರೋಪಿಗಳು ಮಹಿಳೆಯನ್ನು ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಂತ್ರಸ್ತೆ ನೀಡಿರುವ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಸಿಸಿಟಿವಿ ಕ್ಯಾಮೆರಾ ಪರಿಶೀಲನೆ ನಡೆಸಲಾಗುತ್ತಿದೆ. ಕೆಲವು ಸ್ಥಳಗಳಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾಗಳಲ್ಲಿ ಆರೋಪಿಗಳು ಓಡಾಟ ನಡೆಸಿರುವ ದೃಶ್ಯಸೆರೆಯಾಗಿದೆ. ಆರೋಪಿಗಳ ಪತ್ತೆಗೆ ಪ್ರತ್ಯೇಕ ತಂಡ ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.