ಬೆಂಗಳೂರು: ಕೊಡಗು ಜಿಲ್ಲೆಯ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣದ ತನಿಖೆ ಆರಂಭಿಸಿರುವ ನಗರದ ಹೆಣ್ಣೂರು ಠಾಣೆ ಪೊಲೀಸರು, ಪ್ರಕರಣದ ಕುರಿತು ಶನಿವಾರ ಪ್ರಾಥಮಿಕ ಮಾಹಿತಿ ಕಲೆ ಹಾಕಿದರು.

ವಿನಯ್ ಅವರ ಮರಣ ಪತ್ರ ಆಧರಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ವಕ್ತಾರ ತನ್ನೀರಾ ಮೈನಾ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಆರೋಪಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ನಡೆಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

‘ವಿನಯ್ ಅವರ ಮೊಬೈಲ್, ಲ್ಯಾಪ್ಟಾಪ್ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದ ಮರಣ ಪತ್ರವನ್ನು ಜಪ್ತಿ ಮಾಡಿಕೊಂಡು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ (ಎಫ್ಎಸ್ಎಲ್) ರವಾನೆ ಮಾಡಲಾಗಿದೆ. ವಿನಯ್ ಅವರು ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮುನ್ನ ಯಾರಿಗೆಲ್ಲಾ ಕರೆ ಮಾಡಿದ್ದರು? ಯಾರೊಂದಿಗೆ ಎಷ್ಟು ಸಮಯ ಮಾತುಕತೆ ನಡೆಸಿದ್ದರು ಎಂಬುದನ್ನು ಪರಿಶೀಲನೆ ನಡೆಸಲಾಗುತ್ತಿದೆ. ಮೊಬೈಲ್ ಕರೆಗಳ ವಿವರ ಪಡೆದುಕೊಳ್ಳಲಾಗುತ್ತಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

‘ವಿರಾಜಪೇಟೆ ಕ್ಷೇತ್ರದ ಶಾಸಕರೂ ಆಗಿರುವ ಮುಖ್ಯಮಂತ್ರಿ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಹಾಗೂ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂಥರ್ಗೌಡ ಅವರ ಹೆಸರನ್ನು ಎಫ್ಐಆರ್ನಲ್ಲಿ ಸೇರಿಸಬೇಕು ಎಂದು ವಿನಯ್ ಸಹೋದರ ಜೀವನ್ ಅವರು ಎರಡನೇ ಬಾರಿಗೆ ದೂರು ನೀಡಿದ್ದಾರೆ. ಅವರ ದೂರನ್ನು ಪರಿಶೀಲಿಸಲಾಗುತ್ತಿದೆ’ ಎಂದು ಮೂಲಗಳು ತಿಳಿಸಿವೆ.

ಪೊನ್ನಣ್ಣ ಮಂಥರ್ ಹೆಸರು ಸೇರಿಸಲಾಗದು: ಸಿದ್ದರಾಮಯ್ಯ

ಕಾಂಗ್ರೆಸ್ ಶಾಸಕರಾದ ಪೊನ್ನಣ್ಣ ಮಂಥರ್ ಗೌಡ ಅವರ ಹೆಸರನ್ನು ವಿನಯ್ ಆತ್ಮಹತ್ಯೆ ಪ್ರಕರಣದ ಎಫ್ಐಆರ್ನಲ್ಲಿ ಸೇರಿಸಬೇಕು ಎನ್ನುವ ಬಿಜೆಪಿ ನಾಯಕರ ಬೇಡಿಕೆ ಒಪ್ಪಲು ಆಗದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣದಲ್ಲಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ತನಿಖೆ ಆರಂಭವಾಗಿದ್ದು ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು. ತನಿಖೆ ನಡೆಯುವಾಗ ಪ್ರಕರಣ ಕುರಿತು ಮಾತನಾಡುವುದು ಸರಿಯಲ್ಲ. ಬಿಜೆಪಿ ನಾಯಕರು ಹತಾಶರಾಗಿ ಮಾತನಾಡುತ್ತಿದ್ದಾರೆ. ಸಾವಿನಲ್ಲೂ ರಾಜಕೀಯ ಮಾಡುವುದು ಅವರಿಗೆ ಕರಗತವಾಗಿದೆ ಎಂದು ಸಿದ್ದರಾಮಯ್ಯ ದೂರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.