ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಮೇಶ್ವರಂ ಕೆಫೆ ಮಾದರಿಯಲ್ಲಿ ಬಾಂಬ್ ಇಟ್ಟಿದ್ದಾಗಿ ಬೆದರಿಕೆ ಒಡ್ಡಿರುವ ಇ–ಮೇಲ್ ಸಂದೇಶ ನವೆಂಬರ್ 30ರಂದು ಬಂದಿದ್ದು, ಸಿಐಎಸ್ಎಫ್ ಸಿಬ್ಬಂದಿ ನೀಡಿದ ದೂರಿನಂತೆ ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಮಿಳುನಾಡಿನಲ್ಲಿ ಬಂಧಿತರಾಗಿರುವ ಜಾಫರ್ ಸಾದಿಕ್ ಮತ್ತು ಡಿಸಿಎಂ ಉದಯನಿಧಿ ಸ್ಟಾಲಿನ್ ಪತ್ನಿ, ಕೃತಿಗಾ ಉದಯನಿಧಿ ಅವರ ಮೇಲಿರುವ ಕೇಸ್ ಅನ್ನು ವಾಪಸ್ ಪಡೆಯಬೇಕು. ತಿರುಚ್ಚಿ ಸೆಂಟ್ರಲ್ ಜೈಲಿನಲ್ಲಿರುವ ಟಿಎನ್ಎಲ್ಎ ಉಗ್ರ ಸಂಘಟನೆಯ ಮುಖ್ಯಸ್ಥ ಎಸ್. ಮಾರನ್ ಅವರನ್ನು ಬಿಡುಗಡೆ ಮಾಡಬೇಕು ಎಂಬುದಾಗಿ ಬೇಡಿಕೆ ಇಡಲಾಗಿದೆ. ‘ಅಕ್ರಮ್ ವಾಯ್ಕರ್@ಔಟ್ಲುಕ್.ಕಾಂ’ ಎಂಬ ಹೆಸರಿನಿಂದ ಬಂದಿರುವ ಇಂಗ್ಲಿಷ್ ಒಕ್ಕಣಿಕೆಯ ಇ– ಮೇಲ್ನಲ್ಲಿ ಇನ್ನೂ ಅನೇಕ ಹೆಸರುಗಳನ್ನು ಉಲ್ಲೇಖಿಸಲಾಗಿದೆ. ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟಿಸಿ ಪ್ರಯಾಣಿಕರ ಜೀವಕ್ಕೆ ಹಾನಿ ಮಾಡುವುದಾಗಿ ಮೇಲ್ನಲ್ಲಿ ಬೆದರಿಕೆ ಹಾಕಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.