ಬೀದರ್: ‘ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ 1.66 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾಳಾಗಿದೆ ಎಂದು ಜಿಲ್ಲಾಡಳಿತ ಸರ್ಕಾರಕ್ಕೆ ಸಲ್ಲಿಸಿರುವ ವರದಿ ಅವೈಜ್ಞಾನಿಕವಾಗಿದೆ. ವಾಸ್ತವದಲ್ಲಿ ಎರಡು ಲಕ್ಷಕ್ಕೂ ಅಧಿಕ ಹೆಕ್ಟೇರ್ ಬೆಳೆ ಹಾನಿಯಾಗಿದೆ’ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಸೋಮನಾಥ ಪಾಟೀಲ ತಿಳಿಸಿದರು.

ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,‘ಜಿಲ್ಲೆಯಲ್ಲಿ ಶೇ 90ರಷ್ಟು ಹೆಸರು, ಉದ್ದು, ಸೋಯಾ ಅವರೆ, ತೊಗರಿ, ಹತ್ತಿ ಇತರೆ ಬೆಳೆಗಳು ಸಂಪೂರ್ಣ ಹಾಳಾಗಿವೆ. ಆದರೆ, ಜಿಲ್ಲಾಡಳಿತವು ಸರ್ಕಾರಕ್ಕೆ ಸೂಕ್ತ ಮಾಹಿತಿ ಸಲ್ಲಿಸಿಲ್ಲ. ಶೇ 67ರಷ್ಟು ಬೆಳೆ ಹಾನಿಗೊಳಗಾದ ರೈತರ ಮಾಹಿತಿಯೇ ಸಂಗ್ರಹಿಸಿಲ್ಲ. ಸರ್ಕಾರ ಮತ್ತೊಮ್ಮೆ ಕೃಷಿ ಮತ್ತು ಕಂದಾಯ ಇಲಾಖೆಯಿಂದ ಜಂಟಿ ಸರ್ವೇ ನಡೆಸಿ, ವರದಿ ತಯಾರಿಸಿ ಎಲ್ಲಾ ರೈತರಿಗೆ ಪರಿಹಾರ ನೀಡಬೇಕು’ ಎಂದು ಒತ್ತಾಯಿಸಿದರು.

‘ನೆರೆಯ ಮಹಾರಾಷ್ಟ್ರ ಸರ್ಕಾರದ ಮಾದರಿಯಲ್ಲಿ ಪ್ರತಿ ಎಕರೆಗೆ ₹25 ಸಾವಿರ ಪರಿಹಾರ ನೀಡಬೇಕು. ರೈತರ ಬೆಳೆ ಸಾಲ ಮನ್ನಾ ಮಾಡಬೇಕು. ಮಹಾರಾಷ್ಟ್ರದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಹಾನಿಗೊಳಗಾದ ರೈತರಿಗೆ ಪ್ರತಿ ಹೆಕ್ಟೇರ್ಗೆ ₹48 ಸಾವಿರ ಪರಿಹಾರ ನೀಡುತ್ತಿದೆ. ಜಿಲ್ಲೆಯ ರೈತರಿಗೂ ಹೆಕ್ಟೇರ್ಗೆ ಕನಿಷ್ಠ ₹50 ಸಾವಿರ ಪರಿಹಾರ ಕೊಡಬೇಕು. ದೀಪಾವಳಿ ಹಬ್ಬದೊಳಗೆ ರೈತರ ಖಾತೆಗೆ ಹಣ ಜಮೆ ಮಾಡಬೇಕು’ ಎಂದು ಆಗ್ರಹಿಸಿದರು.

‘ಜಿಲ್ಲೆಯ ಏಳು ಕಡೆ ಬಿಜೆಪಿ ನಿಯೋಗ ಬೆಳೆಹಾನಿ ಪರಿಶೀಲಿಸಿದೆ. ಎಲ್ಲೆಡೆ ರೈತರು ತಮ್ಮ ಮುಂದೆ ಗೋಳು ತೋಡಿಕೊಂಡಿದ್ದಾರೆ. ಕೃಷಿ ಜತೆಗೆ ತೋಟಗಾರಿಕೆ ಬೆಳೆಗಳೂ ಹಾಳಾಗಿವೆ. ರೈತರ ಪರಿಹಾರದ ಹಣವನ್ನು ಬ್ಯಾಂಕ್ನವರು ಯಾವುದೇ ಕಾರಣಕ್ಕೂ ಸಾಲಕ್ಕೆ ಕಡಿತ ಮಾಡಿಕೊಳ್ಳಬಾರದು. ರೈತರಿಗೆ ಹಣ ಕೊಡದಿದ್ದರೆ ಅಂತಹ ಬ್ಯಾಂಕ್ ವಿರುದ್ಧ ಹೋರಾಟ ಮಾಡಲಾಗುವುದು’ ಎಂದು ಎಚ್ಚರಿಸಿದರು.

‘ರೈತರ ಸಂಪೂರ್ಣ ಸಾಲ ಮನ್ನಾ, ಬೆಳೆಹಾನಿ ಮತ್ತು ಬೆಳೆವಿಮೆ ಪರಿಹಾರ ನೀಡುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬಿಜೆಪಿ 10 ಸಾವಿರ ರೈತರೊಂದಿಗೆ ಬಸವಕಲ್ಯಾಣದಲ್ಲಿ ಅ.17ರಂದು ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಿದೆ’ ಎಂದು ವಿವರಿಸಿದರು.

ಬಿಜೆಪಿ ರಾಜ್ಯ ಘಟಕದ ಕಾರ್ಯದರ್ಶಿಯೂ ಆದ ಶಾಸಕ ಡಾ.ಶೈಲೇಂದ್ರ ಕೆ.ಬೆಲ್ದಾಳೆ ಮಾತನಾಡಿ,‘ಸಂಕಷ್ಟದಲ್ಲಿರುವ ರೈತರಿಗೆ ಹಿಂಗಾರು ಬಿತ್ತನೆಗಾಗಿ ಉಚಿತ ಬೀಜ, ರಸಗೊಬ್ಬರ ವಿತರಿಸಬೇಕು. ದೀಪಾವಳಿ ಹಬ್ಬದೊಳಗೆ ರೈತರ ಖಾತೆಗೆ ಪರಿಹಾರದ ಮೊತ್ತ ಜಮೆ ಮಾಡಬೇಕು’ ಎಂದು ಆಗ್ರಹಿಸಿದರು.

ಮುಖಂಡರಾದ ಬಾಬು ವಾಲಿ, ಕಿರಣ ಪಾಟೀಲ, ಗುರುನಾಥ ರಾಜಗೀರಾ, ಬಸವರಾಜ ಪವಾರ, ಗುರುನಾಥ ಜ್ಯಾಂತಿಕರ್, ಶ್ರೀನಿವಾಸ ಚೌಧರಿ ಇದ್ದರು.

ಅತಿವೃಷ್ಟಿ ಜಿಲ್ಲೆ ಘೋಷಣೆಗೆ ಆಗ್ರಹ

ಮಳೆ ಮತ್ತು ಪ್ರವಾಹದಿಂದ ಜಿಲ್ಲೆಯ ರೈತರು ತತ್ತರಿಸಿ ಹೋಗಿದ್ದು ಬೀದರ್ ಜಿಲ್ಲೆಯನ್ನು ಅತಿವೃಷ್ಟಿ ಪೀಡಿತ ಜಿಲ್ಲೆಯನ್ನಾಗಿ ಘೋಷಿಸಬೇಕು ಎಂದು ಶಾಸಕ ಪ್ರಭು ಚವಾಣ್ ಆಗ್ರಹಿಸಿದರು. ರಾಜ್ಯದಲ್ಲಿ ಕುರ್ಚಿಗಾಗಿ ಕಿತ್ತಾಟ ನಡೆದಿದೆ. ರೈತರ ಬಗ್ಗೆ ಕಾಳಜಿ ತೋರುತ್ತಿಲ್ಲ. ಓಲೈಕೆ ರಾಜಕಾರಣ ಗ್ಯಾರಂಟಿ ಎಂದು ಹೇಳಿಕೊಂಡು ರೈತರನ್ನು ಕಡೆಗಣಿಸಲಾಗುತ್ತಿದೆ. ಬೆಳೆ ನಷ್ಟಕ್ಕೆ ಮಧ್ಯಂತರ ಪರಿಹಾರವನ್ನೂ ನೀಡಿಲ್ಲ. ಸಮೀಕ್ಷೆಯನ್ನೂ ಸರಿಯಾಗಿ ಮಾಡುತ್ತಿಲ್ಲ. ರೈತರ ಸಾಲ ಮನ್ನಾ ಮರು ಸಮೀಕ್ಷೆ ಸೇರಿ ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅ.18ರಂದು ಔರಾದ್ನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

‘ಮುಖ್ಯಮಂತ್ರಿ ಸಮೀಕ್ಷೆ ಕಾಟಾಚಾರದ್ದು’

ಪ್ರವಾಹದಿಂದಾಗಿ ಹಾನಿಗೊಳಗಾದ ಪ್ರದೇಶಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೈಗೊಂಡಿರುವ ವೈಮಾನಿಕ ಸಮೀಕ್ಷೆ ಕಾಟಾಚಾರದಿಂದ ಕೂಡಿತ್ತು. ಎಲ್ಲೂ ಕೂಡ ಅವರು ರೈತರ ಜಮೀನಿಗೆ ತೆರಳಿ ಪರಿಶೀಲಿಸಿಲ್ಲ. ಭೂಮಿ ಮೇಲೆ ಕಾಲಿಡದೇ ಭೂತಾಯಿಗೆ ದ್ರೋಹ ಬಗೆದಿದ್ದಾರೆ ಎಂದು ಕೇಂದ್ರದ ಮಾಜಿ ಸಚಿವರೂ ಆದ ಬಿಜೆಪಿ ಮುಖಂಡ ಭಗವಂತ ಖೂಬಾ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರವು ರೈತರ ಸಂಕಷ್ಟ ಗಂಭೀರವಾಗಿ ಪರಿಗಣಿಸಿಲ್ಲ. ರೈತರ ಬಡವರ ಕಾರ್ಮಿಕರ ಶಾಪ ಸಿಎಂ ಡಿಸಿಎಂ ಸೇರಿ ಸಚಿವ ಸಂಪುಟದ ಎಲ್ಲ ಸಚಿವರಿಗೆ ತಟ್ಟಲಿದೆ. ಜಿಲ್ಲಾ ಉಸ್ತುವಾರಿ ಸಚಿವರಿಗೆ ಮಾನ ಮರ್ಯಾದೆ ಇದ್ದರೆ ಎರಡ್ಮೂರು ದಿನದೊಳಗೆ ಬೆಳೆಹಾನಿ ಪರಿಹಾರ ರೈತರ ಖಾತೆಗೆ ಜಮೆ ಮಾಡಿಸಬೇಕು ಎಂದು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.