ಹೈದರಾಬಾದ್: ಇತ್ತೀಚೆಗೆ ಬಿಡುಗಡೆಗೊಂಡ ಪುಷ್ಪ–2 ಚಿತ್ರ ಪ್ರದರ್ಶನ ವೇಳೆ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಟಾಲಿವುಡ್ ನಟ ಅಲ್ಲು ಅರ್ಜುನ್ ಅವರನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ.

ಹೈದರಾಬಾದ್ನ ಅವರ ನಿವಾಸದಿಂದಲೇ ಬಂಧಿಸಲಾಗಿದೆ ಎಂದು ತೆಲುಗು ಮಾಧ್ಯಮಗಳು ವರದಿ ಮಾಡಿವೆ.
.ಪುಷ್ಪ-2 ಪ್ರೀಮಿಯರ್ ಶೋ ವೇಳೆ ನೂಕುನುಗ್ಗಲು; ತಾಯಿ ಸಾವು, ಮಗುವಿಗೆ ಗಾಯ.
ಹೈದರಾಬಾದ್ನಲ್ಲಿ ಡಿ.4ರಂದು ಪುಷ್ಪ–2 ಪ್ರೀಮಿಯರ್ ಪ್ರದರ್ಶನದ ವೇಳೆ 35 ವರ್ಷದ ಮಹಿಳೆ ಮೃತಪಟ್ಟಿದ್ದು, ಆಕೆಯ ಎಂಟು ವರ್ಷದ ಮಗ ಗಾಯಗೊಂಡಿದ್ದ. ಹೈದರಾಬಾದ್ನಲ್ಲಿರುವ ಸಂಧ್ಯಾ ಚಿತ್ರಮಂದಿರದಲ್ಲಿ ಘಟನೆ ನಡೆದಿತ್ತು. ಈ ಸಂಬಂಧ ಮೃತ ಮಹಿಳೆಯ ಕುಟುಂಬ ಸದಸ್ಯರು ಡಿ.5 ರಂದು ಚಿತ್ರಮಂದಿರದ ಆಡಳಿತ ಮಂಡಳಿ, ಅಲ್ಲು ಅರ್ಜುನ್ ಹಾಗೂ ಅವರ ಭದ್ರತಾ ತಂಡದ ವಿರುದ್ಧ ಚಿಕ್ಕಡಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪ್ರಕರಣದ ವಿಚಾರಣೆ ವೇಳೆ ಪೊಲೀಸರು ಮೂವರನ್ನು ಬಂಧಿಸಿದ್ದರು.
.ಕಾಲ್ತುಳಿತ ದುರಂತ: FIR ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ನಟ ಅಲ್ಲು ಅರ್ಜುನ್.ತಮ್ಮ ವಿರುದ್ಧದ FIRರದ್ದುಗೊಳಿಸುವಂತೆ ಹೈಕೋರ್ಟ್ ಮೆಟ್ಟಿಲೇರಿದ ನಟ ಅಲ್ಲು ಅರ್ಜುನ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.