ಶಿವಮೊಗ್ಗ: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಆಡಳಿತ ವೈಖರಿ ಬ್ರಿಟಿಷರು ಹಾಗೂ ಟಿಪ್ಪು ಸುಲ್ತಾನನ ಆಡಳಿತವನ್ನೂ ನಾಚಿಸುವಂತಿದೆ. ಜಾತಿ ಸಮೀಕ್ಷೆ ನೆಪವೊಡ್ಡಿ ಸಮಾಜದಲ್ಲಿ ವಿಷ ಬೀಜ ಬಿತ್ತಲು ಹೊರಟಿದ್ದಾರೆ. ಭಗವಂತ ಅವರಿಗೆ ಒಳ್ಳೆಯದು ಮಾಡಲ್ಲ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ದೂರಿದರು.

‘ಮುಖ್ಯಮಂತ್ರಿಯಾಗಿ ಅಭಿವೃದ್ಧಿ ಹಾಗೂ ಮಾನವ ಕಲ್ಯಾಣಕ್ಕೆ ಶ್ರಮಿಸಬೇಕಿದ್ದ ಅವರು, ಧರ್ಮಸ್ಥಳದ ವಿಚಾರದಲ್ಲಿ ಭಕ್ತರ ಭಾವನೆಗೆ ಧಕ್ಕೆ ತಂದಿದ್ದಾರೆ. ಗಣಪತಿ ಹಬ್ಬದ ಸಂದರ್ಭದಲ್ಲಿ ಹೊಸ ಕಾನೂನು ಜಾರಿಗೊಳಿಸಿ ಅದ್ದೂರಿ ಮೆರವಣಿಗೆಗೆ ಅಡ್ಡಗಾಲು ಹಾಕಿದ್ದಾರೆ. ಹಿಂದೂ ಕಾರ್ಯಕರ್ತರನ್ನು ಬಂಧಿಸಿ ಸಮಾಜ ಒಡೆಯಲು ಹೊರಟಿದ್ದಾರೆ’ ಎಂದು ಭಾನುವಾರ ಸುದ್ದಿಗಾರರ ಎದುರು ಕಿಡಿಕಾರಿದರು.

‘ರಾಜ್ಯದಲ್ಲಿನ ಬಹುತೇಕ ರಸ್ತೆಗಳು ಗುಂಡಿಮಯವಾಗಿವೆ. ಅವುಗಳ ದುರಸ್ತಿಗೆ ಆಗ್ರಹಿಸಿ ಸೆ. 24ರಂದು ರಾಜ್ಯದಾದ್ಯಂತ ರಸ್ತೆ ತಡೆ ನಡೆಸಿ ಪ್ರತಿಭಟಿಸುತ್ತೇವೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.