ಮಂಡ್ಯ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಬೆಲೆ ಹೆಚ್ಚಳ ಮಾಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ತಲೆ ಮೇಲೆ ಗ್ಯಾಸ್ ಸಿಲಿಂಡರ್ ಹೊತ್ತು ಹಾಗೂ ಹೆದ್ದಾರಿಯಲ್ಲಿ ಸೌದೆ ಒಲೆ ಉರಿಸಿ ಶುಕ್ರವಾರ ನಗರದ ಜೆ.ಸಿ.ವೃತ್ತದಲ್ಲಿ ವಿನೂತನವಾಗಿ ಪ್ರತಿಭಟನೆ ನೆಡೆಸಿದರು.

ನಗರದ ಜೆ.ಸಿ.ವೃತ್ತದಲ್ಲಿ ಕೆಲಕಾಲ ರಸ್ತೆ ಸಂಚಾರಕ್ಕೆ ಅಡ್ಡಿ ಪಡಿಸಿದರು. ನಂತರ ಸೌದೆ ಒಲೆ ಹೊತ್ತಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

‘ಕೇಂದ್ರ ಸರ್ಕಾರವು ಬಜೆಟ್ನಲ್ಲಿ ಕರ್ನಾಟಕ ರಾಜ್ಯಕ್ಕೆ ಯಾವುದೇ ಯೋಜನೆ ಘೋಷಣೆ ಮಾಡಿಲ್ಲ. ನಮ್ಮ ತೆರಿಗೆ ಪಾಲನ್ನು ಕೂಡ ನೀಡುತ್ತಿಲ್ಲ. ಇಂತಹ ಅದೆಷ್ಟೋ ಲೋಪಗಳನ್ನು ಇಟ್ಟುಕೊಂಡಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಾ ವಂಚಿಸಿದೆ’ ಎಂದು ದೂರಿದರು.

ಜನರ ಬದುಕು ಮೂರಾಬಟ್ಟೆ ಆಗಿದೆ. ಇಂತಹ ಸನ್ನಿವೇಶದಲ್ಲಿ ಬೆಲೆ ಏರಿಕೆ ಮಾಡುವ ಮೂಲಕ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಬಡವರ ಹಾಗೂ ಮಧ್ಯಮ ವರ್ಗದವರ ರಕ್ತ ಹೀರುತ್ತಿದೆ. ಇದರ ಬಗ್ಗೆ ಹೋರಾಟ ಮಾಡಬೇಕಿದ್ದ ರಾಜ್ಯ ಬಿಜೆಪಿಯು, ಕಾಂಗ್ರೆಸ್ ವಿರುದ್ಧ ‘ಜನಾಕ್ರೋಶ ಯಾತ್ರೆ’ ಮಾಡುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

ಕೇಂದ್ರ ಸರ್ಕಾರವು ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ₹2 ಹಾಗೂ ಅಡುಗೆ ಅನಿಲದ ದರವನ್ನು ₹50 ಬೆಲೆ ಹೆಚ್ಚಳ ಮಾಡಿದೆ. ಬಜೆಟ್ನಲ್ಲಿ ರಾಜ್ಯಕ್ಕೆ ಯಾವುದೇ ಯೋಜನೆ ರೂಪಿಸಿಲ್ಲ. ನಮ್ಮ ತೆರಿಗೆ ಪಾಲನ್ನು ನೀಡದೆ ದ್ವೇಷದ ರಾಜಕಾರಣ ಮಾಡುತ್ತಿರುವ ಕೇಂದ್ರ ಸರ್ಕಾರದ ನಡೆಯನ್ನು ನಮ್ಮ ರಾಜ್ಯದ ಜನ ನೋಡುತ್ತಿದ್ದು, ಮುಂದಿನ ಸ್ಥಳೀಯ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುತ್ತಾರೆ ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಡಿ.ಗಂಗಾಧರ, ಮಹಿಳಾ ಘಟಕದ ಅಧ್ಯಕ್ಷೆ ಅಂಜನಾ ಶ್ರೀಕಾಂತ್, ಪ್ರಧಾನ ಕಾರ್ಯದರ್ಶಿ ಎಚ್.ವಿ. ನಾಗರಾಜು, ಯುವ ಕಾಂಗ್ರೆಸ್ ಜಿಲ್ಲಾ ಸಮಿತಿ ಘಟಕದ ಅಧ್ಯಕ್ಷ ಶೈಲೇಂದ್ರ ಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಮಿತ್ರ, ತಾಲ್ಲೂಕು ಯುವ ಘಟಕದ ಅಧ್ಯಕ್ಷ ಸುನೀಲ್, ಮುಖಂಡರಾದ ಗುರು, ಆತ್ಮಾನಂದ, ಕನ್ನಲಿ ಚನ್ನಪ್ಪ, ಎಚ್.ಎಂ.ಉದಯ್ ಕುಮಾರ್, ಚಿನಕುರಳಿ ರಮೇಶ್, ಅಭಿಲಾಷ್, ಮಂಜು, ದ್ಯಾವಣ್ಣ, ವೀಣಾ ಶಂಕರ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.