ಹಾವೇರಿ: ಮಂಜುನಾಥನಗರದ ಮನೆಯೊಂದರಲ್ಲಿ ಫ್ರಿಡ್ಜ್ ಸ್ಫೋಟಗೊಂಡಿದ್ದು, ಮನೆಯಲ್ಲಿದ್ದ ಹಲವು ವಸ್ತುಗಳು ಸುಟ್ಟು ಕರಕಲಾಗಿವೆ.

ಸ್ಥಳೀಯ ನಿವಾಸಿ ಚನ್ನಬಸಪ್ಪ ಗೂಳಪ್ಪನವರ ಅವರ ಮನೆಯಲ್ಲಿ ಸೋಮವಾರ ಈ ಅವಘಡ ಸಂಭವಿಸಿದೆ. ವಿದ್ಯುತ್ ಶಾರ್ಟ್ ಸರ್ಕಿಟ್ ಕಾರಣಕ್ಕೆ ಸ್ಫೋಟ ಸಂಭವಿಸಿರುವ ಅನುಮಾನವಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಪರಿಶೀಲನೆ ನಡೆಸುತ್ತಿದ್ದಾರೆ.

‘ಮಂಜುನಾಥ ನಗರದ ಮೂರನೇ ಕ್ರಾಸ್ನಲ್ಲಿ ಚನ್ನಬಸಪ್ಪ ಅವರ ಮನೆಯಿದೆ. ಮನೆಯ ಅಡುಗೆ ಕೋಣೆಯಲ್ಲಿ ಫ್ರಿಡ್ಜ್ ಇರಿಸಲಾಗಿತ್ತು. ಏಕಾಏಕಿ ಫ್ರಿಡ್ಜ್ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿತ್ತು. ಇದರಿಂದಾಗಿ ಅಡುಗೆ ಮನೆಯಲ್ಲೆಲ್ಲ ಬೆಂಕಿ ಕಾಣಿಸಿಕೊಂಡಿತ್ತು. ಮನೆಯಲ್ಲಿದ್ದವರು ಹೊರಗೆ ಓಡಿ ಬಂದಿದ್ದರು. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದರು’ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.