ಸೋಮವಾರ, 26 ಜನವರಿ 2026
×
ADVERTISEMENT
ADVERTISEMENT

ಕೇಂದ್ರ ಬಜೆಟ್ ಟೀಕಿಸುವ ನೈತಿಕತೆ ಕಾಂಗ್ರೆಸ್‌ಗೆ ಇಲ್ಲ: ಎಚ್‌.ಡಿ. ಕುಮಾರಸ್ವಾಮಿ

50 ವರ್ಷದಲ್ಲಿ ರಾಜ್ಯಕ್ಕೆ ಕಾಂಗ್ರೆಸ್‌ ಕೊಡುಗೆ ಏನು: ಕುಮಾರಸ್ವಾಮಿ
Published : 2 ಫೆಬ್ರುವರಿ 2025, 14:08 IST
Last Updated : 2 ಫೆಬ್ರುವರಿ 2025, 14:08 IST
ಫಾಲೋ ಮಾಡಿ
Comments
ಮಾರ್ಚ್‌ನಲ್ಲಿ ರಾಜ್ಯ ಬಜೆಟ್ ಮಂಡನೆ ಮಾಡುತ್ತಾರೆ. ಆಗ ನೋಡೋಣ ಇವರು ಎಷ್ಟು ಜಿಲ್ಲೆಗಳಿಗೆ ತಾಲ್ಲೂಕುಗಳಿಗೆ ಏನೇನು ಕೊಡುತ್ತಾರೆ.
ಎಚ್‌.ಡಿ.ಕುಮಾರಸ್ವಾಮಿ ಕೇಂದ್ರ ಸಚಿವ
‘ತಮಿಳುನಾಡಿಗೆ ನೀರು ಬಿಡುತ್ತಾರೆ’
‘ಮೈಸೂರು ಮಹಾರಾಜರು ಸರ್ ಎಂ.ವಿಶ್ವೇಶ್ವರಯ್ಯ ಕಟ್ಟಿದ್ದ ಕೆಆರ್‌ಎಸ್ ಹಾಗೂ ದೇವೇಗೌಡರ ಹೋರಾಟದ ಫಲವಾಗಿ ನಿರ್ಮಾಣವಾದ ಹಾರಂಗಿ ಕಬಿನಿ ಜಲಾಶಯಗಳಿಂದ ತಮಿಳುನಾಡಿಗೆ ನೀರು ಬಿಟ್ಟುಕೊಂಡು ಕೂತಿದ್ದಾರೆ’ ಎಂದು ಎಚ್.ಡಿ. ಕುಮಾರಸ್ವಾಮಿ ಟೀಕಿಸಿದರು. ‘ಸಿದ್ದರಾಮಯ್ಯ ಹೇಳಿಕೆ ಗಮನಿಸಿದ್ದೇನೆ. 1947ರಲ್ಲಿ ದೇಶಕ್ಕೆ ಸ್ವಾತಂತ್ರ್ಯ ಬಂತು. 1983ರವರೆಗೆ ರಾಜ್ಯ ರಾಷ್ಟ್ರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿತ್ತು. ಹಾರಂಗಿ ಹೇಮಾವತಿ ವಾಟೆಹೊಳೆ ಕಬಿನಿ ಜಲಾಶಯಗಳ ನಿರ್ಮಾಣಕ್ಕೆ ಕೇಂದ್ರದಿಂದ ನಯಾಪೈಸೆ ದುಡ್ಡು ಕೊಡಲಿಲ್ಲ. 50 ವರ್ಷ ದೇಶ ಆಳಿ ಈ ಯೋಜನೆಗಳಿಗೆ ದುಡ್ಡು ಕೊಟ್ಟರಾ? ದೇವೇಗೌಡರು ಪ್ರಧಾನಿ ಆಗಿದ್ದಾಗ ಆಕ್ಸಿಲರೇಟೆಡ್ ಇರಿಗೇಷನ್ ಸ್ಕೀಂ ಅನ್ನು ಇಡೀ ದೇಶದಲ್ಲಿ ಜಾರಿಗೆ ತಂದರು. ಆಗ ಉತ್ತರ ಕರ್ನಾಟಕಕ್ಕೆ ₹15ಸಾವಿರ ಕೋಟಿಯಿಂದ ₹20 ಸಾವಿರ ಕೋಟಿ ಅನುದಾನ ಕೊಟ್ಟರು. ಕಾಂಗ್ರೆಸ್‌ನವರು ಏನು ಕೊಟ್ಟರು’ ಎಂದು ಪ್ರಶ್ನಿಸಿದರು.
‘ಕೃತಕ ಬುದ್ಧಿಮತ್ತೆ ಕ್ಷೇತ್ರಕ್ಕೆ ಸಹಕಾರ’
‘ರಾಜ್ಯದಲ್ಲಿ ಕೃತಕ ಬುದ್ಧಿಮತ್ತೆ (ಆರ್ಟಿಫಿಷಲ್ ಇಂಟಲಿಜೆನ್ಸ್) ಉದ್ಯಮಕ್ಕೆ ಒತ್ತು ನೀಡುವ ಬಗ್ಗೆ ಕೇಂದ್ರ ಸರ್ಕಾರ ಅಗತ್ಯ ಸಹಕಾರ ನೀಡಲಿದೆ’ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು. ‘ಸಾಫ್ಟ್‌ವೇರ್ ಉದ್ಯಮಕ್ಕೆ ಕರ್ನಾಟಕ ಹಬ್ ಆಗಿದೆ. ಹೀಗಾಗಿ ಆರ್ಟಿಫಿಷಲ್ ಇಂಟಲಿಜೆನ್ಸ್ ಕ್ಷೇತ್ರಕ್ಕೆ ಕರ್ನಾಟಕದಲ್ಲೂ ಉತ್ತೇಜನ ಕೊಡಬೇಕು ಎಂದು ಪ್ರಯತ್ನ ಮಾಡುತ್ತಿದ್ದೇನೆ. ಅದಕ್ಕೆ ಎಲ್ಲರ ಸಹಕಾರ ಅಗತ್ಯವಿದೆ. ಈ ಬಗ್ಗೆ ನಾನು ಕೇಂದ್ರದಲ್ಲಿ ಸಂಬಂಧಪಟ್ಟ ಎಲ್ಲ ಸಚಿವರ ಜತೆಯೂ ಚರ್ಚೆ ನಡೆಸುತ್ತೇನೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT