‘ಬೀದರ್ ಉತ್ತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲೇ ದರೋಡೆ, ಹತ್ಯೆ ನಡೆದರೂ ಅದರ ಬಗ್ಗೆ ಒಂದೇ ಒಂದು ಹೇಳಿಕೆ ಕೊಡದ ಪೌರಾಡಳಿತ ಸಚಿವ ರಹೀಂ ಖಾನ್ ಅವರು ಮೂಕ ಸಚಿವರಾಗಿದ್ದಾರೆ. ಇಂಥ ಸಚಿವರನ್ನು ಪಡೆದಿರುವುದು ನಮ್ಮ ದುರ್ದೈವ’ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಸೋಮನಾಥ ಪಾಟೀಲ ಟೀಕಿಸಿದರು.
‘₹1 ಕೋಟಿ ಪರಿಹಾರ ಕೊಡಿ’
ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಕೆ. ಬೆಲ್ದಾಳೆ ಮಾತನಾಡಿ, ಗುಂಡಿನ ದಾಳಿಯಲ್ಲಿ ದರೋಡೆಕೋರರಿಂದ ಮೃತಪಟ್ಟಿರುವ ಗಿರಿ ವೆಂಕಟೇಶ ಅವರ ಕುಟುಂಬಕ್ಕೆ ಸರ್ಕಾರ ₹1 ಕೋಟಿ ಪರಿಹಾರ ಕೊಡಬೇಕು. ಕುಟುಂಬದ ಒಬ್ಬ ಸದಸ್ಯರಿಗೆ ಕಾಯಂ ಉದ್ಯೋಗ ನೀಡಬೇಕು. ಉಸ್ತುವಾರಿ ಸಚಿವರು ನೈತಿಕ ಹೊಣೆ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.