ಕೋಲಾರ: ‘ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದವರು ಸಿದ್ಧಾರ್ಥ ವಿಹಾರ ಶಿಕ್ಷಣ ಟ್ರಸ್ಟ್ಗೆ ಕೆಐಎಡಿಬಿಯಿಂದ ಐದು ಎಕರೆ ಜಾಗ ಪಡೆದುಕೊಂಡಿದ್ದಾರೆ. ಸಚಿವರಾಗಿ ಪ್ರಿಯಾಂಕ್ ಖರ್ಗೆ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ. ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಿ ಜಮೀನು ವಾಪಸ್ ಪಡೆಯಬೇಕು. ಈ ಸಂಬಂಧ ದೂರು ಕೊಡಲಿದ್ದೇವೆ, ರಾಜ್ಯಪಾಲರನ್ನೂ ಭೇಟಿ ಮಾಡುತ್ತೇವೆ’ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ತಿಳಿಸಿದರು.

ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಮಲ್ಲಿಕಾರ್ಜುನ ಖರ್ಗೆ, ಅವರ ಪತ್ನಿ, ಪುತ್ರರಾದ ರಾಹುಲ್ ಖರ್ಗೆ, ಪುತ್ರ ಪ್ರಿಯಾಂಕ್ ಖರ್ಗೆ ಹಾಗೂ ಅಳಿಯ ರಾಧಾಕೃಷ್ಣ ಅವರಿಗೆ ಸೇರಿದ ಟ್ರಸ್ಟ್ ಇದಾಗಿದೆ’ ಎಂದರು.

ಜೈಲುಗಳು ರೆಸಾರ್ಟ್ಗಳಾಗಿವೆ: ‘ಕಾಂಗ್ರೆಸ್ ಅಧಿಕಾರಕ್ಕ ಬಂದ ಬಳಿಕ ಸುಲಿಗೆ ಹೆಚ್ಚಾಗಿದೆ. ಎಲ್ಲ ಜೈಲುಗಳು ರೆಸಾರ್ಟ್ಗಳಾಗಿವೆ. ಸೆರೆಮನೆಗಳು ಅರಮನೆಗಳಾಗಿವೆ’ ಎಂದು ಟೀಕಿಸಿದರು.

ಪಾರಿವಾಳ ಜೊತೆ ಕರಿ ಕಾಗೆಗಳಿಗೇನು ಕೆಲಸ?: ‘ರಾಜ್ಯ ಸರ್ಕಾರ ಬೀಳುತ್ತದೆ ಎಂಬುದು ಗ್ಯಾರಂಟಿಯಾಗಿ ಕಾಂಗ್ರೆಸ್ ಶಾಸಕರು ತಮ್ಮ ರೇಟ್ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಹಿಂದೆ ₹50 ಕೋಟಿ ಇದ್ದದ್ದು ಈಗ ₹100 ಕೋಟಿ ಆಗಿದೆ. ಅವರು ಬಂದರೂ ನಾವು ಸೇರಿಸಿಕೊಳ್ಳಲ್ಲ. ಪಾರಿವಾಳ ಜೊತೆ ಕರಿ ಕಾಗೆಗಳಿಗೇನು ಕೆಲಸ’ ಎಂದು ಪ್ರಶ್ನಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.