ಹುಬ್ಬಳ್ಳಿ: ರಾಜ್ಯದಲ್ಲಿ ಅಪರಾಧಿಗಳಿಗೆ, ಅತ್ಯಾಚಾರಿಗಳಿಗೆ ರಾಜ್ಯ ಸರ್ಕಾರದ ರಕ್ಷಣೆ ಇದೆ ಎಂದು ಶಾಸಕ ಬಸವರಾಜ ಬೊಮ್ಮಾಯಿ ಆರೋಪಿಸಿದರು.

ನಗರದಲ್ಲಿ ಶನಿವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು.

ಹಾವೇರಿ ಜಿಲ್ಲೆಯ ಹಾನಗಲ್ ಅತ್ಯಾಚಾರ ಪ್ರಕರಣದ ನಂತರ ಈಗ ಬ್ಯಾಡಗಿ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ. ಇದೇ ರೀತಿ ಹಲವೆಡೆ ಪ್ರಕರಣಗಳು ನಡೆದಿದ್ದು, ಒಂದೊಂದಾಗಿ ಬೆಳಕಿಗೆ ಬರುತ್ತಿವೆ ಎಂದರು.

'ಇಷ್ಟೆಲ್ಲ ಪ್ರಕರಣಗಳು ಹೊರಬರುತ್ತಿದ್ದರೂ ಪೊಲೀಸರು ಕಣ್ಣು ಮುಚ್ಚಿ ಕುಳಿತಿದ್ದಾರೆ. ಮಟಕಾ, ಜೂಜು, ಅಕ್ರಮ ಸಾರಾಯಿ ಮಾರಾಟ ಮಾಡಲು ಅಪರಾಧಿಗಳಿಗೆ ಪೊಲೀಸರೇ ಕುಮ್ಮಕ್ಕು ನೀಡುತ್ತಿದ್ದಾರೆ. ಸರ್ಕಾರ ಹಣ ಪಡೆದು ಪೊಲೀಸರನ್ನು ವರ್ಗಾವಣೆ ಮಾಡಿದ್ದರ ಫಲವಾಗಿ ಇದು ನಡೆದಿದೆ ಎಂದು ಆರೋಪಿಸಿದರು.

ಹಾನಗಲ್ ಅತ್ಯಾಚಾರ ಪ್ರಕರಣದ ತನಿಖೆ ನಡೆಸಲು ಎಸ್.ಐ.ಟಿ ರಚಿಸುವಂತೆ ಒತ್ತಾಯಿಸಿದರೂ ಸರ್ಕಾರ ಕೇಳುತ್ತಿಲ್ಲ. ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನ ನಡೆಸಿದೆ ಎಂದು ಆರೋಪಿಸಿದರು.

ಈ ಪ್ರಕರಣವನ್ನು ತಾರ್ಕಿಕ ಅಂತ್ಯದವರೆಗೆ ಒಯ್ಯಲು ನಿರಂತರ ಪ್ರತಿಭಟನೆ ನಡೆಸುತ್ತೇವೆ. ಕಾನೂನು ಹೋರಾಟವನ್ನೂ ನಡೆಸಲಿದ್ದೇವೆ ಎಂದರು.
.ಹಾನಗಲ್ ಅತ್ಯಾಚಾರ ಪ್ರಕರಣ ಮುಚ್ಚಿ ಹಾಕುವುದು ಗ್ಯಾರಂಟಿ: ಬಸವರಾಜ ಬೊಮ್ಮಾಯಿ.ಹಾನಗಲ್ ಸಾಮೂಹಿಕ ಅತ್ಯಾಚಾರ ಪ್ರಕರಣ: ಮತ್ತಿಬ್ಬರು ಆರೋಪಿಗಳ ಬಂಧನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.