ಗದಗ: ಗುತ್ತಿಗೆದಾರನಿಂದ ₹5 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ಶಿರಹಟ್ಟಿ ಮತಕ್ಷೇತ್ರದ ಶಾಸಕ ಡಾ. ಚಂದ್ರು ಲಮಾಣಿ ಮತ್ತು ಅವರ ಇಬ್ಬರು ಆಪ್ತ ಸಹಾಯಕರು ಶನಿವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಸಣ್ಣ ನೀರಾವರಿ ಇಲಾಖೆಯ ಕಾಮಗಾರಿಗೆ ಸಂಬಂಧಿಸಿದಂತೆ ಡಾ. ಚಂದ್ರು ಲಮಾಣಿ ಗುತ್ತಿಗೆದಾರನ ಬಳಿ ₹11 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಈ ಸಂಬಂಧ ಗದಗ ತಾಲ್ಲೂಕಿನ ಚಿಂಚಲಿ ಗ್ರಾಮದ ಕ್ಲಾಸ್–1 ಗುತ್ತಿಗೆದಾರ ವಿಜಯ್ ಪೂಜಾರ ಲೋಕಾಯಕ್ತ ಪೊಲೀಸರಿಗೆ ದೂರು ನೀಡಿದ್ದರು.

ಶನಿವಾರ ಮಧ್ಯಾಹ್ನ 2.15ರ ಸುಮಾರಿಗೆ ಲಕ್ಷ್ಮೇಶ್ವರ ಪಟ್ಟಣದ ಬಾಲಾಜಿ ಆಸ್ಪತ್ರೆಯಲ್ಲಿ ಶಾಸಕ ಡಾ. ಚಂದ್ರು ಲಮಾಣಿ ಮತ್ತು ಅವರ ಇಬ್ಬರು ಆಪ್ತ ಸಹಾಯಕರಾದ ಮಂಜುನಾಥ ವಾಲ್ಮೀಕಿ ಮತ್ತು ಗುರು ನಾಯಕ್ ₹5 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.

ಲೋಕಾಯುಕ್ತ ಪೊಲೀಸರು ನಡೆಸಿದ ವೇಳೆ ಶಾಸಕರ ಆಪ್ತ ಸಹಾಯಕ ಗುರು ನಾಯಕ್ ₹50 ಸಾವಿರ ನಗದು ಇದ್ದ ಕವರ್ ಅನ್ನು ಆಸ್ಪತ್ರೆ ಹಿಂಭಾಗದ ಖಾಸಗಿ ಶಾಲೆಯೊಂದರ ಕಾಂಪೌಂಡ್ ಒಳಕ್ಕೆ ಎಸೆದ ಘಟನೆಯೂ ನಡೆಯಿತು. ಕವರ್ನಲ್ಲಿದ್ದ ₹50 ಸಾವಿರ ಹಾಗೂ ಆಸ್ಪತ್ರೆಯಲ್ಲಿ ಸಿಕ್ಕ ₹4.50 ಲಕ್ಷ ಹಣವನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಲೋಕಾಯುಕ್ತ ಪೊಲೀಸರಿಂದ ದಾಖಲೆಗಳ ಪರಿಶೀಲನೆ ಮುಂದುವರಿದಿದೆ.

ಲೋಕಾಯುಕ್ತ ಎಸ್ಪಿ ಸಿದ್ಧಲಿಂಗಪ್ಪ ಅವರ ಮಾರ್ಗದರ್ಶನದಲ್ಲಿ ಗದಗ ಲೋಕಾಯುಕ್ತ ಡಿವೈಎಸ್ಪಿ ವಿಜಯ್ ಬಿರಾದಾರ, ಇನ್ಸ್ಪೆಕ್ಟರ್ ಪರಮೇಶ್ ಕವಟಗಿ ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದಾರೆ.

ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ ವೇಳೆ ಆಸ್ಪತ್ರೆ ಕಟ್ಟಡದಲ್ಲಿದ್ದ ಜೇನುಗೂಡಿನಿಂದ ಆಕಸ್ಮಿಕವಾಗಿ ಜೇನುಹುಳುಗಳು ಎದ್ದ ಪರಿಣಾಮ ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
.ಲೋಕಾಯುಕ್ತ ದಾಳಿ: ಅಬಕಾರಿ ಸಚಿವರ ರಾಜೀನಾಮೆಗೆ ಬಿ.ವೈ. ವಿಜಯೇಂದ್ರ ಒತ್ತಾಯ.ವರ್ಷದಿಂದ ವರ್ಷಕ್ಕೆ ಕುಸಿದ ಕೇಸುಗಳು: ಸದ್ದಿಲ್ಲದ ಬಳ್ಳಾರಿ ಲೋಕಾಯುಕ್ತ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.