ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎಂಬ ದೂರಿನ ನಂತರ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಸಂಸತ್ತಿನಲ್ಲಿ ಪ್ರಸ್ತಾಪ ಮಾಡದ ಮಂಗಳೂರು ನಗರ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ನಡೆ ಸಂದೇಹಾಸ್ಪದ ಎಂದು ಎಸ್ ಡಿಪಿಐ ದಕ್ಷಿಣ ಕನ್ನಡ ನಗರ ಘಟಕದ ಅಧ್ಯಕ್ಷ ಅಬ್ದುಲ್ ಜಲೀಲ್ ಕೆ ಆರೋಪಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ವರ್ಷದ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಕೋಮುದ್ವೇಷದಿಂದ ನಡೆದ ಕೊಲೆಗಳಿಗೆ ಸಂಬಂಧಪಟ್ಟು ಬಿಜೆಪಿ ಮತ್ತು ಸಂಘ ಪರಿವಾರದವರು ಬೊಟ್ಟು ಮಾಡಿ ತೋರಿಸಿದ ಎಸ್ ಡಿಪಿಐ ಮುಖಂಡರು ಮತ್ತು ಕಾರ್ಯಕರ್ತರನ್ನು ಬಂಧಿಸಲಾಗುತ್ತಿದೆ.

ಧರ್ಮಸ್ಥಳದ ಪ್ರಕರಣದಲ್ಲಿ ಮೃತಶರೀರದ ಅವಶಿಷ್ಟಗಳು ಸಿಗುತ್ತವೆಯೋ ಇಲ್ಲವೋ ಎಂಬ ಆತಂಕದಲ್ಲಿ ಜನರು ಇರುವಾಗ ಸಂಸದರು ಅಧಿವೇಶನದಲ್ಲಿ ಒಂದು ಮಾತೂ ಆಡುತ್ತಿಲ್ಲ. ಧರ್ಮಸ್ಥಳ ಪ್ರಕರಣವನ್ನು ದಿಕ್ಕು ತಪ್ಪಿಸುವ ಪ್ರಯತ್ನದ ಭಾಗವಾಗಿ ಇಲ್ಲಸಲ್ಲದ ಹೇಳಿಕೆಗಳನ್ನು ನೀಡುತ್ತ ಎಸ್ ಡಿಪಿಐ ಮುಖಂಡರ ಮನೆ ಮೇಲೆ ದಾಳಿನಡೆಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಅಬ್ದುಲ್ ಜಲೀಲ್ ದೂರಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಧರ್ಮಸ್ಥಳದಲ್ಲಿ ಕೊಲೆಯಾದ ಬಾಲಕಿಯ ಪರವಾದ ಹೋರಾಟದಲ್ಲಿ ಭಾಗಿಯಾಗಿದ್ದಾರೆ ಎಂಬ ಕಾರಣಕ್ಕೆ ಎಸ್ ಡಿಪಿಐ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ತನಿಖಾ ಸಂಸ್ಥೆಗಳ ಮೂಲಕ ದಾಳಿ ನಡೆಸಲಾಗುತ್ತಿದೆ ಎಂದರು. ಎಸ್ ಡಿಪಿಐ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಕೇಂದ್ರ ಸರ್ಕಾರವು ಆಡಳಿತ ವ್ಯವಸ್ಥೆಯನ್ನು ಸ್ವಂತಕ್ಕೆ ಬಳಸಿಕೊಂಡು ಇಡಿ, ಎನ್ ಐಎ ಮತ್ತು ಸಿಬಿಐಯಂಥ ಸಂಸ್ಥೆಗಳನ್ನು ದುರುಪಯೋಗ ಮಾಡುತ್ತಿದ್ದಾರೆ. ಎಸ್ ಡಿಪಿಐ ಮೇಲೆ ದ್ವೇಷ ಕಾರುತ್ತ ನಾಯಕರು ಮತ್ತು ಕಾರ್ಯಕರ್ತರನ್ನು ಅಕ್ರಮವಾಗಿ ಬಂಧಿಸಲಾಗುತ್ತಿದೆ. ಕೆಲವರನ್ನು 3 ವರ್ಷಗಳಿಂದ ಜೈಲಿನಲ್ಲಿ ಇರಿಸಲಾಗಿದೆ.

'ರೌಡಿ ಶೀಟರ್ ಸುಹಾಸ್ ಶೆಟ್ಟಿ ಕೊಲೆಯ ನಂತರ ಸಂಘ ಪರಿವಾರ ಮತ್ತು ಬಿಜೆಪಿ ನಾಯಕರು ಬಾಲಿಷ ಹೇಳಿಕೆಗಳನ್ನು ನೀಡಿದ್ದರು. ಅವರು ಹೇಳಿದ ಹೆಸರುಗಳ ಆಧಾರದಲ್ಲಿ ಬಂಧಿಸುವ ಕಾರ್ಯ ನಿರಂತರವಾಗಿ ನಡೆಯುತ್ತಿದೆ. ಮೇ 25ರಂದು ವಿಶ್ವ ಹಿಂದೂ ಪರಿಷತ್ ಆಯೋಜಿಸಿದ್ದ ಬಜಪೆ ಚಲೊ ಕಾರ್ಯಕ್ರಮಕ್ಕೂ ಮೊದಲು ಎಸ್ ಡಿಪಿಐ ಸೇರಿದಂತೆ ಎಲ್ಲರೂ ಬಜಪೆಯಲ್ಲಿ ಕಾರ್ಯಕ್ರಮ ಆಯೋಜಿಸುವುದು ಬೇಡ ಎಂದಿದ್ದರು. ಹಾಗೆ ಹೇಳಿದವರನ್ನೇ ತೋರಿಸಿ ಈಗ ಅವರ ಮೇಲೆ ದಾಳಿ ನಡೆಸಲಾಗುತ್ತಿದೆ. ಇದರ ವಿರುದ್ಧ ಕಾನೂನು ಹೋರಟ ನಡೆಸಲಾಗುವುದು ಎಂದು ಅವರು ತಿಳಿಸಿದರು.

ಮಂಗಳೂರು ನಗರ ಘಟಕದ ಉಪಾಧ್ಯಕ್ಷ ಅಶ್ರಫ್ ಅಡ್ಡೂರು, ಪ್ರಧಾನ ಕಾರ್ಯದರ್ಶಿ ಜಮಾಲ್ ಜೋಕಟ್ಟೆ ಮತ್ತು ಮೂಡುಬಿದಿರೆ ಕ್ಷೇತ್ರದ ಅಧ್ಯಕ್ಷ ಇರ್ಷಾದ್ ಕದಿಕೆ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.