ಕೊಪ್ಪಳ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಡಿ. 12ರಂದು ಹನುಮಮಾಲೆ ಧರಿಸಿ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಅಂಜನಾದ್ರಿಯಲ್ಲಿ ನಡೆಯುವ ಹನುಮಮಾಲೆ ವಿಸರ್ಜನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಂದು ಪಂಪಾ ಸರೋವರದಲ್ಲಿ ಅವರು ಮಾಲೆ ಧರಿಸುವರು.

ಈ ಕುರಿತು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಶಾಸಕ ಜನಾರ್ದನ ರೆಡ್ಡಿ 'ವಿಜಯೇಂದ್ರ ಕಳೆದ ವರ್ಷವೇ ಮಾಲೆ ಧರಿಸಬೇಕಿತ್ತು. ಆಗ ಸಾಧ್ಯವಾಗಿರಲಿಲ್ಲ ಈಗ ರಾಜ್ಯಾಧ್ಯಕ್ಷರ ಜೊತೆಗೆ ಪಕ್ಷದ ಯುವ ಘಟಕದ ಎಲ್ಲ ಜಿಲ್ಲೆಗಳ ಪ್ರಮುಖರು ಮಾಲೆ ಧರಿಸಿ ಅಂಜನಾದ್ರಿಗೆ ಬರಲಿದ್ದಾರೆ' ಎಂದು ತಿಳಿಸಿದರು.

'ಪ್ರತಿವರ್ಷ ಹನುಮಮಾಲೆ ವಿಸರ್ಜನೆ ದಿನ ಒಪ್ಪೊತ್ತು ಮಾತ್ರ ಊಟ ನೀಡಲಾಗುತ್ತಿತ್ತು. ಈ ಬಾರಿ ಡಿ. 11ರಿಂದ 13ರ ತನಕ ಮೂರೂ ಹೊತ್ತು ಪ್ರಸಾದದ ವ್ಯವಸ್ಥೆ ಮಾಡಲಾಗಿದೆ. ಗಂಗಾವತಿಯಿಂದ ಅಂಜನಾದ್ರಿಗೆ ತೆರಳುವ ಮಾರ್ಗದಲ್ಲಿ ರಸ್ತೆ ಅಭಿವೃದ್ಧಿ ಪಡಿಸಲಾಗುತ್ತಿದೆ' ಎಂದು ಹೇಳಿದರು.

ಒಟ್ಟು ₹240 ಕೋಟಿ

ಅಂಜನಾದ್ರಿ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಮೊದಲು ₹100 ಕೋಟಿ ಘೋಷಿಸಿತ್ತು. ನಂತರ ಅಧಿಕಾರಕ್ಕೆ ಬಂದ ಕಾಂಗ್ರೆಸ್ ₹100 ಕೋಟಿ ಮತ್ತು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ ₹40 ಕೋಟಿ ಹೀಗೆ ಒಟ್ಟು ₹240 ಕೋಟಿ ಅನುದಾನವಿದೆ. ಸರ್ಕಾರ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ಅಂಜನಾದ್ರಿ ಕ್ಷೇತ್ರ ಅಭಿವೃದ್ಧಿ ಮಾಡಲಾಗುವುದು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.