ಬೆಂಗಳೂರು: ‘ಒಂದೇ ಚುನಾವಣೆ ಮಾಡುವುದರಿಂದ ಹಣ ಉಳಿತಾಯವಾಗಲಿದೆ. ಅಭಿವೃದ್ಧಿಗೆ ಹೆಚ್ಚು ಹಣ ದೊರಕಲಿದೆ’ ಎಂದು ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ ತಿಳಿಸಿದರು.

ಜಯನಗರದ ಜೈನ್ ವಿಶ್ವವಿದ್ಯಾಲಯದಲ್ಲಿ ಶುಕ್ರವಾರ ನಡೆದ ‘ಒಂದು ದೇಶ, ಒಂದು ಚುನಾವಣೆ’ ಕುರಿತು ವಿಚಾರಗೋಷ್ಠಿಯಲ್ಲಿ ಅವರು ಮಾತನಾಡಿದರು.

‘ಹಿಂದಿನ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ಸಮಿತಿಯು ಒಂದೇ ಚುನಾವಣೆ ಸಂಬಂಧ ವರದಿ ಕೊಟ್ಟಿದೆ. ಒಂದೇ ಚುನಾವಣೆಯಿಂದ ಆಗುವ ಉಳಿತಾಯದಿಂದ ಜಿಡಿಪಿಗೆ ₹4.5 ಲಕ್ಷ ಕೋಟಿ ಲಭಿಸಬಹುದು’ ಎಂದು ಹೇಳಿದರು.

ಒಂದು ದೇಶ ಒಂದೇ ಚುನಾವಣೆಯಿಂದ ಪ್ರಾದೇಶಿಕ ಪಕ್ಷವು ರಾಷ್ಟ್ರಹಿತದೊಂದಿಗೆ ಹಾಗೂ ರಾಷ್ಟ್ರೀಯ ಪಕ್ಷವು ಪ್ರಾದೇಶಿಕ ಹಿತೈಷಿಯಾಗಿ ಚಿಂತಿಸುವಂತೆ ಆಗಲಿದೆ ಎಂದು ವಿಶ್ಲೇಷಿಸಿದರು.

28 ರಾಜ್ಯಗಳು ಇರುವ ಭಾರತದಲ್ಲಿ ಚುನಾವಣೆ ಎಂಬುದು ನಿರಂತರ ಪ್ರಕ್ರಿಯೆ ಆಗಿದೆ. 45 ದಿನಗಳ ನೀತಿಸಂಹಿತೆಯು ಅಭಿವೃದ್ಧಿ ಪ್ರಕ್ರಿಯೆಗೆ ಅಡ್ಡಿಯಾಗುತ್ತದೆ. 6 ತಿಂಗಳು ಮತದಾರರ ಪಟ್ಟಿ ಸಿದ್ಧಪಡಿಸುವಿಕೆ ನಡೆಯುತ್ತದೆ. 1932ರಿಂದಲೂ ಒಂದು ಚುನಾವಣೆಯ ಬಗ್ಗೆ ಚರ್ಚೆಗಳಾಗುತ್ತಿವೆ. 2019ರಲ್ಲಿ 16 ಪಕ್ಷಗಳು ಒಂದೇ ಚುನಾವಣೆಯನ್ನು ಬೆಂಬಲಿಸಿದ್ದವು. ಸಿಪಿಎಂ ಸೇರಿ 3 ಪಕ್ಷಗಳು ಇದನ್ನು ವಿರೋಧಿಸಿದ್ದವು ಎಂದು ಮಾಹಿತಿ ನೀಡಿದರು.

ಒಂದೇ ಚುನಾವಣೆ ಎಂಬುದು ಸಾರ್ವಜನಿಕ ಹಿತಾಸಕ್ತಿಯ ಕ್ರಮವೇ ಹೊರತು ಹೇರಿಕೆ ಅಲ್ಲ. ಎಲ್ಲವೂ ನಿರೀಕ್ಷೆಯಂತೆ ನಡೆದರೆ 2034ರಲ್ಲಿ ಒಂದೇ ಚುನಾವಣೆ ಜಾರಿ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಶಾಸಕ ಸಿ.ಕೆ.ರಾಮಮೂರ್ತಿ, ಒಂದು ದೇಶ ಒಂದು ಚುನಾವಣೆ ಜಾಗೃತಿ ಸಮಿತಿ ರಾಜ್ಯ ಸಂಚಾಲಕ ನವೀನ್ ಶಿವಪ್ರಕಾಶ್, ರಾಜ್ಯ ಸಹ ಸಂಚಾಲಕ ಅಶ್ವತ್ಥನಾರಾಯಣ್, ಜೈನ್ ವಿಶ್ವವಿದ್ಯಾಲಯದ ಉಪಾಧ್ಯಕ್ಷ ರವೀಂದ್ರ ಭಂಡಾರಿ, ಜಂಟಿ ಕಾರ್ಯದರ್ಶಿ ಸಂತೋಷ್, ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಮತ್ತು ಜೈನ್ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಜಿತೇಂದ್ರ ಮಿಶ್ರ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.