ಉಡುಪಿ: 12ನೇ ಶತಮಾನವು ವಚನ ಸಾಹಿತ್ಯದಲ್ಲಿ ಬಹುಮುಖ್ಯವಾದ ಕಾಲಘಟ್ಟವಾಗಿದ್ದು, ವಚನಕಾರರು ತಮ್ಮ ವಚನಗಳ ಮೂಲಕ ಸಮಾಜದಲ್ಲಿದ್ದ ತಾರತಮ್ಯ ಹೋಗಲಾಡಿಸಿ, ಸಮಾನತೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ಹೇಳಿದರು.

ಅಜ್ಜರಕಾಡುವಿನ ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪಿ.ಜಿ.ಎ.ವಿ. ಹಾಲ್ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ನಡೆದ ಶಿವಯೋಗಿ ಸಿದ್ದರಾಮೇಶ್ವರ, ಮಹಾಯೋಗಿ ವೇಮನ ಮತ್ತು ಅಂಬಿಗರ ಚೌಡಯ್ಯರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಚನಕಾರರು ಜನರಲ್ಲಿ ವೈಚಾರಿಕ ಪ್ರಜ್ಞೆ ಮೂಡಿಸುವುದರೊಂದಿಗೆ ಸಮಾಜದಲ್ಲಿನ ಮೌಢ್ಯ, ಮೇಲು-ಕೀಳು, ಕಂದಾಚಾರದ ವಿರುದ್ಧ ಹೋರಾಡಿದ್ದಾರೆ ಎಂದರು.

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಬೆಳ್ಳಂಪಳ್ಳಿ ಮಾತನಾಡಿ, ಶಿವಯೋಗಿ ಸಿದ್ದರಾಮೇಶ್ವರ, ಮಹಾಯೋಗಿ ವೇಮನ ಮತ್ತು ಅಂಬಿಗರ ಚೌಡಯ್ಯನವರು ಬಸವಣ್ಣನ ಸಮಕಾಲೀನ ವಚನಕಾರರಾಗಿದ್ದರು. 12ನೇ ಶತಮಾನದಲ್ಲಿ ವಚನಕಾರರು ತಮ್ಮ ಅಗಾಧ ಅನುಭವದ ಆಧಾರದ ಮೇಲೆ ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದಲು ಸರಳವಾಗಿ ವಚನಗಳನ್ನು ಸೃಷ್ಟಿಸಿ, ಸಮಾಜವನ್ನು ಸರಿದಾರಿಗೆ ತರಲು ಪ್ರಯತ್ನಪಟ್ಟಿದ್ದಾರೆ ಎಂದು ಹೇಳಿದ್ದಾರೆ.

ಕಾರ್ಕಳ ಭುವನೇಂದ್ರ ಕಾಲೇಜಿನ ಉಪನ್ಯಾಸಕಿ ಸುಲೋಚನಾ ಪಚ್ಚಿನಡ್ಕ ಮಾತನಾಡಿ, ಜನಸಾಮಾನ್ಯರಿಗೆ ಆಧ್ಯಾತ್ಮಿಕ ಹಾಗೂ ಧಾರ್ಮಿಕ ವಿಚಾರಗಳನ್ನು ಆಡು ಮಾತಿನಲ್ಲಿಯೇ ತಿಳಿಸುವ ಅನಿವಾರ್ಯತೆ ಶಿವಶರಣೆಯರಿಗಿತ್ತು. ಸಾಮಾನ್ಯ ಜನರೂ ಸಹ ಭಗವಂತನನ್ನು ಪೂಜಿಸಲು ಸಾಧ್ಯ ಎಂದು ವಚನಕಾರರು ತೋರಿಸಿಕೊಟ್ಟಿದ್ದರು ಎಂದರು.

ಡಾ. ಜಿ. ಶಂಕರ್ ಕಾಲೇಜಿನ ಪ್ರಾಂಶುಪಾಲ ಶ್ರೀಧರ್ ಪ್ರಸಾದ್ ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, 12ನೇ ಶತಮಾನದ ವಚನಕಾರರಲ್ಲಿ ಒಬ್ಬರಾದ ಅಂಬಿಗರ ಚೌಡಯ್ಯ ವೃತ್ತಿಯಲ್ಲಿ ಅಂಬಿಗನಾದರೂ ಪ್ರವೃತ್ತಿಯಲ್ಲಿ ವಚನಕಾರರಾಗಿ ಕನ್ನಡಕ್ಕೆ ಸಾಕಷ್ಟು ವಚನಗಳನ್ನು ನೀಡಿದ್ದಾರೆ. ಅವರ ಸನ್ಮಾರ್ಗದಲ್ಲೇ ಇಂದಿನ ಜನರು ನಡೆಯಬೇಕಿದೆ ಎಂದು ಪ್ರತಿಪಾದಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಎನ್.ಎಸ್.ಎಸ್. ಘಟಕದ ವಿದ್ಯಾ, ಜಿಲ್ಲಾ ಮೊಗವೀರ ಸಂಘದ ಅಧ್ಯಕ್ಷ ದಿನೇಶ್ ಎರ್ಮಾಳು, ವಿದ್ಯಾರ್ಥಿ ನಾಯಕಿಯರಾದ ನಿಷ್ಮಾ, ಪ್ರೀತಿ ಇದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿದರು. ಕಾತ್ಯಾಯಿನಿ ನಿರೂಪಿಸಿದರು. ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ನಿಕೇತನ ವಂದಿಸಿದರು.

ವಚನಕಾರರ ಜಯಂತಿ ಆಚರಿಸುವ ಮೂಲಕ ಅವರ ಚಿಂತನೆಗಳನ್ನು ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು
ಕೆ.ವಿದ್ಯಾಕುಮಾರಿ ಜಿಲ್ಲಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.