ಉಳಿಕೆ ಹಣದಲ್ಲಿ ಕನ್ನಡ ಭವನ: ‘ಉಳಿತಾಯವಾಗಿರುವ ₹2.53 ಕೋಟಿಯನ್ನು ಸಮ್ಮೇಳನದ ಸವಿನೆನಪಿಗಾಗಿ ನಿರ್ಮಿಸಲಿರುವ ‘ಕನ್ನಡ ಭವನ’ ನಿರ್ಮಾಣಕ್ಕೆ ಬಳಕೆ ಮಾಡಲಾಗುತ್ತದೆ. ಇದರ ಜೊತೆಗೆ ಸರ್ಕಾರದಿಂದ ₹2.50 ಕೋಟಿ ಅನುದಾನ ಬಿಡುಗಡೆ ಮಾಡುತ್ತೇವೆ. ಈಗಾಗಲೇ ಮೂರು ಕಡೆ ನಿವೇಶನಗಳನ್ನು ನೋಡಿದ್ದು, ಸರ್ಕಾರದಿಂದ ಅನುಮತಿ ಪಡೆದ ನಂತರ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸುತ್ತೇವೆ’ ಎಂದು ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.