ಕಲಬುರಗಿ: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿದ ಆರೋಪ ಸಾಬೀತಾಗಿದ್ದರಿಂದ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷೆನ್ಸ್ (ವಿಶೇಷ ಪೋಕ್ಸೊ) ನ್ಯಾಯಾಲಯವು ಅಪರಾಧಿಗೆ 30 ವರ್ಷ ಜೈಲು ಶಿಕ್ಷೆಯನ್ನು ಸೋಮವಾರ ವಿಧಿಸಿದೆ.

ಚಿತ್ತಾಪುರ ತಾಲ್ಲೂಕಿನ ವಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರ ನಿವಾಸಿ ಸೋಹೆಲ್ ಮಹಿಬೂಬ್ ಶಿಕ್ಷೆಗೆ ಒಳಗಾದ ಅಪರಾಧಿ.

ಶಾಲೆಗೆ ಹೋಗುತ್ತಿದ್ದ 16 ವರ್ಷದ ಬಾಲಕಿಯನ್ನು ಪ್ರೀತಿಸುವುದಾಗಿ ಹಿಂದೆ ಬಿದ್ದಿದ್ದ ಸೋಹೆಲ್, ನಾನು ಚಿಕ್ಕವಳಿದ್ದೇನೆ ಎಂದ ಬಾಲಕಿಯ ಮಾತಿಗೂ ಕಿವಿಗೊಡಲಿಲ್ಲ. 2022ರ ಸೆಪ್ಟೆಂಬರ್ 27ರಂದು ಸೋಹೆಲ್, ಬಾಲಕಿಯನ್ನು ಒತ್ತಾಯಪೂರ್ವಕವಾಗಿ ಬೆಂಗಳೂರಿಗೆ ಕರೆದೊಯ್ದ. ಶಿವಪುರದಲ್ಲಿ ಬಾಡಿಗೆ ಮನೆ ಹಿಡಿದು, ಅಲ್ಲಿಯೇ ಬಾಲಕಿಯ ಇಚ್ಛೇಗೆ ವಿರುದ್ಧವಾಗಿ ಅಕ್ರಮ ಬಂಧನದಲ್ಲಿ ಇರಿಸಿದ್ದ. ಮದುವೆ ಆಗುವುದಾಗಿ ಪುಸಲಾಯಿಸಿ, ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ. ಈ ಬಗ್ಗೆ ಯಾರಿಗಾದರು ಹೇಳಿದರೆ ಜೀವ ತೆಗೆಯುವುದಾಗಿ ಬೆದರಿಕೆಯೂ ಹಾಕಿದ್ದ.

ಈ ಸಂಬಂಧ ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಿಪಿಐ ಪ್ರಕಾಶ ಆರ್.ಯಾತನೂರ ಅವರು ತನಿಖೆ ನಡೆಸಿದ್ದರು. ವಿವಿಧ ಕಾಯ್ದೆಗಳ ಅಡಿಯಲ್ಲಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಹ ಸಲ್ಲಿಸಿದ್ದರು.

ವಾದ–ಪ್ರತಿವಾದ ಆಲಿಸಿದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ (ವಿಶೇಷ ಪೋಕ್ಸೊ) ಎಫ್ಟಿಎಸ್ಸಿ–1 ನ್ಯಾಯಾಧೀಶ ಯಮನಪ್ಪ ಬಮ್ಮಣಗಿ ಅವರು ಸೋಹೆಲ್ಗೆ ಪೋಕ್ಸೊ ಕಾಯ್ದೆಯ ವಿವಿಧ ಸೆಕ್ಷನ್ಗಳ ಅಡಿ 30 ವರ್ಷ ಜೈಲು ಶಿಕ್ಷೆ ಮತ್ತು ₹28 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಶಾಂತವೀರ ಬಿ.ತುಪ್ಪದ ಅವರು ವಾದ ಮಂಡಿಸಿದರು. ನೊಂದ ಬಾಲಕಿಗೆ ಕಾನೂನು ಸೇವಾ ಪ್ರಾಧಿಕಾರದಿಂದ ₹7 ಲಕ್ಷ ಪರಿಹಾರವಾಗಿ ನೀಡುವಂತೆ ಆದೇಶದಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.