ಮುಳಬಾಗಿಲು(ಕೋಲಾರ): ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಸಮೀಪದ ಮುರುಡೇಶ್ವರಕ್ಕೆ ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ಎಂ.ಕೊತ್ತೂರು ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿ ಮಂಗಳವಾರ ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾಳೆ. ಮೂವರು ವಿದ್ಯಾರ್ಥಿನಿಯರು ಕಣ್ಮರೆಯಾಗಿದ್ದು ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನೀರಿನಲ್ಲಿ ಆಟವಾಡಲು ಸಮುದ್ರಕ್ಕೆ ಇಳಿದಿದ್ದ 9ನೇ ತರಗತಿ ವಿದ್ಯಾರ್ಥಿನಿ ಶ್ರಾವಂತಿ ಗೋಪಾಲಪ್ಪ (15) ಮೃತಪಟ್ಟಿದ್ದಾಳೆ. ಆಕೆಯ ಮೂವರು ಸಹಪಾಠಿಗಳು ಅಲೆಯಲ್ಲಿ ಕೊಚ್ಚಿ ಹೋಗಿದ್ದು, ಶೋಧ ನಡೆಯುತ್ತಿದೆ.

ಮೂವರು ವಿದ್ಯಾರ್ಥಿನಿಯರನ್ನು ರಕ್ಷಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.ಶಾಲೆಯ 54 ವಿದ್ಯಾರ್ಥಿಗಳು ಪ್ರವಾಸ ತೆರಳಿದ್ದರು. ಸಮುದ್ರದ ಅಲೆಗಳಿಗೆ ಕೊಚ್ಚಿ ಹೋಗಿದ್ದ ಏಳು ವಿದ್ಯಾರ್ಥಿನಿಯರ ಪೈಕಿ ಮೂವರನ್ನು ಸ್ಥಳೀಯರು ರಕ್ಷಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.