ಬೆಂಗಳೂರು: ರಿಯಲ್ ಎಸ್ಟೇಟ್ ಕಂಪನಿಯಾದ ‘ಕಾನ್ಫಿಡೆಂಟ್ ಗ್ರೂಪ್’ ಮುಖ್ಯಸ್ಥ ಸಿ.ಜೆ.ರಾಯ್ (57) ಅವರು ಆದಾಯ ತೆರಿಗೆ ಇಲಾಖೆಯ (ಐಟಿ) ಅಧಿಕಾರಿಗಳು ಕಚೇರಿಯಲ್ಲಿ ಇರುವ ಸಂದರ್ಭದಲ್ಲಿಯೇ ಶುಕ್ರವಾರ ಮಧ್ಯಾಹ್ನ 3.15ರ ಸುಮಾರಿಗೆ ಪಿಸ್ತೂಲ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೇರಳದ ರಾಯ್ ಅವರು ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್, ರೆಸಾರ್ಟ್, ಹೋಟೆಲ್, ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿದ್ದರು. ಕೇರಳದಲ್ಲೂ ಹಲವು ಉದ್ಯಮಗಳನ್ನು ನಡೆಸುತ್ತಿದ್ದರು. ‘ಕಾನ್ಫಿಡೆಂಟ್ ಗ್ರೂಪ್’ ಕಚೇರಿ ಸೇರಿದಂತೆ ರಾಯ್ ಅವರಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಕಳೆದ ಮೂರು ದಿನಗಳಿಂದ ಪರಿಶೀಲನೆ ನಡೆಸಿದ್ದರು. ಶುಕ್ರವಾರ ಬೆಳಿಗ್ಗೆಯಿಂದಲೂ ಅವರ ಕಚೇರಿಯಲ್ಲಿ ದಾಖಲೆಗಳ ಪರಿಶೀಲನಾ ಕಾರ್ಯದಲ್ಲಿ ಕೇರಳದ ಐ.ಟಿ ಅಧಿಕಾರಿಗಳು ತೊಡಗಿದ್ದರು.

‘ಪದೇ ಪದೇ ಐ.ಟಿ ಅಧಿಕಾರಿಗಳು ದಾಳಿ ನಡೆಸುತ್ತಿದ್ದಾರೆ. ಮಾನಸಿಕವಾಗಿ ಒತ್ತಡ ಹೇರುತ್ತಿದ್ದಾರೆಂದು ನೊಂದು ತಮ್ಮ ಬಳಿಯಿದ್ದ ಪಿಸ್ತೂಲ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

‘ರಾಯ್ ಅವರ ಗುಂಡು ಹಾರಿಸಿಕೊಳ್ಳಲು ಬಳಸಿದ ಪಿಸ್ತೂಲ್ ವಶಕ್ಕೆ ಪಡೆದುಕೊಳ್ಳಲಾಗಿದೆ. ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳ ಎದುರೇ ಗುಂಡು ಹಾರಿಸಿಕೊಂಡರೇ ಎಂಬುದನ್ನು ಪರಿಶೀಲನೆ ನಡೆಸಲಾಗುತ್ತಿದೆ. ಐ.ಟಿ ಅಧಿಕಾರಿಗಳನ್ನೂ ವಿಚಾರಣೆಗೆ ಒಳಪಡಿಸಿ, ಮಾಹಿತಿ ಕಲೆ ಹಾಕಲಾಗಿದೆ. ಕಚೇರಿಯ ಸಿ.ಸಿ.ಟಿ.ವಿ ಕ್ಯಾಮೆರಾಗಳಲ್ಲಿ ಸೆರೆಯಾದ ದೃಶ್ಯಾವಳಿ ಪಡೆದುಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.

ಘಟನೆ ನಡೆದ ಕಚೇರಿಗೆ ನಗರ ಪೊಲೀಸ್ ಕಮಿಷನರ್ ಸೀಮಾಂತ್ಕುಮಾರ್ ಸಿಂಗ್ ಹಾಗೂ ಕೇಂದ್ರ ವಿಭಾಗದ ಡಿಸಿಪಿ ಅಕ್ಷಯ್ ಹಾಕೇ ಅವರು ಭೇಟಿ ನೀಡಿ ಪರಿಶೀಲಿಸಿದರು. ಕಾನ್ಫಿಡೆಂಟ್ ಗ್ರೂಪ್ ಕೇರಳ ವಿಭಾಗದ ವ್ಯವಸ್ಥಾಪಕ ನಿರ್ದೇಶಕ ಟಿ.ಜೆ.ಜೋಸೆಫ್ ಅವರು ದೂರು ಆಧರಿಸಿ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

ಮಧ್ಯಾಹ್ನ ಕಚೇರಿಗೆ ಬಂದಿದ್ದ ರಾಯ್:

ಐ.ಟಿ ಅಧಿಕಾರಿಗಳು ಸೂಚನೆ ಮೇರೆಗೆ ಮಧ್ಯಾಹ್ನ ಕಚೇರಿಗೆ ಬಂದಿದ್ದ ಅವರು ಒಂದು ತಾಸು ವಿಚಾರಣೆ ಎದುರಿಸಿದ್ದರು. ಅದಾದ ಮೇಲೆ ತಮ್ಮ ಚೇಂಬರ್ಗೆ ಮಧ್ಯಾಹ್ನ 3ರ ಸುಮಾರಿಗೆ ದಾಖಲೆ ತರುವುದಾಗಿ ಹೇಳಿ ಹೋಗಿದ್ದರು. ಅಲ್ಲಿ ಅವರು ಗುಂಡು ಹಾರಿಸಿಕೊಂಡಿದ್ದರು. ಜೋರಾದ ಶಬ್ದ ಕೇಳಿ ಐ.ಟಿ ಅಧಿಕಾರಿಗಳು ಹಾಗೂ ಕಚೇರಿಯ ಸಿಬ್ಬಂದಿ ಕೊಠಡಿಗೆ ತೆರಳಿ ನೋಡಿದಾಗ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಸ್ಥಳದಲ್ಲಿದ್ದ ಕಚೇರಿ ಸಿಬ್ಬಂದಿ ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದರು. ಪರಿಶೀಲನೆ ನಡೆಸಿದ ವೈದ್ಯರು, ಮಾರ್ಗಮಧ್ಯದಲ್ಲಿಯೇ ಮೃತಪಟ್ಟಿದ್ದಾರೆ ಎಂಬುದನ್ನು ದೃಢಪಡಿಸಿದರು. ಮರಣ ಪತ್ರ ಏನಾದರೂ ಬರೆದಿಟ್ಟಿದ್ದಾರೆಯೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

ರಾಯ್ ಅವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. ಪುತ್ರ ರೋಹಿತ್ ಅವರು ಕಾನ್ಫಿಡೆಂಟ್ ಗ್ರೂಪ್ನ ಅಂತರರಾಷ್ಟ್ರೀಯ ವ್ಯಾಪಾರ ಮತ್ತು ವಿನ್ಯಾಸ ವಿಭಾಗವನ್ನು ನಿರ್ವಹಿಸುತ್ತಿದ್ದಾರೆ ಎಂದು ಮೂಲಗಳು ಹೇಳಿವೆ.

‘ನಾರಾಯಣ ಆಸ್ಪತ್ರೆಯಲ್ಲಿ ಮೃತದೇಹ ಇರಿಸಲಾಗಿದ್ದು, ಮರಣೋತ್ತರ ಪರೀಕ್ಷೆಯ ಬಳಿಕ ಮೃತದೇಹವನ್ನು ಹಸ್ತಾಂತರ ಮಾಡಲಾಗುವುದು’ ಎಂದು ಮೂಲಗಳು ಹೇಳಿವೆ.

ಸ್ವಯಂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಪ್ರಾಥಮಿಕ ತನಿಖೆಯಂತೆ ಮೇಲ್ನೋಟಕ್ಕೆ ರಾಯ್ ಅವರೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತೆ ಕಂಡುಬರುತ್ತಿದೆ. ಕುಟುಂಬದವರು ನೀಡುವ ದೂರು ಆಧರಿಸಿ ಮುಂದಿನ ತನಿಖೆ ನಡೆಸಲಾಗುವುದು. ಯಾವ ಪಿಸ್ತೂಲ್ ಬಳಸಲಾಗಿತ್ತು? ಅದರ ಸಾಮರ್ಥ್ಯ ಏನು ಎಂಬುದನ್ನೂ ಪರಿಶೀಲಿಸಲಾಗುವುದು. ಕಳೆದ ಮೂರು ದಿನಗಳಿಂದ ಐ.ಟಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದರು ಎಂಬ ಮಾಹಿತಿಯಿದೆ. ಕೇರಳದ ಐ.ಟಿ ಅಧಿಕಾರಿಗಳ ಜತೆಗೆ ನಗರ ಪೊಲೀಸರು ಸಂಪರ್ಕದಲ್ಲಿ ಇದ್ದಾರೆ. ಅವರಿಂದಲೂ ಮಾಹಿತಿ ಪಡೆದುಕೊಳ್ಳಲಾಗಿದೆ. – ಸೀಮಾಂತ್ ಕುಮಾರ್ ಸಿಂಗ್ ನಗರ ಪೊಲೀಸ್ ಕಮಿಷನರ್

‘ಐ.ಟಿ ದಾಳಿ ಒತ್ತಡದಲ್ಲಿದ್ದ ರಾಯ್’

‘ಶುಕ್ರವಾರ ಬೆಳಿಗ್ಗೆ 11ರ ಸುಮಾರಿಗೆ ಸಹೋದರ ನನ್ನೊಂದಿಗೆ ಮೊಬೈಲ್ನಲ್ಲಿ ಮಾತನಾಡಿದ್ದರು. ಕೇರಳದ ಐ.ಟಿ ಅಧಿಕಾರಿಗಳು ಮೂರು ದಿನಗಳಿಂದ ಪರಿಶೀಲನೆ ನಡೆಸುತ್ತಿದ್ದರು. ದಾಳಿಯಿಂದ ಸ್ವಲ್ಪ ಗೊಂದಲದಲ್ಲಿ ಇದ್ದೇನೆ ಎಂಬುದಾಗಿಯೂ ಹೇಳಿಕೊಂಡಿದ್ದರು. ಜ.27ರಂದು ನನ್ನ ಮನೆಗೂ ಐ.ಟಿ ಅಧಿಕಾರಿಗಳು ಬಂದು ಪರಿಶೀಲನೆ ನಡೆಸಿ ಹೋಗಿದ್ದರು. ಕೌಟುಂಬಿಕವಾಗಿ ಯಾವುದೇ ಸಮಸ್ಯೆ ಇರಲಿಲ್ಲ. ಸಾಲವೂ ಇರಲಿಲ್ಲ. ಸಹೋದರ ಹೆದರಿಕೊಳ್ಳುವ ವ್ಯಕ್ತಿ ಅಲ್ಲ. ಕೇರಳದ ಐ.ಟಿ ಅಧಿಕಾರಿಗಳ ಒತ್ತಡದಿಂದಲೇ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ರಾಯ್ ಸಹೋದರ ಸಿ.ಜೆ.ಬಾಬ ಆರೋಪಿಸಿದರು.

‘ಪುತ್ರ ಹಾಗೂ ಪುತ್ರಿ ದುಬೈನಲ್ಲಿದ್ದು ನಗರಕ್ಕೆ ಬರುತ್ತಿದ್ದಾರೆ’ ಎಂದು ಮಾಹಿತಿ ನೀಡಿದರು.

‘ಕಾನ್ಫಿಡೆಂಟ್ ಗ್ರೂಪ್’ ಕಟ್ಟಿ ಸಾವಿರಾರು ಕೋಟಿ ಒಡೆಯ

ಉದ್ಯಮಿ ಸಿ.ಜೆ.ರಾಯ್ ಅವರು 1997ರಲ್ಲಿ ಎಚ್.ಪಿ ಕಂಪನಿಯಲ್ಲಿ ಕೆಲಸಕ್ಕೆ ಸೇರಿದ್ದರು. ಅದಾದ ಮೇಲೆ ಕೆಲಸ ಬಿಟ್ಟು ನಗರದಲ್ಲಿ ಉದ್ಯಮ ಕ್ಷೇತ್ರಕ್ಕೆ ಕಾಲಿಟ್ಟಿದ್ದರು. ಸಣ್ಣ ಪ್ರಮಾಣದಲ್ಲಿ ಉದ್ಯಮ ಆರಂಭಿಸಿದ್ದ ಅವರು ಬಳಿಕ ‘ಕಾನ್ಫಿಡೆಂಟ್ ಗ್ರೂಪ್’ ಎಂಬ ದೊಡ್ಡ ಸಂಸ್ಥೆ ಕಟ್ಟಿದ್ದರು. ನೂರಾರು ಮಂದಿಗೆ ಕೆಲಸವನ್ನೂ ಕೊಟ್ಟಿದ್ದರು. ಸರ್ಜಾಪುರ ಬೆಳ್ಳಂದೂರು ಸೇರಿದಂತೆ ನಗರದ ಹೊರವಲಯದಲ್ಲಿ ರಿಯಲ್ ಎಸ್ಟೇಟ್ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದರು. ಸಾವಿರಾರು ಕೋಟಿ ಒಡೆಯರಾಗಿದ್ದ ಅವರು ಹತ್ತಾರು ಲೇಔಟ್ ನಿರ್ಮಿಸಿದ್ದರು ಎಂದು ಅವರ ಆತ್ಮೀಯರು ಹೇಳಿದ್ದಾರೆ.

‘ಆರಂಭದಲ್ಲಿ ರಾಯ್ ಅವರ ಬಳಿ ‘ಮಾರುತಿ–800’ ಕಾರು ಮಾತ್ರ ಇತ್ತು. ಬಳಿಕ ವಿದೇಶಿ ಕಂಪನಿಗಳ ಹಲವು ಐಷಾರಾಮಿ ಕಾರುಗಳನ್ನೂ ಅವರು ಖರೀದಿಸಿದ್ದರು. ಹಲವು ರಿಯಾಲಿಟಿ ಶೋಗಳಿಗೆ ಪ್ರಾಯೋಜಕತ್ವ ನೀಡಿದ್ದರು. ದೇಶದ ಶ್ರೀಮಂತರ ಪೈಕಿ ರಾಯ್ ಸಹ ಒಬ್ಬರು’ ಎಂದು ಆಪ್ತರು ಹೇಳಿದರು.

ರಿಯಲ್ ಎಸ್ಟೇಟ್ ಮಾತ್ರವಲ್ಲದೇ ಕನ್ನಡ ಹಾಗೂ ಮಲಯಾಳ ಭಾಷೆಗಳ 15ಕ್ಕೂ ಹೆಚ್ಚು ಚಿತ್ರಗಳನ್ನೂ ನಿರ್ಮಾಣ ಮಾಡಿದ್ದರು. ರಾಯ್ ಅವರು ಮನರಂಜನೆ ಶಿಕ್ಷಣ ಆತಿಥ್ಯ ಚಿಲ್ಲರೆ ವ್ಯಾಪಾರ ಮತ್ತು ಅಂತರರಾಷ್ಟ್ರೀಯ ವ್ಯಾಪಾರದಂತಹ ವಿವಿಧ ಕ್ಷೇತ್ರಗಳಲ್ಲಿಯೂ ತಮ್ಮ ಉದ್ಯಮ ವಿಸ್ತರಿಸಿದ್ದರು ಎಂದು ಮೂಲಗಳು ಹೇಳಿವೆ.

ರಾಯ್ ಅವರು ಐಷಾರಾಮಿ ಕಾರುಗಳ ಪ್ರಿಯ. ದುಬೈ ಮತ್ತು ಭಾರತದಲ್ಲಿ ದುಬಾರಿ ಬೆಲೆಯ ರೋಲ್ಸ್ ರಾಯ್ ಲ್ಯಾಂಬೊರ್ಗಿನಿಯಂತಹ ಕಾರುಗಳನ್ನು ಹೊಂದಿದ್ದರು.

ರಾಯ್ ಆತ್ಮಹತ್ಯೆ ಸಮಗ್ರ ತನಿಖೆ: ಡಿಕೆಶಿ

‘ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಪರಿಶೀಲನೆಯ ಮಧ್ಯೆಯೇ ಸಿ.ಜೆ.ರಾಯ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಗೊತ್ತಾಗಿದೆ. ಈ ಬಗ್ಗೆ ಸಾಕಷ್ಟು ಅನುಮಾನಗಳಿದ್ದು ರಾಜ್ಯ ಸರ್ಕಾರದಿಂದಲೇ ಸಮಗ್ರ ತನಿಖೆ ನಡೆಸಲು ಕ್ರಮ ತೆಗೆದುಕೊಳ್ಳುತ್ತೇವೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಕನಕಪುರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು ‘ರಾಯ್ ಅವರು ರಿಯಲ್ ಎಸ್ಟೇಟ್ ಉದ್ಯಮ ಸಾಮಾಜಿಕ ಸೇವೆ ಸಿನಿಮಾ ನಿರ್ಮಾಣದಲ್ಲಿ ತೊಡಗಿಸಿಕೊಂಡಿದ್ದರು. ಆದಾಯ ತೆರಿಗೆ ಅಧಿಕಾರಿಗಳು ಪ್ರಶ್ನಿಸುತ್ತಿರುವಾಗಲೇ ಓಡಿಹೋಗಿ ಗುಂಡು ಹಾರಿಸಿಕೊಂಡಿದ್ದಾರೆ. ಈ ಬಗ್ಗೆ ತನಿಖೆ ನಡೆಸುತ್ತೇವೆ. ದೆಹಲಿಯಿಂದಲೂ ಈ ಬಗ್ಗೆ ವರದಿ ನೀಡಿ ಎಂದು ಸೂಚನೆ ಬಂದಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.