ನಂಜನಗೂಡು: ನಗರದ ಸರ್ಕಾರಿ ಆಸ್ಪತ್ರೆ ಮುಂಭಾಗದ ಆವರಣದಲ್ಲಿ ಶುಕ್ರವಾರ ಯುವಕರ ತಂಡವೊಂದು ಇಬ್ಬರ ಮೇಲೆ ಮಾರಕಾಸ್ತ್ರಗಳಿಂದ ಗಂಭೀರವಾಗಿ ಹಲ್ಲೆ ಮಾಡಿದ್ದಾರೆ. ಆಸ್ಪತ್ರೆ ಬಳಿ ರಾಜಾರೋಷವಾಗಿ ಪುಂಡರ ಗುಂಪು ಮಚ್ಚು ಝಳಪಿಸುತ್ತಾ ಓಡಾಡಿದೆ.

ಮೈಸೂರಿನ ಮಂಡಿ ಮೊಹಲ್ಲಾ ನಿವಾಸಿ ಅಭಿಷೇಕ್ ಹಾಗೂ ರವಿ ಎಂಬುವರ ಮೇಲೆ ದಾಳಿ ನಡೆಸಿದ ನಾಲ್ವರ ಗುಂಪು ಕಬ್ಬಿಣದ ರಾಡು, ಚಾಕು ಹಾಗೂ ಮರದ ಪಟ್ಟಿಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.

ಹಲ್ಲೆಗೊಳಗಾದವರು ಆಸ್ಪತ್ರೆ ಮುಂಭಾಗದಿಂದ ತಪ್ಪಿಸಿಕೊಂಡು ಓಡಿದರಾದರೂ ಹಿಂಬಾಲಿಸಿದ ಆರೋಪಿಗಳು ಹಟ್ಟಿಮಾರಮ್ಮನ ದೇವಸ್ಥಾನದ ಬಳಿ ಹಿಡಿದು ಮತ್ತೆ ಹಲ್ಲೆ ನಡೆಸಿದ್ದಾರೆ. ತೀವ್ರವಾಗಿ ಗಾಯಗೊಂಡ ಇವರನ್ನು ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಬಳಿಕ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಈ ಸಂಬಂಧ ಶನಿವಾರ ನಂಜನಗೂಡು ನಗರ ಪೊಲೀಸ್ ಠಾಣೆಯಲ್ಲಿ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಬಂಧನಕ್ಕಾಗಿ ಪೊಲೀಸರು ಪತ್ತೆ ಕಾರ್ಯ ಕೈಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.