ಕೋಲಾರ: ನಗರದ ಪೇಟೆಚಾಮನಹಳ್ಳಿ ಬಡಾವಣೆಯಲ್ಲಿ 17 ವರ್ಷದ ಕಾರ್ತಿಕ್ ಸಿಂಗ್ ಎಂಬ ಬಾಲಕನನ್ನು ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಜಿಲ್ಲೆಯ ಪೊಲೀಸರು ತಮಿಳುನಾಡಿನಲ್ಲಿ ಬಂಧಿಸಿರುವುದು ಗೊತ್ತಾಗಿದೆ.

ಪ್ರಮುಖ ಆರೋಪಿ ಸೇರಿ ಎಂಟು ಮಂದಿಯನ್ನು ಬಂಧಿಸಿದ್ದಾರೆ. ಕೊಲೆ ಮಾಡಿರುವ ಆರೋಪಿಗಳೆಲ್ಲರೂ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕರಾಗಿದ್ದಾರೆ. ಒಬ್ಬ ಆರೋಪಿ ಮಾತ್ರ ಇನ್ನೂ ಸಿಕ್ಕಿಲ್ಲ ಎಂಬುದು ತಿಳಿದುಬಂದಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ ಆರೋಪಿಗಳ ಪತ್ತೆಗಾಗಿ ಮೂರು ತಂಡ ರಚಿಸಿದ್ದರು.

ಶುಕ್ರವಾರ ರಾತ್ರಿ 8 ಗಂಟೆ ಸುಮಾರಿಗೆ ಪೇಟೆಚಾಮನಹಳ್ಳಿ ಬಡಾವಣೆಯ ಶಾಲೆ ಆವರಣಕ್ಕೆ ಬಾಲಕನ್ನು ಕರೆಸಿಕೊಂಡು ಹತ್ಯೆ ಮಾಡಿದ್ದರು. ಹತ್ಯೆಗೂ ಮುನ್ನ ಬಾಲಕನಿಗೆ ಚಿತ್ರ ಹಿಂಸೆ ಕೊಟ್ಟಿದ್ದರು. ಪ್ರಮುಖ ಆರೋಪಿಗೆ 'ಡಾನ್' ಆಗುವ ಹುಚ್ಚು ಇತ್ತು ಎಂದು ಪೊಲೀಸರು ತಿಳಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.