‘ಅಚ್ಚರಿ ಉಂಟು ಮಾಡಿದೆ’
‘ಮತ ಮರು ಎಣಿಕೆಗೆ ತಕರಾರು ಇಲ್ಲ. ಆದರೆ, ನನ್ನ ಆಯ್ಕೆ ಅಸಿಂಧುಗೊಳಿಸಿ ಹೈಕೋರ್ಟ್ ಆದೇಶ ಮಾಡಿದ್ದು ಬೇಸರ ಮೂಡಿಸಿದೆ. ಈ ಆದೇಶ ಅಚ್ಚರಿ ಉಂಟು ಮಾಡಿದೆ’ ಎಂದು ಮಾಲೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ಹೇಳಿದರು. ಮಂಗಳವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ‘ಕ್ಷೇತ್ರದ ಮತದಾರರು ಯಾವುದೇ ಕಾರಣಕ್ಕೂ ಗಾಬರಿ ಆಗುವ ಅವಶ್ಯವಿಲ್ಲ. ಧೈರ್ಯವಾಗಿ ಹೋರಾಟ ಮಾಡುತ್ತೇನೆ’ ಎಂದರು.