ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಳ(ಕೆಎಂಎಫ್), ಇದೇ ಮೊದಲ ಬಾರಿಗೆ 'ನಂದಿನಿ ಬ್ರ್ಯಾಂಡ್'ನ ಪ್ರೋಟೀನ್ಯುಕ್ತ ದೋಸೆ ಹಿಟ್ಟು ಮತ್ತು ಇಡ್ಲಿ ಹಿಟ್ಟನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ.

ವಿಧಾನಸೌಧದಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಂದಿನಿ ಬ್ರ್ಯಾಂಡ್ನ 'ರೆಡಿ ಟು ಕುಕ್' ನಂದಿನಿ ವೇ ಪ್ರೋಟೀನ್ ಆಧಾರಿತ ಇಡ್ಲಿ ಮತ್ತು ದೋಸೆ ಹಿಟ್ಟನ್ನು ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಸಚಿವರಾದ ವೆಂಕಟೇಶ್ವರ, ಕೃಷ್ಣ ಬೈರೇಗೌಡ, ದಿನೇಶ್ ಗುಂಡೂರಾವ್, ಕೆ.ಎಂ.ಎಫ್. ಅಧ್ಯಕ್ಷ ಭೀಮಾನಾಯ್ಕ್, ವ್ಯವಸ್ಥಾಪಕ ನಿರ್ದೇಶಕ ಕೆ.ಶಿವಸ್ವಾಮಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಶೇಷವೇನು?: ಕೆಎಂಎಫ್ ಬಿಡುಗಡೆ ಮಾಡಿರುವ ದೋಸೆ ಹಾಗೂ ಇಡ್ಲಿ ಹಿಟ್ಟಿನಲ್ಲಿ ಶೇ 5 ರಷ್ಟು ಪ್ರೋಟೀನ್ ಅಂಶವನ್ನು ಮಿಶ್ರ ಮಾಡಲಾಗಿದೆ.

ಬೆಂಗಳೂರು ನಗರದಲ್ಲಿ ಪ್ರಾಯೋಗಿಕವಾಗಿ ದೋಸೆ ಹಾಗೂ ಇಡ್ಲಿ ಹಿಟ್ಟನ್ನು ಎರಡು ವಿಧದ ಪ್ಯಾಕೆಟ್ ಗಳಲ್ಲಿ ಮಾರಾಟ ಮಾಡಲಾಗುತ್ತಿದೆ. 450 ಗ್ರಾಂ. ತೂಕದ ಪ್ಯಾಕೆಟ್ಗೆ ₹40 ಹಾಗೂ 900 ಗ್ರಾಂ. ತೂಕದ ಪ್ಯಾಕೆಟ್ಗೆ ₹80 ಗರಿಷ್ಠ ಮಾರಾಟ ದರ ನಿಗದಿಪಡಿಸಲಾಗಿದೆ.

‘ಗುಣಮಟ್ಟದಲ್ಲಿ ರಾಜಿ ಇಲ್ಲ’

‘ಎಲ್ಲ ಸುರಕ್ಷತಾ ಮಾನದಂಡಗಳನ್ನೂ ಪರಿಶೀಲಿಸಿ ನಂದಿನಿ ಬ್ರ್ಯಾಂಡ್ನ ಇಡ್ಲಿ ಮತ್ತು ದೋಸೆ ಹಿಟ್ಟನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದ್ದೇವೆ. ಗುಣಮಟ್ಟದ ಬಗ್ಗೆ ಸಂಪೂರ್ಣ ಎಚ್ಚರಿಕೆ ವಹಿಸಿದ್ದೇವೆ. ಗುಣಮಟ್ಟದಲ್ಲಿ ಯಾವುದೇ ರಾಜಿ ಇಲ್ಲ. ಮಾರುಕಟ್ಟೆಯಲ್ಲಿರುವ ಇತರ ಎಲ್ಲ ಬ್ರ್ಯಾಂಡ್ಗಳನ್ನೂ ಹಿಂದಿಕ್ಕಿ ಮಾರಾಟ ವಿಸ್ತರಿಸುವ ಗುರಿ ನಮ್ಮ ಮುಂದಿದೆ’ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.