ಬೆಂಗಳೂರು: ಬ್ಯಾಡ್ಮಿಂಟನ್ ತರಬೇತಿಗೆ ಬರುತ್ತಿದ್ದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಆಕೆಯ ನಗ್ನ ಫೋಟೊ ಹಾಗೂ ವಿಡಿಯೊಗಳನ್ನು ಚಿತ್ರೀಕರಿಸಿಕೊಂಡಿದ್ದ ತರಬೇತುದಾರನನ್ನು ಹುಳಿಮಾವು ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ತಮಿಳುನಾಡಿನ ಸುರೇಶ್ ಬಾಲಾಜಿ (26) ಬಂಧಿತ ಆರೋಪಿ.

‘ಅತ್ಯಾಚಾರಕ್ಕೆ ಒಳಗಾದ ಬಾಲಕಿಯ ತಾಯಿ ನೀಡಿದ ದೂರು ಆಧರಿಸಿ, ಆರೋಪಿಯ ವಿರುದ್ಧ ಪೋಕ್ಸೊ(ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ) ಕಾಯ್ದೆ ಪ್ರಕರಣ ದಾಖಲಿಸಿಕೊಂಡು ಬಂಧಿಸಲಾಗಿದೆ. ಎಂಟು ದಿನ ಪೊಲೀಸ್ ಕಸ್ಟಡಿಗೆ ಪಡೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

‘ಆರೋಪಿಯ ಮೊಬೈಲ್ ಜಪ್ತಿ ಮಾಡಿಕೊಂಡು ಪರಿಶೀಲನೆ ನಡೆಸಲಾಗಿದೆ. ಅತ್ಯಾಚಾರಕ್ಕೆ ಒಳಗಾದ 16 ವರ್ಷದ ಬಾಲಕಿ ಸೇರಿದಂತೆ ಎಂಟು ಬಾಲಕಿಯರ ನಗ್ನ ಫೋಟೊಗಳು ಹಾಗೂ ವಿಡಿಯೊಗಳು ಮೊಬೈಲ್ನಲ್ಲಿ ಪತ್ತೆಯಾಗಿವೆ’ ಎಂದು ಮೂಲಗಳು ತಿಳಿಸಿವೆ.

‘ತಮಿಳುನಾಡಿನಿಂದ ನಗರಕ್ಕೆ ಬಂದಿದ್ದ ಆರೋಪಿ, ಕೆಲವು ವರ್ಷಗಳಿಂದ ಠಾಣಾ ವ್ಯಾಪ್ತಿಯಲ್ಲಿ ನೆಲಸಿದ್ದ. ಬ್ಯಾಡ್ಮಿಂಟನ್ ತರಬೇತುದಾರನಾಗಿ ಕೆಲಸ ಮಾಡುತ್ತಿದ್ದ. ಆತ ಕೆಲಸ ಮಾಡುತ್ತಿದ್ದ ಕೋಚಿಂಗ್ ಕೇಂದ್ರಕ್ಕೆ ಎರಡು ವರ್ಷಗಳ ಹಿಂದೆ ಬಾಲಕಿ ಬ್ಯಾಡ್ಮಿಂಟನ್ ತರಬೇತಿಗೆ ಸೇರಿಕೊಂಡಿದ್ದಳು. ಆಕೆಯ ಸ್ನೇಹ ಸಂಪಾದಿಸಿದ್ದ ಆರೋಪಿ, ತನ್ನ ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದ. ಅಲ್ಲದೇ ಯಾರಿಗೂ ವಿಷಯ ತಿಳಿಸದಂತೆ ಬೆದರಿಕೆ ಹಾಕಿದ್ದ’ ಎಂದು ಮೂಲಗಳು ತಿಳಿಸಿವೆ.

‘ಎಸ್ಸೆಸ್ಸೆಲ್ಸಿ ಪರೀಕ್ಷೆಯ ಬಳಿಕ ಅಜ್ಜಿಯ ಮನೆಗೆ ಬಾಲಕಿ ತೆರಳಿದ್ದಳು. ಅಪರಿಚಿತ ಮೊಬೈಲ್ ಸಂಖ್ಯೆಯಿಂದ ಅಜ್ಜಿಯ ಮೊಬೈಲ್ಗೆ ನಗ್ನ ಫೋಟೊಗಳು ರವಾನೆ ಆಗಿದ್ದವು. ಅದನ್ನು ಗಮನಿಸಿದ ಅಜ್ಜಿ, ತಕ್ಷಣ ಸಂತ್ರಸ್ತೆಯ ಪೋಷಕರಿಗೆ ಮಾಹಿತಿ ನೀಡಿದ್ದರು. ಬಳಿಕ ಬಾಲಕಿಯ ತಾಯಿಯು ಮಗಳನ್ನು ವಿಚಾರಿಸಿದಾಗ ತರಬೇತುದಾರ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಹೇಳಿಕೊಂಡಿದ್ದಳು. ಪೋಷಕರು ನೀಡಿದ ದೂರು ಆಧರಿಸಿ, ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

‘ನೃತ್ಯ ತರಬೇತಿ ಹಾಗೂ ಮನೆಪಾಠಕ್ಕೆ ಬಾಲಕಿ ತೆರಳುತ್ತಿದ್ದ ಸಂದರ್ಭದಲ್ಲಿ ಆಕೆಯನ್ನು ಆರೋಪಿ ಮನೆಗೆ ಕರೆದೊಯ್ಯುತ್ತಿದ್ದ. ಲೈಂಗಿಕ ದೌರ್ಜನ್ಯ ಎಸಗಿ ಫೋಟೊ, ವಿಡಿಯೊ ಚಿತ್ರೀಕರಣ ಮಾಡಿಕೊಂಡಿದ್ದ’ ಎಂದು ಮೂಲಗಳು ತಿಳಿಸಿವೆ

ಬಾಲಕಿಯರಿಗೆ ಬೆದರಿಕೆ: ‘ಬ್ಯಾಡ್ಮಿಂಟನ್ ತರಬೇತಿಗೆ ಬರುತ್ತಿದ್ದ ಬಾಲಕಿಯರ ಸ್ನೇಹ ಗಳಿಸುತ್ತಿದ್ದ ಆರೋಪಿ, ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ. ಆ ದೃಶ್ಯವನ್ನು ತನ್ನ ಮೊಬೈಲ್ನಲ್ಲಿ ಚಿತ್ರೀಕರಣ ಮಾಡಿಕೊಳ್ಳುತ್ತಿದ್ದ. ವಿಷಯವನ್ನು ಯಾರಿಗೂ ತಿಳಿಸದಂತೆ ಬೆದರಿಕೆ ಹಾಕುತ್ತಿದ್ದ. ಆರೋಪಿ ಬೆದರಿಕೆ ಹಾಕಿದ್ದರಿಂದ ಯಾರೂ ಬಾಯ್ಬಿಟ್ಟಿರಲಿಲ್ಲ’ ಎಂದು ಮೂಲಗಳು ತಿಳಿಸಿವೆ.

ರಸ್ತೆಯಲ್ಲೂ ದುರ್ವರ್ತನೆ: ‘ಆರೋಪಿ ರಸ್ತೆಯಲ್ಲಿ ಓಡಾಡುವಾಗ ಮಹಿಳೆಯರ ಜತೆಗೆ ದುರ್ವರ್ತನೆ ತೋರುತ್ತಿದ್ದ. ನಡೆದುಕೊಂಡು ಹೋಗುತ್ತಿದ್ದ ಯುವತಿಯರ ಹಿಂಭಾಗ ಸ್ಪರ್ಶಿಸಿ ಪರಾರಿ ಆಗುತ್ತಿದ್ದ. ಅದನ್ನು ವಿಡಿಯೊ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹಾಕುತ್ತಿದ್ದ ಎಂಬುದು ತನಿಖೆಯಿಂದ ಗೊತ್ತಾಗಿದೆ’ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.