ಬೆಂಗಳೂರು: ಸಂಚಾರ ದಟ್ಟಣೆ ಹಾಗೂ ಕಳಪೆ ರಸ್ತೆಯಿಂದ ನಗರದ ಹೊರ ವರ್ತುಲ ರಸ್ತೆಯಲ್ಲಿರುವ ಕಚೇರಿಯನ್ನು ಸ್ಥಳಾಂತರಗೊಳಿಸುವುದಾಗಿ ಬೆಂಗಳೂರು ಮೂಲದ ಲಾಜಿಸ್ಟಿಕ್ ಟೆಕ್ ಕಂಪನಿ ’ಬ್ಲ್ಯಾಕ್ಬಕ್’ ಘೋಷಿಸಿದ ಬೆನ್ನಲ್ಲೇ, ಮೂಲಭೂತ ಸೌಕರ್ಯಗಳ ಸುಧಾರಣೆಗೆ ಸರ್ಕಾರ ತ್ವರಿತವಾಗಿ ಮಧ್ಯಪ್ರವೇಶ ಮಾಡಬೇಕು ಎಂದು ಉದ್ಯಮಿಗಳಾದ ಮೋಹನದಾಸ್ ಪೈ ಹಾಗೂ ಕಿರಣ್ ಮಜುಂದಾರ್ ಷಾ ಆಗ್ರಹಿಸಿದ್ದಾರೆ.
.ಸಂಚಾರ ದಟ್ಟಣೆ, ರಸ್ತೆಗುಂಡಿ: ಬೆಳ್ಳಂದೂರು ತೊರೆಯುವುದಾಗಿ ಹೇಳಿದ ಟೆಕ್ ಕಂಪನಿ.
‘ಇದು ಬೆಂಗಳೂರಿನಲ್ಲಿ ಭಾರಿ ಆಡಳಿತ ವೈಫಲ್ಯದ ಪ್ರತೀಕ’ ಎಂದು ಇನ್ಫೊಸಿಸ್ ಸಂಸ್ಥೆಯ ಮುಖ್ಯ ಹಣಕಾಸು ಅಧಿಕಾರಿ ಮೋಹನ ದಾಸ್ ಪೈ ಎಕ್ಸ್ ಪೋಸ್ಟ್ನಲ್ಲಿ ಹೇಳಿದ್ದಾರೆ.

ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಡಿ.ಕೆ ಶಿವಕುಮಾರ್ಗೆ ಟ್ಯಾಗ್ ಮಾಡಿರುವ ಅವರು, ‘ದಯವಿಟ್ಟು ಗಮನಿಸಿ, ಕಂಪನಿಗಳು ಹೊರವರ್ತುಲ ರಸ್ತೆಯಿಂದ ಸ್ಥಳಾಂತರಗೊಳ್ಳುತ್ತಿವೆ. ಆಶಾದಾಯಕ ಪರಿಸ್ಥಿತಿ ಇಲ್ಲ. ದಯವಿಟ್ಟು ಮಧ್ಯಪ್ರದೇಶ ಮಾಡಿ’ ಎಂದು ಬರೆದುಕೊಂಡಿದ್ದಾರೆ.
.ರಸ್ತೆ ಗುಂಡಿ ಮುಚ್ಚಲು ಆದ್ಯತೆ ನೀಡಿ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್.
‘ಇದು ಗಂಭೀರ ಸಮಸ್ಯೆ. ಇದನ್ನು ಸಮಸ್ಯೆಯನ್ನು ಬಗೆಹರಿಸಲು ತುರ್ತು ಕ್ರಮಗಳ ಅಗತ್ಯವಿದೆ’ ಕಿರಣ್ ಮಜುಂದರ್ ಷಾ ಅವರಿ ಪೈ ಅವರ ಪೋಸ್ಟ್ ಉಲ್ಲೇಖಿಸಿ ಬರೆದುಕೊಂಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳನ್ನೂ ಪೈ ಟ್ಯಾಗ್ ಮಾಡಿದ್ದಾರೆ.
.ಬೆಂಗಳೂರಿನ ರಸ್ತೆ ಅವ್ಯವಸ್ಥೆಗೆ ಉದ್ಯಮಿಗಳ ಆಕ್ರೋಶ:ಆಂಧ್ರಕ್ಕೆ ಬನ್ನಿ ಎಂದ ಲೋಕೇಶ್.ಬೆಂಗಳೂರು | ಮತ್ತೆ ಕಾಡುತ್ತಿರುವ ಸಂಚಾರ ದಟ್ಟಣೆ: ವಾಹನ ಚಾಲಕರು ಹೈರಾಣು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.