ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Bengaluru Bandh | ಬೆಂಗಳೂರಿನ ಹೋಟೆಲ್‌ಗೆ ನುಗ್ಗಿ ಗಲಾಟೆ: ಪ್ರಕರಣ ದಾಖಲು

Published 26 ಸೆಪ್ಟೆಂಬರ್ 2023, 2:13 IST
Last Updated 26 ಸೆಪ್ಟೆಂಬರ್ 2023, 13:09 IST
ಅಕ್ಷರ ಗಾತ್ರ
02:0726 Sep 2023

‘ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬಾರದು’ ಎಂದು ಆಗ್ರಹಿಸಿ ಕಾವೇರಿ ಜಲ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಇಂದು ಬೆಂಗಳೂರು ಬಂದ್‌ಗೆ ಕರೆ ನೀಡಲಾಗಿದೆ.

02:0726 Sep 2023

ಬೆಂಗಳೂರು ಬಂದ್‌ಗೆ ಬಿಜೆಪಿ, ಜೆಡಿಎಸ್‌ ಬೆಂಬಲ

ಕಾವೇರಿ ಜಲ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಇಂದು ಬೆಂಗಳೂರು ಬಂದ್‌ಗೆ ಕರೆ ನೀಡಲಾಗಿದೆ. ಬಿಜೆಪಿ ಹಾಗೂ ಜೆಡಿಎಸ್‌ ಜತೆ, 50ಕ್ಕೂ ಹೆಚ್ಚು ಸಂಘಟನೆಗಳು ಬಂದ್‌ಗೆ ಬೆಂಬಲ ಸೂಚಿಸಿವೆ.

02:1326 Sep 2023

ಕರವೇ ಪ್ರತ್ಯೇಕ ಪ್ರತಿಭಟನೆ

ಕರ್ನಾಟಕ ರಕ್ಷಣಾ ವೇದಿಕೆಯ ಟಿ.ಎ. ನಾರಾಯಣಗೌಡ ಬಣದಿಂದ ಇಂದು ಬೆಳಿಗ್ಗೆ ಪ್ರತ್ಯೇಕ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಗಾಂಧಿನಗರದಲ್ಲಿ ಇರುವ ಸಂಘಟನೆಯ ಕಚೇರಿಯಿಂದ ವಿಧಾನ ಸೌಧದವರೆಗೆ ಮೆರವಣಿಗೆ ನಡೆಸಿ, ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಕರವೇ ತಿಳಿಸಿದೆ.

‘ಕಾವೇರಿ ನದಿ ವಿಚಾರವಾಗಿ ನಮ್ಮ ಹೋರಾಟ ನಿರಂತರ. ಜನರಲ್ಲಿ ಜಾಗೃತಿ ಮೂಡಿಸುವುದು ಮೊದಲ ಆದ್ಯತೆ. ಬಂದ್ ಮಾಡಿ ಜನಸಾಮಾನ್ಯರಿಗೆ ತೊಂದರೆ ನೀಡುವ ಉದ್ದೇಶ ನಮಗಿಲ್ಲ. ಬಂದ್ ಎಂಬುದು ಹೋರಾಟದ ಕೊನೆಯ ಅಸ್ತ್ರ. ಹೀಗಾಗಿ, ಯಾವುದೇ ಬಂದ್‌ಗೆ ನಮ್ಮ ಬೆಂಬಲವಿಲ್ಲ’ ಎಂದು ಟಿ.ಎ. ನಾರಾಯಣಗೌಡ ತಿಳಿಸಿದ್ದಾರೆ.

02:1726 Sep 2023

ಬಿಎಂಟಿಸಿ ಬಸ್, ಮೆಟ್ರೊ ರೈಲು ಎಂದಿನಂತೆ 

ಬೆಂಗಳೂರು ನಗರದಲ್ಲಿ ಬಿಎಂಟಿಸಿ ಬಸ್ ಸಂಚಾರ ಮತ್ತು ಮೆಟ್ರೊ ರೈಲು ಸಂಚಾರ ಎಂದಿನಂತೆ ಇದೆ.

02:4926 Sep 2023

ಬಿಗಿ ಪೊಲೀಸ್ ಭದ್ರತೆ

ಬೆಂಗಳೂರು ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಮೆಜೆಸ್ಟಿಕ್‌ನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಬಳಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.

02:5626 Sep 2023

ಬಸ್ ಸಂಚಾರ ಎಂದಿನಂತೆ

ಬೆಂಗಳೂರು ನಗರದಲ್ಲಿ ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಮತ್ತು ಮೆಟ್ರೊ ರೈಲು ಸಂಚಾರ ಎಂದಿನಂತೆ ಇದೆ.

03:1826 Sep 2023

ಸ್ಯಾಟ್‌ಲೈಟ್ ಬಸ್ ನಿಲ್ದಾಣದಲ್ಲಿ ಎಂದಿನಂತೆ ಬಸ್ ಸಂಚಾರ

04:1926 Sep 2023

Cauvery Water Dispute: ಮಳವಳ್ಳಿ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

04:2126 Sep 2023

ಕಾವೇರಿಗಾಗಿ ರಾಮನಗರ ಬಂದ್: ಸ್ಟಾಲಿನ್‌ ಚಿತ್ರಕ್ಕೆ ಶ್ರದ್ಧಾಂಜಲಿ ಸಲ್ಲಿಸಿ ಆಕ್ರೋಶ

04:5026 Sep 2023

Bengaluru Bandh: ಪ್ರತಿಭಟನೆ ಮೆರವಣಿಗೆ ಮಾಡದಂತೆ ಪೊಲೀಸರ ತಡೆ