ಮಂಗಳವಾರ, 14 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿಗಳಿಗೆ ಪೌಷ್ಟಿಕ ಆಹಾರ ಶೀಘ್ರ: ಮಧು ಬಂಗಾರಪ್ಪ

-
Published 27 ಅಕ್ಟೋಬರ್ 2023, 19:51 IST
Last Updated 27 ಅಕ್ಟೋಬರ್ 2023, 19:51 IST
ಅಕ್ಷರ ಗಾತ್ರ

ಶಿವಮೊಗ್ಗ: ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಶೀಘ್ರವೇ ಮೊಟ್ಟೆಯ ಜೊತೆಗೆ ಪೌಷ್ಟಿಕಾಂಶವುಳ್ಳ ವಿಶೇಷ ಆಹಾರ ನೀಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಆಹಾರ ಒದಗಿಸಲು ಸರ್ಕಾರ ಬದ್ಧವಾಗಿದೆ. ನವೆಂಬರ್ 23ರಿಂದ ವಿಶೇಷ ಆಹಾರ ನೀಡುವ ಯೋಜನೆ ಆರಂಭವಾಗಲಿದೆ ಎಂದರು.

ಶಾಲೆಗಳಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛ ಮಾಡಿಸುವಂತಿಲ್ಲ. ಶೌಚಾಲಯ ಸ್ವಚ್ಛಗೊಳಿಸಲು ವಿದ್ಯಾರ್ಥಿಗಳನ್ನು ಬಳಸಿಕೊಂಡಿದ್ದು ಕಂಡುಬಂದಲ್ಲಿ ಸಂಬಂಧಪಟ್ಟ ಮುಖ್ಯ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಶಾಲೆಗಳ ಸ್ವಚ್ಛತೆಗಾಗಿ ಸರ್ಕಾರ ನೀಡುತ್ತಿರುವ ವಾರ್ಷಿಕ ₹10,000 ಅನುದಾನವನ್ನು ₹20,000ಕ್ಕೆ ಹೆಚ್ಚಿಸಲಾಗಿದೆ. ಶಾಲೆಯ ಸ್ವಚ್ಛತೆಗೆ ವಿದ್ಯಾರ್ಥಿಗಳನ್ನು ಬಳಸದೆ ಕಾರ್ಮಿಕರನ್ನು ನೇಮಿಸಿಕೊಳ್ಳಬೇಕು ಎಂದು ಅವರು ಹೇಳಿದರು.

ರಾಜ್ಯದಲ್ಲಿ 9,000 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿದೆ. ಕಲ್ಯಾಣ ಕರ್ನಾಟಕ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಮುಂದಿನ ವರ್ಷವೂ 15,000 ಶಿಕ್ಷಕರ ನೇಮಕಾತಿಗೆ ತೀರ್ಮಾನಿಸಲಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT