ಶಿರಸಿ: ‘ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ ನಡುವೆ ಎರಡೂವರೆ ವರ್ಷಗಳ ಅಧಿಕಾರ ಹಂಚಿಕೆಯ ಕರಾರಾಗಿಲ್ಲ. ಹಾಗಾಗಿ ಇನ್ನೂ ಎರಡುವರೆ ವರ್ಷ ಸಿದ್ದರಾಮಯ್ಯ ಅವರೇ ಶಾಸಕಾಂಗ ನಾಯಕರಾಗಿರುತ್ತಾರೆ. ಅಲ್ಲದೇ ಸಿಎಂ ಆಗಿ ಮುಂದುವರೆಯುತ್ತಾರೆ’ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಸ್ಪಷ್ಟಪಡಿಸಿದರು.

ಶನಿವಾರ ನಗರದಲ್ಲಿ ಮಾಧ್ಯಮವದರ ಪ್ರಶ್ನೆಗೆ ಉತ್ತರಿಸಿ, ‘ಅಭಿಮಾನಿಗಳು ಡಿ.ಕೆ.ಶಿವಕುಮಾರ ಸಿಎಂ ಆಗಲಿ ಎಂದು ಹೇಳಿದ್ದಾರೆ ಬಿಟ್ಟರೆ ಸ್ವತಃ ಡಿ.ಕೆ. ಅವರು ತಾನು ಸಿಎಂ ಆಗುತ್ತೇನೆಂದು ಹೇಳಿಲ್ಲ. ಎರಡುವರೆ ವರ್ಷ ನಾನು, ಎರಡುವರೆ ವರ್ಷ ನೀನು ಎಂಬ ಕರಾರು ಕೂಡ ಮಾಡಿಕೊಂಡಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಶಾಸಕಾಂಗ ನಾಯಕರನ್ನು ತೀರ್ಮಾನ ಮಾಡುವವರು ಶಾಸಕರು ಮತ್ತು ಪಕ್ಷದ ವರಿಷ್ಠರು. ಡಿ.ಕೆ.ಶಿವಕುಮಾರ ಮುಖ್ಯಮಂತ್ರಿ ಆಗಬಾರದು ಎಂದು ಯಾರೂ ಹೇಳಿಲ್ಲ. ಸಮಯ ಬಂದಾಗ ಆಗುತ್ತಾರೆ. ಹಾಗಾಗಿ ನನ್ನ ಪ್ರಕಾರ ಸಿದ್ದರಾಮಯ್ಯ ಐದು ವರ್ಷಕ್ಕೆ ಆಯ್ಕೆ ಮಾಡಿದ್ದೇವೆ. ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ’ ಎಂದರು.

‘ಸಿಎಂ ಬದಲಾವಣೆ ಅಧ್ಯಾಯ ಮುಗಿದಿದ್ದು, ಡಿ.8ರಿಂದ ಅಧಿವೇಶನ ಪ್ರಾರಂಭಗೊಳ್ಳುತ್ತದೆ. ಉಳಿದಿರುವ ಅವಧಿಯಲ್ಲಿ ರಾಜ್ಯಕ್ಕೆ ಒಳ್ಳೆಯ ಆಡಳಿತ ನೀಡುವುದಕ್ಕೆ ಸಿಎಂ ಸಿದ್ದರಾಮಯ್ಯ ತೀರ್ಮಾನ ಮಾಡಿದ್ದಾರೆ. ಅಭಿವೃದ್ಧಿಗೆ ಹಣಕಾಸಿನ ಕೊರೆತಿಲ್ಲ. ಜಿಎಸ್ಟಿ ಇಳಕೆ ಮಾಡಿರುವುದು ರಾಜ್ಯದ ಪಾಲಿಗೆ ನಷ್ಟವಾಗಿದೆ. ಆದರೆ ಬಡವರಿಗೆ ಒಳ್ಳೆಯದಾಗಿದೆ. ಆದರೆ ಹಳೆಯ ಜಿಎಸ್ಟಿ ನಿಯಮ ಇದ್ದಿದ್ದರೆ ರಾಜ್ಯಕ್ಕೆ 15 ಸಾವಿರ ಕೋಟಿ ಹೆಚ್ಚುವರಿಯಾಗಿ ಬರುತ್ತಿತ್ತು. ತೆರಿಗೆ ಸಂಗ್ರಹದಲ್ಲಿ ದೇಶದಲ್ಲಿ ರಾಜ್ಯ ಎರಡನೆ ಸ್ಥಾನದಲ್ಲಿದೆ. ಆರ್ಥಿಕ ತೊಂದರೆ ಇಲ್ಲ. ನಮ್ಮ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ’ ಎಂದರು.
.Leadership Row | ಸಿದ್ಧಾಂತ ಗಾಳಿಗೆ ತೂರಿದ ಸಿದ್ದರಾಮಯ್ಯ: ವಿ.ಸೋಮಣ್ಣ .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.