ಮೈಸೂರು: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸದಸ್ಯರು ಬಂಡೀಪುರ ಅರಣ್ಯ ಪ್ರದೇಶದಲ್ಲಿ ಅಕ್ರಮ ರೆಸಾರ್ಟ್ ಹಾಗೂ ಸಫಾರಿ ನಿರ್ಬಂಧಿಸಲು ಒತ್ತಾಯಿಸಿ ಗುರುವಾರ ಪ್ರಾದೇಶಿಕ ಆಯುಕ್ತರ ಕಚೇರಿಯ ಬಳಿ ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬುಧವಾರ ಸಂಘಟನೆ ಮುಖಂಡರು ಪ್ರತಿಭಟನೆ ಆರಂಭಿಸಿದ್ದರು. ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿ, ಸೆಸ್ಕ್ ನಿರ್ದೇಶಕರು ಆಗಮಿಸಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದರೂ, ಪ್ರತಿಭಟನೆ ಮುಂದುವರೆಸಿದರು.

ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿ, ‘ಕಬಿನಿ ನಿಯಮ ಬಾಹಿರ ರೆಸಾರ್ಟ್ಗಳ ವರದಿ ತಯಾರಿಸುತ್ತೇವೆ. ಬಂಡೀಪುರದಲ್ಲಿ ಸಫಾರಿ ಆರಂಭಿಸಿರುವುದಕ್ಕೆ ರೈತರು ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಸರ್ಕಾರಕ್ಕೆ ಪತ್ರ ಬರೆಯುತ್ತೇವೆ. ಚಾಮರಾಜನಗರದ ಸಮಸ್ಯೆಗಳ ಬಗ್ಗೆ ಅಲ್ಲಿನ ಅಧಿಕಾರಿಗಳಲ್ಲಿ ಮಾಹಿತಿ ಪಡೆಯಿರಿ’ ಎಂದು ತಿಳಿಸಿದರು.

ಪ್ರತಿಭಟನಾಕಾರರು ಪ್ರಾದೇಶಿಕ ಆಯುಕ್ತರ ಕಚೇರಿಗೆ ಆಗಮಿಸಿ ಹಾಸಿಗೆ, ಆಹಾರ ತಯಾರಿಸಲು ಪಾತ್ರೆಗಳನ್ನು ತಂದು ಪ್ರತಿಭಟನೆ ಆರಂಭಿಸಿದ್ದಾರೆ.

ಸಂಘಟನೆ ಪ್ರಮುಖರಾದ ಹೊನ್ನೂರು ಪ್ರಕಾಶ್, ಮಂಜುಕಿರಣ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.