ರಾಯಚೂರು: ಮಂತ್ರಾಲಯದ ರಾಘವೇಂದ್ರ ಸ್ವಾಮಿ ಮಠದ ಹುಂಡಿಯಲ್ಲಿನ ಕಾಣಿಕೆ ಹಣವನ್ನು ಗುರುವಾರ ಎಣಿಕೆ ಮಾಡಲಾಗಿದ್ದು, ₹3.92 ಕೋಟಿ ಕಾಣಿಕೆ ಸಂಗ್ರಹವಾಗಿದೆ.

ಕಳೆದ 31 ದಿನಗಳಲ್ಲಿ ರಾಘವೇಂದ್ರ ಸ್ವಾಮಿಯ ಹುಂಡಿಯಲ್ಲಿ ಭಕ್ತರು ಹಾಕಿರುವ ಕಾಣಿಕೆ ಹಣವನ್ನು ಗುರುವಾರ ಬೆಳಿಗ್ಗೆಯಿಂದಲೇ ಎಣಿಕೆ ಮಾಡಲಾಯಿತು. ಶ್ರೀಮಠದ ಸಿಬ್ಬಂದಿ ಹಾಗೂ ಭಕ್ತರು, ಸೇವಾಕರ್ತರು ಎಣಿಕೆಯಲ್ಲಿ ಪಾಲ್ಗೊಂಡಿದ್ದರು.

₹3,83,93,760 ಮೊತ್ತದ ನೋಟುಗಳು, ₹8,65,180 ಮೊತ್ತದ ನಾಣ್ಯಗಳು ಸೇರಿ ಒಟ್ಟು ₹3,92,58,940 ಹುಂಡಿಯಲ್ಲಿ ಸಂಗ್ರಹವಾಗಿವೆ. ಅಲ್ಲದೇ 174 ಗ್ರಾಂ ಚಿನ್ನ, 1,270 ಗ್ರಾಂಗಳಷ್ಟು ಬೆಳ್ಳಿಯನ್ನು ಭಕ್ತರು ಹುಂಡಿಯಲ್ಲಿ ಹಾಕಿದ್ದಾರೆ ಎಂದು ಮಠವು ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.