ಉಳ್ಳಾಲ (ದಕ್ಷಿಣ ಕನ್ನಡ): ಸಾಮಾಜಿಕ ಮಾಧ್ಯಮದಲ್ಲಿ ಬಾಲಕಿಯನ್ನು ಪರಿಚಯಿಸಿಕೊಂಡ ಯುವಕ, ಐದು ದಿನಗಳಲ್ಲೇ ಆಕೆಯನ್ನು ಪುಸಲಾಯಿಸಿ ಕರೆದೊಯ್ದು ಸೋಮೇಶ್ವರ ಸಮುದ್ರ ತೀರದಲ್ಲಿ ಕಾರೊಳಗೆ ಅತ್ಯಾಚಾರ ಮಾಡಿದ ಬಗ್ಗೆ ಪ್ರಕರಣ ದಾಖಲಾಗಿದೆ.

ಉಳ್ಳಾಲ ಠಾಣೆಯಲ್ಲಿ ಪೋಕ್ಸೊ ಅಡಿ ಪ್ರಕರಣ ದಾಖಲಾಗಿದ್ದು, ಆರೋಪಿ ಅಡ್ಯಾರ್ ವಳಚ್ಚಿಲ್ ನಿವಾಸಿ ಕೆಲ್ವಿನ್ (24) ಎಂಬಾತನನ್ನು ಬಂಧಿಸಲಾಗಿದೆ.

‘ಪಿಯುಸಿ ಮುಗಿಸಿ ನರ್ಸಿಂಗ್ ಶಿಕ್ಷಣಕ್ಕೆ ಕಾಯುತ್ತಿದ್ದ ಸಂತ್ರಸ್ತೆಯನ್ನು ಭೇಟಿಯಾಗುವ ಉದ್ದೇಶದಿಂದ ಕೆಲ್ವಿನ್ ಉಳ್ಳಾಲದ ಮನೆಗೆ ಕಾರಿನಲ್ಲಿ ಕರೆದೊಯ್ದಿದ್ದ. ಬಳಿಕ ಆಕೆಯನ್ನು ಕುತ್ತಾರು ಸಮೀಪದ ಲಾಡ್ಜ್ಗೆ ಕರೆದುಕೊಂಡು ಹೋಗಿ ರೂಮ್ ಕೇಳಿದ್ದಾನೆ. ಆದರೆ, ಬಾಲಕಿಯಾಗಿರುವ ಕಾರಣ ಲಾಡ್ಜ್ ಸಿಬ್ಬಂದಿ ರೂಮ್ ಕೊಟ್ಟಿರಲಿಲ್ಲ. ಸೋಮೇಶ್ವರ ಸಮುದ್ರ ತೀರಕ್ಕೆ ಕರೆದೊಯ್ದು ಕಾರೊಳಗೆ ಅತ್ಯಾಚಾರ ಮಾಡಿದ್ದಾನೆ’ ಎಂದು ಪೊಲೀಸರು ತಿಳಿಸಿದ್ದಾರೆ.

‘ನಂತರ ಆಕೆಯನ್ನು ಮನೆಯವರೆಗೂ ಕಾರಿನಲ್ಲಿ ಬಿಟ್ಟುಹೋಗಿದ್ದಾನೆ. ಬೆಳಿಗ್ಗೆ ಮತ್ತು ಸಂಜೆ ಕಾರಿನಲ್ಲಿ ಬಾಲಕಿಯನ್ನು ಕರೆದೊಯ್ಯುವುದನ್ನು ಮನೆ ಸಮೀಪದವರು ಗಮನಿಸಿದ್ದರು. ರಾತ್ರಿ ಹೊತ್ತಲ್ಲಿ ಬಾಲಕಿಗೆ ಹೊಟ್ಟೆ ನೋವು ಕಾಣಿಸಿಕೊಂಡ ಕಾರಣ ವೈದ್ಯರ ಬಳಿ ಕರೆದೊಯ್ದು ಪರಿಶೀಲಿಸಿದಾಗ ಅತ್ಯಾಚಾರ ನಡೆದಿರುವುದು ಗೊತ್ತಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಕೆಲ್ವಿನ್ ಪೇಂಟಿಂಗ್ ವೃತ್ತಿ ನಡೆಸುತ್ತಿದ್ದ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.